Connect with us

    DAKSHINA KANNADA

    ದ.ಕ ಜಿಲ್ಲೆಯವರಿಗೆ ಉಚಿತ ಪೊಲೀಸ್‌ ತರಬೇತಿ: ನಾಳೆಯಿಂದ ದಾಖಲಾತಿ ಆರಂಭ

    Published

    on

    ಇತ್ತೀಚಿನ ದಿನಗಳಲ್ಲಿ ದ.ಕ ಜಿಲ್ಲೆಯಿಂದ ಪೊಲೀಸ್‌ ಇಲಾಖೆಗೆ ನೇಮಕಾತಿ ಹೊಂದುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಒಂದು ತಿಂಗಳ ಕಾರ್ಯಗಾರವನ್ನು ಮಂಗಳೂರು ನಗರ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದೆ.


    ಇದರಲ್ಲಿ ಪೊಲೀಸ್ ಇಲಾಖೆಗೆ ಇತ್ತೀಚಿನ ತಂಡಗಳಲ್ಲಿ ನೇಮಕಾತಿ ಹೊಂದಿದ ಪಿ.ಎಸ್.ಐ ಹಾಗೂ ಸಿಬ್ಬಂದಿಗಳನ್ನೊಳಗೊಂಡ ನುರಿತ ತಂಡ ಒಂದು ತಿಂಗಳ ಕಾಲ ತರಬೇತಿಯನ್ನು ನೀಡಲಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.
    1. ವಿಳಾಸದ ಬಗ್ಗೆ ಅಧಿಕೃತ ದಾಖಲಾತಿಯನ್ನು ಸಲ್ಲಿಸುವುದು,
    2. ಯಾವುದೇ ಘಟಕದಲ್ಲಿ ಎಸ್‌ಐ/ಪಿಸಿ ನೇಮಕಾತಿಯ ಇಟಿ/ಪಿಎಸ್‌ಟಿ (ಫಿಸಿಕಲ್ ಟೆಸ್ಟ್) ನಲ್ಲಿ ಉತ್ತೀರ್ಣಗೊಂಡ ಬಗ್ಗೆ ದಾಖಲಾತಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
    3 ಅಭ್ಯರ್ಥಿಗಳು RTPCR ನೆಗೆಟೀವ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವುದು
    4 ದ.ಕ ಜಿಲ್ಲೆಯವರಿಗೆ ಮೊದಲ ಆದ್ಯತೆಯಿದ್ದು, ನಂತರದಲ್ಲಿ ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು,
    5 ಇದು ಕ್ರಾಸ್ ಕೋರ್ಸ್ ರೀತಿಯ 30 ದಿನಗಳ ಕಾರ್ಯಾಗಾರವಾಗಿದ್ದು, ಮರುಷ ಮತ್ತು ಮಹಿಳಾ ಆಕಾಂಕ್ಷಿಗಳೆಲ್ಲರಿಗೂ ಅವಕಾಶವಿರುತ್ತದೆ.
    6 ಮೊದಲನೇ ಹಂತದಲ್ಲಿ 100 ಅಭ್ಯರ್ಥಿ ಆಕಾಂಕ್ಷಿಗಳಿಗೆ ತರಬೇತಿಯನ್ನು ನೀಡಲಾಗುವುದು.

    7 ಊಟ ಮತ್ತು ವಸತಿ ಸೌಲಭ್ಯ ಉಚಿತವಾಗಿದ್ದು, ಕಡ್ಡಾಯವಾಗಿ ನಿಗದಿಪಡಿಸಿದ ಸ್ಥಳದಲ್ಲಿಯೇ ವಾಸ್ತವ್ಯವಿರುವುದು. (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ)
    8. ತರಗತಿ-ತರಬೇತಿ-ಓದುವುದು ಮುಂಜಾನೆ 08.00 ಗಂಟೆಯಿಂದ ರಾತ್ರಿ 08.00 ಗಂಟೆಯವರೆಗೆ ಕಡ್ಡಾಯವಾಗಿದ್ದು, ಅಭ್ಯರ್ಥಿಗಳು ಇಲ್ಲೇ ಇದ್ದು ಸಕ್ರಿಯವಾಗಿ ಪಾಲ್ಗೊಳ್ಳುವುದು,
    9. ಅವಶ್ಯಕ ಅಧ್ಯಯನ ಸಾಮಾಗ್ರಿಗಳನ್ನು ವೈಯುಕ್ತಿಕವಾಗಿ ಅಭ್ಯರ್ಥಿಗಳೇ ಖರೀದಿ ಮಾಡಬೇಕು,
    ಈ ಪ್ರಕಾರ ತರಬೇತಿಗೆ ಆಸಕ್ತಿ ಇಚ್ಛೆ ಹೊಂದಿರುವ ಆಕಾಂಕ್ಷಿಗಳು, ಸೋಮವಾರ ದಿ:09.08.2021 ರಿಂದ ಮಂಗಳೂರು ಪೊಲೀಸ್ ಕಮೀಷನರ ಕಛೇರಿಯಲ್ಲಿ ತೆರೆಯಲಾಗುವ REGISTRATION DESK ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಸಬಹುದು. ಈ ಕಾರಾಗಾರಕ್ಕೆ ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿಯು ವಾಸ್ತವ್ಯ, ಕ್ಲಾಸ್ ರೂಂ ಮತ್ತು ಲೈಬ್ರೇರಿಯ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಆಸಕ್ತ ಆಕಾಂಕ್ಷಿಗಳು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಈ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳಬಹುದು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending