Connect with us

DAKSHINA KANNADA

ಮೂರು ದಿನ ಕಳೆದರೂ ಇನ್ನೂ ಪತ್ತೆಯಾಗದ ಫಾದರ್ ಮುಲ್ಲರ್ ಆಸ್ಪತ್ರೆ ಡೀನ್ ಉರ್ಬನ್ ಡಿಸೋಜಾ..!

Published

on

ಮಂಗಳೂರು : ಮಂಗಳೂರಿನ ಫಾದರ್ ಮುಲ್ಲರ್  ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಡೀನ್ ಉರ್ಬನ್ ಡಿಸೋಜಾ ನಾಪತ್ತೆಯಾಗಿ ಮೂರು ದಿನ ಕಳೆದಿದೆ.

ಆದ್ರೆ ಇದುವರೆಗೂ ಅವರ ಇರುವಿಕೆ ಖಾತ್ರಿ ಪಡಿಸಲು ಮಂಗಳೂರು ಪೊಲೀಸರಿಗೆ ಸಾಧ್ಯವಾಗಿಲ್ಲ.

ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಭಾನುವಾರ ತಡರಾತ್ರಿ ಉಬ್ಬನ್ ಪತ್ನಿ ಪತಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ.

ನಗರದ ವಾಲೆನ್ಸಿಯಾ ನಿವಾಸದಿಂದ ಸೆಪ್ಟೆಂಬರ್ 25 ರ ಭಾನುವಾರ ಸಂಜೆ ಅಂಗಡಿಗೆ ಹೋಗಿ ಬರುವುದಾಗಿ ಹೆಂಡತಿಗೆ ತಿಳಿಸಿ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದರು.

ಆದ್ರೆ ತಡರಾತ್ರಿಯಾದರೂ ಮತ್ತೆ ವಾಪಾಸ್ ಬಾರದ ಮತ್ತು ಮೊಬೈಲ್ ಫೋನ್ ಸ್ವಿಚ್ ಆಫ್ ಬರುತ್ತಿರುವ ಕಾರಣ ಪತ್ನಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಸ್ತುತ ಉರ್ಬನ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಉಳ್ಳಾಲ ಬೀಚ್‌ ಬಳಿ ಕೊನೆಯ ಟವರ್ ಲೊಕೇಶನ್ ತೋರಿಸಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ ಜೊತೆಗೆ ಎಲ್ಲಾ ಆಯಾಮಗಳಿಂದಲೂ  ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending