Connect with us

DAKSHINA KANNADA

ಅ.14ರಂದು ಆತ್ಮಶಕ್ತಿ ಮುಡಿಪು ಶಾಖೆಯಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

Published

on

ಮಂಗಳೂರು: ಮುಡಿಪು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘದಿಂದ ಮುಡಿಪು ಕಟ್ಟೆ ಫ್ರೆಂಡ್ಸ್, ಬಾಳೆಪುಣಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಹಾಗೂ ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಅ.14ರ ಶನಿವಾರದಂದು ಮುಡಿಪು ಅಮ್ಮೆಂಬಳದ ಗೋಪಾಲಕೃಷ್ಣ ಸಭಾಗೃಹದಲ್ಲಿ ನಡೆಯಲಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ಶಿಕ್ಷಣ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ಸೇವೆಗಳು ಲಭ್ಯ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending