Connect with us

    LATEST NEWS

    ಅಮೆರಿಕದಲ್ಲಿ ನಾಲ್ಕು ಪೆಪ್ಸಿಕೋ ಫ್ಯಾಕ್ಟರಿಗೆ ಬೀಗ – ಉದ್ಯೋಗ ನಷ್ಟ

    Published

    on

    ನ್ಯೂಯಾರ್ಕ್: ಪೆಪ್ಸಿಕೋ ತನ್ನ ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ಪ್ರಯತ್ನಗಳ ಭಾಗವಾಗಿ ನಾಲ್ಕು ಯುಎಸ್ ಬಾಟ್ಲಿಂಗ್ ಪ್ಲಾಂಟ್‌ಗಳನ್ನು ಮುಚ್ಚಲು ಮತ್ತು ಸುಮಾರು 400 ಕಾರ್ಮಿಕರನ್ನು ವಜಾಗೊಳಿಸಲು ಯೋಜಿಸಿದೆ ಎಂದು ಬುಧವಾರ ಹೇಳಿದೆ.

    ಷೇರು ವಿನಿಮಯ ಕೇಂದ್ರಕ್ಕೆ ಪೆಪ್ಸಿಕೋ ನೀಡಿದ ಮಾಹಿತಿ ಪ್ರಕಾರ ಅಮೆರಿಕದ ಸಿನ್ಸಿನಾಟಿ, ಚಿಕಾಗೋ, ಪೆನ್​ಸಿಲ್ವೇನಿಯಾ ಮತ್ತು ಅಟ್ಲಾಂಟಾದ ಬಾಟ್ಲಿಂಗ್ ಯೂನಿಟ್​ಗಳು ಮುಚ್ಚಲ್ಪಡುತ್ತಿವೆ ಎಂದು ಹೇಳಲಾಗಿದೆ. ಮುಚ್ಚಲಾಗುತ್ತಿರುವ ನಾಲ್ಕು ಘಟಕಗಳ ಪೈಕಿ ಚಿಕಾಗೋ ಯೂನಿಟ್ ಪೂರ್ಣವಾಗಿ ಬಂದ್ ಆಗುತ್ತದೆ.

    ಇನ್ನುಳಿದ ಮೂರು ಘಟಕಗಳಲ್ಲಿ ಬಾಟ್ಲಿಂಗ್ ಯೂನಿಟ್ ಮಾತ್ರವೇ ಮುಚ್ಚಲಾಗುತ್ತದೆ. ಅಮೆರಿಕದಲ್ಲಿ 75ಕ್ಕೂ ಹೆಚ್ಚು ಬಾಟ್ಲಿಂಗ್ ಘಟಕಗಳನ್ನು ಹೊಂದಿದೆ. ಹೀಗಾಗಿ, ನಾಲ್ಕು ಘಟಕಗಳನ್ನು ಮುಚ್ಚುತ್ತಿರುವುದು ಕಂಪನಿಗೆ ಆಘಾತಕಾರಿ ಸಂಗತಿಯಲ್ಲ. ಬಿಸಿನೆಸ್ ಕಡಿಮೆ ಆಗುತ್ತಿರುವ ಕಾರಣ, ಅದನ್ನು ಸರಿದೂಗಿಸಲು ಮತ್ತು ಅನಗತ್ಯ ವೆಚ್ಚ ಕಡಿಮೆ ಮಾಡಲು ಬಾಟ್ಲಿಂಗ್ ಪ್ಲಾಂಟ್ಸ್ ಮುಚ್ಚುತ್ತಿದೆ ಎಂದು ಹೇಳಲಾಗಿದೆ.

    FILM

    ಪಂಚಭೂತಗಳಲ್ಲಿ ಲೀನರಾದ ಗುರುಪ್ರಸಾದ್; ಬ್ರಾಹ್ಮಣ ವಿಧಿಯಂತೆ ಅಂತ್ಯಸಂಸ್ಕಾರ.!

    Published

    on

    ಮಂಗಳೂರು/ ಬೆಂಗಳೂರು: ಖ್ಯಾತ ನಟ, ನಿರ್ದೇಶಕ ಗುರುಪ್ರಸಾದ್‌ ಶವ ಮಾಡನಾಯಕನ ಹಳ್ಳಿ ದಾಸನಪುರ ರಸ್ತೆಯಲ್ಲಿರ ನೇಣು ಬಿಗಿದ ಸ್ಥಿತಿಯಲ್ಲಿ ಇಂದು (ನ.2) ಪತ್ತೆಯಾಗಿತ್ತು.

    ಗುರುಪ್ರಸಾದ್‌ ಅವರ ಮೃತದೇಹವನ್ನು ಮೊದಲಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು.

    ವಿಲ್ಸನ್‌ ಗಾರ್ಡನ್‌ ಚಿತಾಗಾರದಲ್ಲಿ ಬ್ರಾಹ್ಮಣ ವಿಧಿಯಂತೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದು, ಈ ವೇಳೆ ಗುರುಪ್ರಸಾದ್ ಅವರ ಸಹೋದರ ಹರಿಪ್ರಸಾದ್, ಎರಡನೇ ಪತ್ನಿ ಸುಮಿತ್ರಾ , ಮೊದಲ ಪತ್ನಿ ಆರತಿ ಮತ್ತು ಕುಟುಂಬಸ್ಥರು ಭಾಗಿಯಾಗಿದ್ದರು.

    ಇದನ್ನು ಓದಿ:ಸಾಲಗಾರರ ಕಿರುಕುಳಕ್ಕೆ ಬೇಸತ್ತು ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

    ಖ್ಯಾತ ಚಿತ್ರ ನಿರ್ದೇಶಕ ಯೋಗರಾಜ್ ಭಟ್, ನಟರಾದ ದುನಿಯಾ ವಿಜಯ್, ಡಾಲಿ ಧನಂಜಯ್ , ತಬಲಾ ನಾಣಿ, ಸತೀಶ್ ನೀನಾಸಂ ಮೊದಲಾದವರು ಅಂತಿಮ ವಿಧಿ ವೇಳೆ ಹಾಜರಿದ್ದರು.

    ‘ಸಾಲ ಭಾದೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜಿಗುಪ್ಪೆಯಿಂದ 3-4 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಪತ್ನಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

    Continue Reading

    DAKSHINA KANNADA

    ಕಿನ್ನಿಗೋಳಿ: ರೈತನ ಮೇಲೆ ಚಿರತೆ ದಾಳಿ.!

    Published

    on

    ಕಿನ್ನಿಗೋಳಿ: ದನಗಳಿಗೆ ಮೇವು ತರಲು ಹೋದ ರೈತರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಕಿನ್ನಿಗೋಳಿ ಸಮೀಪದ ಎಳತ್ತೂರಿನಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಾಯಗೊಂಡ ರೈತನನ್ನು ಎಳತ್ತೂರು ದೇವಸ್ಥಾನದ ಬಳಿಯ ನಿವಾಸಿ ಲಿಗೋರಿ ಪಿರೇರಾ ಎಂದು ಗುರುತಿಸಲಾಗಿದೆ.

    ಭಾನುವಾರ ಬೆಳಿಗ್ಗೆ 9.30ರ ಸಂದರ್ಭ ಮನೆಯ ಹತ್ತಿರ ದನಗಳಿಗೆ ಹುಲ್ಲು ಕೊಯ್ಯುತ್ತಿದ್ದ ಸಂದರ್ಭ ಚಿರತೆಯೊಂದು ಲಿಗೋರಿಯವರ ಮೇಲೆ ಏಕಾಏಕಿ ದಾಳಿ ಮಾಡಿದ್ದು, ಈ ಸಂದರ್ಭ ಲಿಗೋರಿಯವರು ಸಮೀಪದಲ್ಲೇ ಇದ್ದ ಕೋಲನ್ನು ಚಿರತೆಯತ್ತ ಬೀಸಿದ್ದು ಚಿರತೆ ಕಾಡಿನತ್ತ ಓಡಿದೆ ಎನ್ನಲಾಗುತ್ತಿದೆ.

    ಲಿಗೋರಿಯವರ ಮುಖಕ್ಕೆ ಮತ್ತು ಬೆನ್ನಿಗೆ ಚಿರತೆ ಉಗುರು ತಾಗಿ ಗಾಯಗಳಾಗಿವೆ ಎಂದು ಲಿಗೋರಿ ಮಗ ಜೈಸನ್ ತಿಳಿಸಿದ್ದಾರೆ. ವಾರದ ಹಿಂದೆ ಜೈಸನ್ ಅವರು ಬೈಕಿನಲ್ಲಿ ಹೋಗುವಾಗ ತಾಳಿಪಾಡಿ ಬೀಡು ಬಳಿ ಚಿರತೆ ಸಿಕ್ಕಿತ್ತು ಎಂದು ಕೂಡ ಅವರು ತಿಳಿಸಿದ್ದಾರೆ. ಕಟೀಲು ದುರ್ಗಾಸಂಜೀವನಿ ಆಸ್ಪತ್ರೆಯಲ್ಲಿ ಲಿಗೋರಿ ಪಿರೇರ ಅವರು ಚಿಕಿತ್ಸೆ ಪಡೇಯುತ್ತಿದ್ದಾರೆ.

    ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಚಿರತೆ ಓಡಾಟದ ಬಗ್ಗೆ ಜನರು ಅಲರ್ಟ್ ಆಗಿದ್ದು, ಎಳತ್ತೂರು ಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಕೃಷಿಕರು ನೆಲೆಸಿದ್ದು ಇಂದು (ನ.೦೩) ನಡೆದ ಚಿರತೆ ದಾಳಿ ಗ್ರಾಮಸ್ಥರನ್ನ ಭಯಭೀತರನ್ನಾಗಿಸಿದೆ. ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

    Continue Reading

    LATEST NEWS

    ಉಡುಪಿ : ಪ್ರಿಯಕರನೊಂದಿಗಿನ ಚಕ್ಕಂದಕ್ಕೆ ಅಡ್ಡಿಯಾಗಿದ್ದ ಮಗುವಿಗೆ ತಾಯಿಯಿಂದ ಹ*ಲ್ಲೆ; ಜಾಮೀನು ಅರ್ಜಿ ವಜಾ

    Published

    on

    ಉಡುಪಿ : ಮೂರೂವರೆ ವರ್ಷ ಮಗುವಿನ ಮೇಲೆ ತಾಯಿ ಹಾಗೂ ಆಕೆಯ ಪ್ರಿಯಕರ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನ್ಯಾಯಾಲಯ ತಿರಸ್ಕರಿಸಿದೆ.

    ಪೂರ್ಣಪ್ರಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಮಗುವಿನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳು. ಸೆ.13ರಂದು ಈ ದುರ್ಘಟನೆ ಸಂಭವಿಸಿದೆ.

    ಹಲ್ಲೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನೇ ತಾಯಿ, ಅನಾರೋಗ್ಯದ ಕಾರಣ ನೀಡಿ ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದಳಾದರೂ ಮಗುವಿನ ಮೇಲಾದ ಗಾಯದ ಬಗ್ಗೆ ತಾಯಿ ಪೂರ್ಣ ಪ್ರಿಯಾ ಯಾವುದೇ ಮಾಹಿತಿ ನೀಡಿರಲಿಲ್ಲ.

    ಮಗುವಿನ ಮೇಲಾದ ಗಾಯಗಳಿಂದ ಅನುಮಾನಗೊಂಡ ಜಿಲ್ಲಾ ಆಡೋಗ್ಯಾಧಿಕಾರಿ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು.  ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿತ್ತು.  ಚಿಕಿತ್ಸೆ ಪಡೆದು ಚೇತರಿಸಿಕೊಂಡ ಮಗುವನ್ನ8ಉ ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

    ಬಳಿಕ , ಮಗುವಿನ ಮೇಲೆ ತಾಯಿ ಹಾಗೂ ಪ್ರಿಯಕರ ಹ*ಲ್ಲೆ ನಡೆಸಿರುವ ವಿಚಾರ ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಅಮಾಸೆಬೈಲು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮೊದಲಿಗೆ ಮಗು ಜಾರಿಬಿದ್ದು ಗಾಯಗೊಂಡಿದೆ ಎಂದು ಹೇಳಿದ್ದ ತಾಯಿ ಪೂರ್ಣ ಪ್ರಿಯಾ ಆದರೆ ತೀವ್ರ ವಿಚಾರಣೆ ಬಳಿಕ ತಪ್ಪು ಒಪ್ಪಿಕೊಂಡಿದ್ದರು.

    ಪೂರ್ಣ ಪ್ರಿಯಾಳ ಗಂಡ ಇತ್ತೀಚೆಗಷ್ಟೆ ನಿಧನರಾಗಿದ್ದರು. ಆ ಬಳಿಕ ಪ್ರಿಯಕರ ಸುಹೇಲ್‌ ಜೊತೆಗೆ ನಿಕಟ ಸಂಪರ್ಕದಲ್ಲಿದ್ದಳು. ಅವನು ಬಂದ ವೇಳೆ ಮಗು ಮಂಚದ ಮೇಲೆ ಮಲಗಿದ್ದ ಕಾರಣಕ್ಕೆ ಪಾಪಿ ತಾಯಿ ಹಾಗೂ ಪ್ರಿಯಕರ ಕುಪಿತಗೊಂಡು ಮಗುವಿನ ಮೇಲೆ ಅಮಾನುಷ ಹಲ್ಲೆ ನಡೆಸಿ ಬಂಧನಕ್ಕೆ ಒಳಗಾಗಿದ್ದರು.

    ಅ.24ರಂದು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಆರೋಪಿಗಳು ಶರಣಾಗಿದ್ದು, ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಆದರೆ ಪ್ರಕರಣದ ಗಂಭೀರತೆ ಮನಗಂಡು ಇದೀಗ ಎರಡನೆ ಹೆಚ್ಚುವರಿ ಸಿವಿಲ್‌ ಕೋರ್ಟ್‌ ಜೆಎಂಎಫ್‌ಸಿಯಲ್ಲಿ ಇಬ್ಬರ ಮಧ್ಯಂತರ ಜಾಮೀನು ಅರ್ಜಿ ನ್ಯಾಯಾಲಯ ವಜಾಗೊಳಿಸಿದೆ.

    Continue Reading

    LATEST NEWS

    Trending