Thursday, March 4, 2021

ಮದುವೆಗೆ ಹೊರಟವರಲ್ಲಿ ನಾಲ್ವರು  ಮಸಣಕ್ಕೆ;ಉಳಿದ 14ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ..!

ಮದುವೆಗೆ ಹೊರಟವರಲ್ಲಿ ನಾಲ್ವರು  ಮಸಣಕ್ಕೆ;ಉಳಿದ 14ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ..!

ಹಾಸನ: ಇಂದು ಬೆಳ್ಳಂಬೆಳಗ್ಗೆ  ಟಾಟಾಸುಮೋ ಮತ್ತು ಕ್ವಾಲಿಸ್ ಕಾರು ಮುತ್ತಿಕ್ಕಿ ಭೀಕರಹಾಸನ ನಗರದ ಹೊರವಲಯದಲ್ಲಿರುವ ಕೆಂಚಟ್ಟಳ್ಳಿ ಬಳಿಯ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.  ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಾಟಾ ಸುಮೋ ಗಾಡಿಗೆ ಹಿಂದಿನಿಂದ ಕ್ವಾಲಿಸ್ ಕಾರೊಂದು ಡಿಕ್ಕಿ ಹೊಡೆದಿದೆ. ಕ್ವಾಲಿಸ್ ಕಾರಿನಲ್ಲಿ ಮದುವೆಗೆ ತೆರಳುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಅಲ್ಲದೆ ಸುಮೋದಲ್ಲಿದ್ದ 10ಜನರಿಗೂ ಗಾಯಗಳಾಗಿದ್ದು, ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕೆಂಚಟ್ಟಳ್ಳಿ ಬಳಿ ಇದ್ದ ಹಂಪ್ಸ್ ಬಳಿ ಟಾಟಾ ಸುಮೋ ಚಾಲಕ ವಾಹನವನ್ನು ನಿಧಾನಗೊಳಿಸಿದ್ದು, ಹಿಂದಿನಿಂದ ವೇಗವಾಗಿ ಬಂದ ಕ್ವಾಲೀಸ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿದ್ದವರ ಸ್ಥಿತಿ ಗಂಭೀರವಾಗಿದೆ. ಟಾಟಾ ಸುಮೋದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಟಾಟಾ ಸುಮೋದಲ್ಲಿದ್ದ ಪ್ರಯಾಣಿಕರು ಮುಳಬಾಗಿಲು ಮೂಲದವರಾಗಿದ್ದು ಧರ್ಮಸ್ಥಳಕ್ಕೆ ತೆರಳುವವರೆಂದು ತಿಳಿದುಬಂದಿದೆ. ಕ್ವಾಲಿಸ್ ಕಾರಿನಲ್ಲಿದ್ದವರು ಕೆ.ಜಿ ಎಫ್ ನವರಾಗಿದ್ದು ಮದುವೆಗಾಗಿ ಉಡುಪಿಗೆ ತೆರಳುತ್ತಿದ್ದರು. ಇವರಲ್ಲಿ ಸುನಿಲ್ ಕುಮಾರ್, ನವೀನ್ ಕುಮಾರ್, ಪ್ರದೀಪ್ ಕುಮಾರ್ ಹಾಗೂ ಚಂದ್ರಶೇಖರ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...