Wednesday, February 8, 2023

ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ಲಕ್ಷಾಂತರ ರೂ ವಂಚನೆ: ದೂರು

ಉಡುಪಿ: ಉಡುಪಿ ಸಂಸದೆ ಹಾಗೂ ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ವ್ಯಕ್ತಿಯೊಬ್ಬ ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದು, ಈ ಸಂಬಂಧ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


‘ಸಚಿವರ ಆಪ್ತ ಸಹಾಯಕ ವರುಣ್ ಆದಿತ್ಯ ಅವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಶೋಭಾ ಕರಂದ್ಲಾಜೆ ಅವರ ಆಪ್ತನೆಂದು ಹೇಳಿಕೊಂಡು ರಾಜ್ಯ ಹಾಗೂ ಹೊರ ರಾಜ್ಯಗಳ ಹಲವು ಜಮೀನ್ದಾರರಿಗೆ ಕರೆ ಮಾಡಿದ್ದ ಆರೋಪಿ,

ನಾನಾ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಜಮೀನ್ದಾರರೊಬ್ಬರು ಸಚಿವರಿಗೆ ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ. ವಂಚನೆಗೆ ಬಳಸಿದ್ದ ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿ ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.

LEAVE A REPLY

Please enter your comment!
Please enter your name here

Hot Topics