Connect with us

    LATEST NEWS

    ಜನವರಿಯ ನಾಲ್ಕು ವಾರ ಬಾಹ್ಯಾಕಾಶದಲ್ಲಿ ವಿಸ್ಮಯದ ಪರೇಡ್..!

    Published

    on

    ಮಂಗಳೂರು/ನವದೆಹಲಿ : 2025ರ ಜನವರಿ 21 ರಿಂದ ಫೆಬ್ರವರಿ 21 ರ ನಡುವೆ ಗ್ರಹಗಳ ಪರೇಡ್ ನಡೆಯಲಿದ್ದು, ಬರೀ ಕಣ್ಣಿಗೆ ಈ ವಿಸ್ಮಯ ಗೋಚರವಾಗಲಿದೆ. ಸೂರ್ಯನನ್ನು ಸುತ್ತುವ ಹಲವು ಗ್ರಹಗಳು ಮಿಲಿಟರಿ ಪರೇಡ್ ನಂತೆ ಸಾಲಾಗಿ ಕಾಣಿಸಿಕೊಳ್ಳಲಿವೆ. ತೀರಾ ಅಪರೂಪಕ್ಕೆ ಒಮ್ಮೆ ಈ ರೀತಿಯ ಘಟನೆ ನಡೆಯುತ್ತಿದ್ದು, ಈ ಬಾರಿ ಸೂರ್ಯ ಮಂಡಲದ ಆರು ಗ್ರಹಗಳು ಸಾಲಾಗಿ ಸೂರ್ಯನ ನೇರಕ್ಕೆ ಬರಲಿವೆ.

    ಪ್ಲಾನೆಟ್ರಿ ಪರೇಡ್ ಅಥವಾ ಪ್ಲಾನೆಟ್ರಿ ಅಲೈನ್ಮೆಂಟ್ ಎಂದು ಕರೆಯಲಾಗುವ ಈ ವಿಸ್ಮಯದಲ್ಲಿ ಎರಡಕ್ಕಿಂತ ಹೆಚ್ಚು ಗ್ರಹಗಳು ಒಂದೇ ಸಾಲಿನಲ್ಲಿ ಬರುತ್ತವೆ. ಸಾಮಾನ್ಯವಾಗಿ ಸೂರ್ಯನಿಗೆ ಸುತ್ತವ ಗ್ರಹಗಳು ಬೇರೆ ಬೇರೆ ದಿಕ್ಕಿನಲ್ಲಿ ಇದ್ದು ಈ ಸಮಯದಲ್ಲಿ ಸೂರ್ಯನ ಒಂದೇ ಭಾಗದಲ್ಲಿ ಒಂದೇ ನೇರದಲ್ಲಿ ಕೆಲ ಕಾಲ ಹಾದು ಹೋಗುತ್ತವೆ. ಈ ಬಾರಿ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್, ಯೂರೆನಸ್ ಗ್ರಹಗಳು ಒಂದೇ ನೇರಕ್ಕೆ ಬರಲಿವೆ. ಈ ವೇಳೆ ಬುಧ ಗ್ರಹ ಕೂಡ ಕಾಣಿಸಲಿದ್ದು, ಈ ಆರು ಗ್ರಹಗಳು ಕಾಣಿಸಿಕೊಂಡ ಕೆಲ ಸಮಯದ ಬಳಿಕ ಕಾಣಸಲಿವೆ. ಆದರೆ, ಇವುಗಳಲ್ಲಿ ಮಂಗಳ, ಗುರು , ಶುಕ್ರ, ಶನಿ ಈ ನಾಲ್ಕು ಗ್ರಹಗಳನ್ನು ಬರೀ ಕಣ್ಣಿನಿಂದ ನೋಡಬಹುದಾಗಿದೆ. ನೆಫ್ಚೋನ್ ಹಾಗೂ ಯೂರೆನಸ್ ಗ್ರಹಗಳನ್ನು ದೂರದರ್ಶಕದ ಮೂಲಕ ವೀಕ್ಷಿಸಬಹುದಾಗಿದೆ.

    ಇದನ್ನೂ ಓದಿ : ಆ್ಯಂಬುಲೆನ್ಸ್‌ಗೆ ದಾರಿ ಬಿಡದ ಕಾರು ಡ್ರೈವರ್‌ಗೆ ಶಾ*ಕ್ ಕೊಟ್ಟ ಆರ್‌ಟಿಒ ಅಧಿಕಾರಿಗಳು

    2025 ರ ಜನವರಿ 21 ರಿಂದ ಸರಿ ಸುಮಾರು ನಾಲ್ಕು ವಾರಗಳ ಕಾಲ ಈ ವಿಸ್ಮಯ ಕಾಣಸಿಗಲಿದ್ದು, ಪ್ರತಿ ನಿತ್ಯ ಸೂರ್ಯಾಸ್ತದ ಬಳಿಕ ರಾತ್ರಿ 8 ಗಂಟೆಯ ನಂತರ ರಾತ್ರಿ 11 ರ ತನಕ ಕಾಣಿಸಲಿವೆ. ಮಂಗಳ ಗುರು ಹಾಗೂ ಯೂರೆನಸ್ ಗ್ರಹಗಳನ್ನು ಬಹಳ ಸಮಯದ ವರೆಗೆ ನೋಡಬಹುದಾಗಿದೆ. ಜನವರಿ 29 ರಂದು ಈ ಗ್ರಹಗಳನ್ನು ಸರಿಯಾಗಿ ವೀಕ್ಷಿಸಲು ಸೂಕ್ತ ಸಮಯವಾಗಿದ್ದು, ಅಂದು ಎಲ್ಲವೂ ಕೂಡ ಒಂದೇ ನೇರದಲ್ಲಿ ಬಹಳ ಹೊತ್ತು ಕಾಣಿಸಿಕೊಳ್ಳಲಿವೆ.

    ಈ ವಿಸ್ಮಯ ಇದೇ ಮೊದಲು ಘಟಿಸುತ್ತಿರುವುದು ಅಲ್ಲದೇ ಇದ್ರೂ ಈ ಬಾರಿ ಇದು ತುಂಬಾ ಹೊತ್ತು ಕಾಣ ಸಿಗುವುದರ ಜೊತೆಗೆ ಜಗತ್ತಿನ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರವಾಗುತ್ತಿರುವುದು ವಿಶೇಷವಾಗಿದೆ. ಬೆಟ್ಟಗುಡ್ಡಗಳು ಅಡ್ಡ ಇಲ್ಲದ ಮೈದಾನ ಪ್ರದೇಶದಲ್ಲಿ ನಿಂತು ನೋಡಿದರೆ ಈ ವಿಸ್ಮಯ ಸ್ಪಷ್ಟವಾಗಿ ಗೋಚರವಾಗಲಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

    Published

    on

    ಮಂಗಳೂರು: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಬಹಳಷ್ಟು ಪ್ರಯತ್ನ ಪಡುತ್ತಿದ್ದಾರೆ. ಪಡುಬಿದ್ರಿಯ ಮಹಾಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಈ ಸಿನಿಮಾ ಯಶಸ್ಸು ಕಾಣಲಿ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತೀವ ಸಂತಸವಾಗುತ್ತಿದೆ“ ಎಂದು ಶುಭ ಹಾರೈಸಿದರು.

    ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ತುಳು ಚಿತ್ರರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ 9 ಸಿನಿಮಾಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಒಳ್ಳೊಳ್ಳೆ ಸಿನಿಮಾಗಳನ್ನು ಜನರು ಖಂಡಿತ ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು, ಚಿತ್ರತಂಡಕ್ಕೆ ಶುಭವಾಗಲಿ“ ಎಂದರು.

    ಕುಸೆಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ, ”ಸಿನಿಮಾ ಯಶಸ್ಸು ಕಾಣಲಿ. ತುಳುನಾಡಿನಲ್ಲಿ ಸಿನಿಮಾ ಒಳ್ಳೆಯ ಹೆಸರು ಮಾಡಲಿ“ ಎಂದರು.

    ನಾಯಕ ನಟ ಶೋಧನ್ ಶೆಟ್ಟಿ ಮಾತನಾಡಿ, ”2019ರಲ್ಲಿಯೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ನಿಮ್ಮೆಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬರಲಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಲಾಂಚ್ ಮಾಡಲಿದ್ದೇವೆ“ ಎಂದರು.

    ದೇವಸ್ಥಾನದ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಉಮೇಶ್ ಶೆಟ್ಟಿ, ನಟ ಶೋಧನ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಡಾ ಪ್ರತೀಕ್ಷಾ, ಡಾ ನಿಖಿಲ್ ಶೆಟ್ಟಿ, ಸಂಜಯ್ ಶೆಟ್ಟಿ ಗೋಣಿಬೀಡು, ಡಾ ವೈಎನ್ ಶೆಟ್ಟಿ, ಮಿಥುನ್, ನವೀನ್ ಚಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಕುಳಾಯಿ, ವಿಠಲ್ ಶೆಟ್ಟಿ ಕನಕಪಾಡಿ, ಶಾಂತಾರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಉದ್ಯಮಿ ಪಲ್ಲವಿ ಸಂತೋಷ್ ಶೆಟ್ಟಿ ಕೆಮರಾ ಚಾಲನೆ ಮಾಡಿದರು. ಶಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ ಕುರಿತು:

    ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು ಸಂದೀಪ್ ಉಡುಪಿ ಕೆಮರಾ ಕಣ್ಣಲ್ಲಿ ಸಿನಿಮಾ ಮೂಡಿಬರಲಿದೆ. ರವಿರಾಜ್ ಗಾಣಿಗ ಎಡಿಟರ್, ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ ಸಿನಿಮಾಕ್ಕಿರಲಿದೆ.

    ಕಲಾವಿದರಾಗಿ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಬಣ್ಣ ಹಚ್ಚಲಿದ್ದಾರೆ. ಕಟೀಲು, ಪಡುಬಿದ್ರಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

    Continue Reading

    LATEST NEWS

    ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??

    Published

    on

    ‘ಶಬರಿಮಲೆ’ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರೋದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಕೆಲವರು ಮಂಡಲ ದೀಕ್ಷಾ, ಇನ್ನು ಕೆಲವರು ಅರ್ಥ ಮಂಡಲ ದೀಕ್ಷಾ ತೆಗೆದುಕೊಳ್ಳುತ್ತಾರೆ. 41 ದಿನಗಳ ದೀಕ್ಷೆ ಪಡೆದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದು ಬಂದ ಬಳಿಕ ಪೂಜೆಯೊಂದಿಗೆ ಅಯ್ಯಪ್ಪ ಮಾಲೆಯನ್ನು ತೆಗೆಯುತ್ತಾರೆ.

    ಪ್ರತಿವರ್ಷ ಭಕ್ತಿಯಿಂದ ಮಾಲೆ ಧರಿಸಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಸ್ವಾಮಿಗಳಿಗೆ ಒಂದೊಂದು ಹೆಸರಿನಿಂದ ಕರೆಯಲಾಗುತ್ತದೆ ಎಂಬ ವಿಷಯ ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ. ಸಾಮಾನ್ಯವಾಗಿ ಐದಕ್ಕಿಂತ ಹೆಚ್ಚು ಬಾರಿ ಮಾಲೆ ಧರಿಸಿ ಅಯ್ಯಪ್ಪನ ದರ್ಶನ ಪಡೆದವರನ್ನು ‘ಗುರು ಸ್ವಾಮಿ’ ಎನ್ನಲಾಗುತ್ತದೆ.
    ಇದಕ್ಕೆ ಹೊರತಾಗಿ ಪ್ರತಿವರ್ಷ ಮಾಲೆ ಹಾಕಿದವರನ್ನು ಒಂದೊಂದು ಹೆಸರುಗಳಿಂದ ಕರೆಯಲಾಗುತ್ತದೆ. ಆ ಹೆಸರುಗಳು ಯಾವುದ್ಯಾವುದು ಎಂಬ ವಿವರ ಇಲ್ಲಿವೆ.

     

    18 ವರ್ಷಗಳಿಂದ ಮಾಲೆ ಹಾಕುವ ಸ್ವಾಮಿಗಳ ಹೆಸರು :

    ಮೊದಲನೇ ಬಾರಿಗೆ ದೀಕ್ಷೆ ಪಡೆದುಕೊಂಡ ಸ್ವಾಮಿಗಳನ್ನು ಕನ್ನೆಸ್ವಾಮಿ ಎಂದು ಕರೆಯಲಾಗುತ್ತದೆ. ಎರಡನೇ ಬಾರಿಗೆ ಮಾಲೆ ಹಾಕಿದ ಸ್ವಾಮಿಗಳನ್ನು ಕತ್ತಿಸ್ವಾಮಿ, ಮೂರನೇ ಬಾರಿಗೆ ಮಾಲೆ ಹಾಕಿದವರನ್ನು ಗಂಟ ಸ್ವಾಮಿ, ನಾಲ್ಕನೇ ಬಾರಿಗೆ ಮಾಲೆ ಹಾಕಿದರೇ ಅವರನ್ನು ಗದಸ್ವಾಮಿ, ಆ ಬಳಿಕ ಮಾಲೆ ಹಾಕುವ ಸ್ವಾಮಿಗಳನ್ನು ಬಿಲ್ಲು ಸ್ವಾಮಿ, ಆರನೇ ಬಾರಿಗೆ ಮಾಲೆ ಹಾಕಿದ ಸ್ವಾಮಿಗಳನ್ನು ಜ್ಯೋತಿ ಸ್ವಾಮಿ, ಏಳನೇ ಬಾರಿಗೆ ಸೂರ್ಯ ಸ್ವಾಮಿ, ಎಂಟನೇ ಬಾರಿಗೆ ಚಂದ್ರ ಸ್ವಾಮಿ, ಒಂಬತ್ತನೇ ಬಾರಿಗೆ ಮಾಲೆ ಹಾಕಿದವರನ್ನು ವೇಲು ಸ್ವಾಮಿ, ಹತ್ತನೇ ಬಾರಿಗೆ ಮಾಲೆ ಹಾಕಿದರೆ ಅವರನ್ನು ವಿಷ್ಣು ಚಕ್ರ ಸ್ವಾಮಿ ಎಂದು ಕರೆಯಲಾಗುತ್ತದೆ. ಹನ್ನೊಂದನೇ ಬಾರಿಗೆ ಮಾಲೆ ಹಾಕಿದರೆ ಶಂಖಾದರ ಸ್ವಾಮಿ, ಹನ್ನೆರಡನೇ ಬಾರಿಗೆ ಮಾಲೆ ಹಾಕಿದವರನ್ನು ನಾಗಾಭರಣ ಸ್ವಾಮಿ, ಬಳಿಕ ಹದಿಮೂರನೇ ಬಾರಿಗೆ ಮಾಲೆ ಹಾಕುವ ಸ್ವಾಮಿಗಳನ್ನು ಶ್ರೀಹರಿ ಸ್ವಾಮಿ, ಹದಿನಾಲ್ಕನೇ ಬಾರಿಗೆ ಮಾಲೆ ಹಾಕುವ ಸ್ವಾಮಿಗಳನ್ನು ಪದ್ಮಸ್ವಾಮಿ, ಹದಿನೈದನೇ ಬಾರಿಗೆ ಮಾಲೆ ಹಾಕುವ ಸ್ವಾಮಿಗಳನ್ನು ತ್ರಿಶೂಲಸ್ವಾಮಿ ಎಂದು ಹೇಳಲಾಗುತ್ತದೆ.ಹದಿನಾರನೇ ಬಾರಿಗೆ ಮಾಲೆ ಹಾಕಿದರೆ ಅಂತಹ ಸ್ವಾಮಿಯನ್ನು ಶಬರಿಗಿರಿಸ್ವಾಮಿ, ಹದಿನೇಳನೇ ಬಾರಿಗೆ ಮಾಲೆ ಹಾಕುವ ಸ್ವಾಮಿಯನ್ನು ಓಂಕಾರ ಸ್ವಾಮಿ, ಹದಿನೆಂಟನೇ ಬಾರಿಗೆ ಮಾಲೆ ಹಾಕಿದರೆ ಅವರನ್ನು ನಾರಿಕೇಳಸ್ವಾಮಿ ಎಂದು ಕರೆಯಲಾಗುತ್ತದೆ.

    Continue Reading

    LATEST NEWS

    ‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ

    Published

    on

    ನವದೆಹಲಿ: ಓಲಾ ಎಲೆಕ್ಟ್ರಿಕ್ ಸಂಸ್ಥೆಯೊಳಗಿನ ವಿವಿಧ ಪಾತ್ರಗಳಲ್ಲಿ 500 ಕ್ಕೂ ಹೆಚ್ಚು ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಪುನರ್ರಚನೆ ಉಪಕ್ರಮವನ್ನ ಪ್ರಾರಂಭಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಮಾರ್ಜಿನ್ಗಳನ್ನು ಸುಧಾರಿಸುವ ಮತ್ತು ಲಾಭದಾಯಕತೆಯನ್ನ ಸಾಧಿಸುವ ಕಾರ್ಯತಂತ್ರದ ಭಾಗವಾಗಿ ಕಂಪನಿಯು ಈ ವಜಾಗಳನ್ನ ಜಾರಿಗೆ ತರುತ್ತಿದೆ ಎಂದು ವರದಿ ತಿಳಿಸಿದೆ.

     

    ಅಂದ ಹಾಗೆ , ಭವಿಶ್ ಅಗರ್ವಾಲ್ ನೇತೃತ್ವದ ಸಂಸ್ಥೆಯು ತನ್ನ ಐಪಿಒಗೆ ಮುಂಚಿತವಾಗಿ ಸೆಪ್ಟೆಂಬರ್ 2022ರಲ್ಲಿ ಎರಡು ಪುನರ್ರಚನೆ ಅಭ್ಯಾಸಗಳನ್ನ ನಡೆಸಿತು. ಈ ಅಭ್ಯಾಸಗಳ ಸಮಯದಲ್ಲಿ, ವಿವಿಧ ಲಂಬಗಳಲ್ಲಿ ಕಾರ್ಯಾಚರಣೆಗಳನ್ನ ಕೇಂದ್ರೀಕರಿಸುವ ಮತ್ತು ಸುವ್ಯವಸ್ಥಿತಗೊಳಿಸುವ ಗುರಿಯನ್ನ ಹೊಂದಿರುವ ಹೊಸ ನೇಮಕಾತಿಗಳ ಸರಣಿಯನ್ನ ಅದು ಘೋಷಿಸಿತು.

    Continue Reading

    LATEST NEWS

    Trending