BANTWAL
ಕಳಚಿದ ಸ್ವಾತಂತ್ರ್ಯ ಹೋರಾಟದ ಕೊಂಡಿ : ಬಂಟ್ವಾಳದ ಎಂ.ಡಿ.ಶ್ಯಾಮರಾವ್ ವಿಧಿವಶ..!
ಕಳಚಿದ ಸ್ವಾತಂತ್ರ್ಯ ಹೋರಾಟದ ಕೊಂಡಿ : ಬಂಟ್ವಾಳದ ಎಂ.ಡಿ.ಶ್ಯಾಮರಾವ್ ವಿಧಿವಶ..!
ಬಂಟ್ವಾಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ (97) ಮಂಗಳವಾರ ಬೆಳಿಗ್ಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನವರಾದ ಇವರ ಕಳೆದ ಕೆಲವು ಸಮಯಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಶಿವಮೊಗ್ಗದ ಮಗನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.ತಮ್ಮ ಜೀವಿತದ ಬಹು ವರ್ಷಗಳನ್ನು ಶಿವಮೊಗ್ಗದಲ್ಲಿ ಕಳೆದಿದ್ದರೂ , ಇವರು ಮೂಲತಃ ಬಂಟ್ವಾಳ ತಾಲೂಕಿನ ಬಿಸಿರೋಡಿನವರು. ಕಲಿತದ್ದು ೭ನೇ ತರಗತಿವರೆಗೆ. ಆದರೆ ಕನ್ನಡ,
ತಮಿಳು, ಹಿಂದಿ, ಇಂಗ್ಲಿಷ್, ತೆಲುಗು… ಹೀಗೆ ಪಂಚಭಾಷೆ ಬಲ್ಲವರು.ವಿದ್ಯಾರ್ಥಿ ದೆಸೆಯಿಂದಲೇ ಬಾವುಟ ಹಿಡಿಯುವುದು, ಜೈಕಾರ ಕೂಗುವುದು, ಕರಪತ್ರ ಹಂಚುವುದು ಮೊದಲಾದ ಹುಡುಗಾಟಿಕೆಗಳಿಂದ ಕ್ರಾಂತಿಕಾರಿಯೆಂದು ಗುರುತಿಸಿಕೊಂಡಿದ್ದ ಇವರು
೧೯೪೨ರ ಬಳಿಕ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.
1923 ರಲ್ಲಿ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದಲ್ಲಿ ಜನಿಸಿದ ಶ್ಯಾಮರಾಯ ಆಚಾರ್ಯರು ಎಂ.ಡಿ.ಶ್ಯಾಮರಾವ್ ಎಂದೇ ಪ್ರಸಿದ್ಧರು. ಬಂಟ್ವಾಳ ಮಂಗಳೂರು ಮುಖ್ಯ ರಸ್ತೆಯ ಪಕ್ಕದಲ್ಲಿ ಇದ್ದ ಇವರ ಮನೆಯ ಮುಂದೆ ಹಾದು ಹೋಗುತ್ತಿದ್ದ ಸ್ವಾತಂತ್ರ್ಯ ಚಳುವಳಿಗಾರರ ಸಾಲುಸಾಲು ಹಾಗೂ ಪೊಲೀಸರ ಮಾರ್ಚ್ ಫಾಸ್ಟ್ ಸಣ್ಣ ವಯಸ್ಸಿನ ಶ್ರೀ ಶಾಮರಾಯರಿಗೆ ಪ್ರೇರಣೆಯಾದವು.
ಹುಡುಗಾಟಿಕೆಯಲ್ಲಿ ತನ್ನದೇ ಸ್ನೇಹಿತರ ಗುಂಪು ಕಟ್ಟಿ ತಂದೆಯವರಿಗೆ ಗೊತ್ತಾಗದಂತೆ, ಚಳುವಳಿಗಳ ಸಮಯದಲ್ಲಿ, ಬ್ರಿಟೀಷರ ದೂರವಾಣಿ ಲೈನ್ ಗಳನ್ನು ಕಟ್ ಮಾಡುವುದರಿಂದ ಶುರುವಾಗಿದ್ದು , ಮುಂದೆ ಚಳುವಳಿಗಾರರಿಗೆ ಗುಪ್ತ ವಾಗಿ ಮಾಹಿತಿ ತಲುಪಿಸುವ ಸಂವಾಹಕನ ಕೆಲಸವನ್ನೂ ಮಾಡಿದವರು. ಚಳುವಳಿಗಾರರಿಗೆ ಪೊಲೀಸರ , ಸೈನ್ಯದ ಬರುವಿಕೆಯ ಸೂಚನೆ ಕೊಡುವುದು, ಸೇತುವೆಗಳ ಕಲ್ಲು ತೆಗೆದು ಗರ್ನಲ್ ಗಳನ್ನು ಇಟ್ಟು ಸಿಡಿಸುವುದು , ಮುಂತಾದ ಹುಡುಗಾಟಿಕೆಯ ಅಳಿಲು ಸೇವೆಯನ್ನು ದೇಶಪ್ರೇಮ ದಿಂದಲೇ ಮಾಡಿದರು.
ಈ ಹುಡುಗನ ದೇಶಪ್ರೇಮ ಊರು ತುಂಬಾ ಹರಡಿ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾಯ್ತು. ತಂದೆಯ ಗಮನಕ್ಕೆ ಬಂದಾಗ ಊರು ಬಿಟ್ಟು , 3 , 4 ದಿನ ನಡೆದು ಹೋಗಿ ಸೇರಿದ್ದು ಕರ್ಮ ಭೂಮಿ ಶಿವಮೊಗ್ಗೆಗೆ.ಬಳಿಕ ತಮ್ಮ ಹೆಸರನ್ನು ಶ್ಯಾಮ ರಾವ್ ಎಂದು ಹೇಳಿ ಕೊಂಡು, ತಂದೆಯವರಿಂದ ದೂರ ಉಳಿದ ಇವರು ಸ್ವಾತಂತ್ರ್ಯ ಚಳುವಳಿಯಲ್ಲಿ ಅಡೆತಡೆಯಿಲ್ಲದೆ ತಮ್ಮನ್ನು ತಾವು ತೊಡಗಿಸಿಕೊಂಡರು.
ಅಂದಿನ ಕಾಂಗ್ರೇಸ್ ಸೇವಾದಳಕ್ಕೆ ಸೇರಿಕೊಂಡು ಗುಪ್ತವಾಗಿ ವಿವಿಧೆಡೆ ನಡೆಯುವ ಚಳುವಳಿಗಳ ಆಯೋಜನೆಗಳಲ್ಲಿ ಸಹಾಯ ಮಾಡುವುದು, ಸಂದೇಶಗಳನ್ನು ರವಾನಿಸುವುದು , ಹೀಗೆ ಯುವಕನಾಗಿ ತಮ್ಮನ್ನು ತೊಡಗಿಸಿಕೊಂಡರು. ಈ ಸಮಯದಲ್ಲಿ ಅನೇಕ ಮಹನೀಯರ ಒಡನಾಟ ಇವರಿಗೆ ದೊರಕಿತು. ಗೋಪಾಲ ಗೌಡರು, ರವಳಪ್ಪ, ದೊರೆಸ್ವಾಮಿ ಅಯ್ಯಂಗಾರ್, ಪೊನ್ನಮ್ಮ, ಎಂ.ಪಿ. ಈಶ್ವರಪ್ಪ, ಲಾಯರ್ ಸಿದ್ದಯ್ಯ, ನಾಗಪ್ಪ ಶೆಟ್ಟಿ, ಖಾದಿ ಶಂಕರಪ್ಪ ಮುಂತಾದವರ ಒಡನಾಟ ಬೆಳೆಯಿತು.
1946 ರಲ್ಲಿ ಬಂಧಿತರಾಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಜೈಲು ಶಿಕ್ಷೆ ಗೆ ಒಳಗಾದರು.ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ ಕಾರ್ಯವನ್ನು ಮುಂದುವರೆಸಿಕೊಂಡ ಇವರು,ಗಾಂಧೀಜಿ ಯವರು ಹಾಕಿಕ್ಕೊಟ್ಟ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡರು.
ಸ್ವಂತವಾಗಿ ಹಿಂದಿ ಕಲಿತು, ಹಿಂದಿಯನ್ನು ದೇಶದ ಸಂಪರ್ಕ ಭಾಷೆ ಮಾಡುವ ಗಾಂಧೀಜಿಯವರ ಕನಸಿನಂತೆ , ಶಿವಮೊಗ್ಗದ ಗಾಂಧಿ ಮಂದಿರದಲ್ಲಿ ಸಾವಿರಾರು ಜನರಿಗೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮೂಲಕ ಯಾವುದೇ ಶುಲ್ಕವಿಲ್ಲದೇ ಹಿಂದಿ ಪಾಠ ಮಾಡಿದರು. ಇವರ ಶಿಷ್ಯರಲ್ಲಿ ಅನೇಕರು ಮುಂದೆ ಶಿವಮೊಗ್ಗದ ಹಿಂದಿ ಶಿಕ್ಷಕರಾಗಿ , ವಿದ್ವಾಂಸರಾಗಿ ಹೋಗಿರುವುದು ವಿಶೇಷ. ಈಗಿನ ಗಾಂಧಿ ಮಂದಿರಕ್ಕೆ ಇವರೇ ನಾಮಕರಣ ಮಾಡಿದ್ದು, ಮುಂದೆ ಅದುವೇ ಚಾಲನೆಯಲ್ಲಿ ಉಳಿದದ್ದು ವಿಶೇಷ,. 1960 ರಲ್ಲಿ ರಾಜೀವಿಯವರನ್ನು ಮದುವೆಯಾದ ನಂತರ ಜೀವನೋಪಾಯಕ್ಕಾಗಿ ಮಾಡಿದ್ದು, ಟೈಪ್ ರೈಟರ್ ರಿಪೇರಿ , ಮೆಡಿಕಲ್ equipment ರಿಪೇರಿಗಳನ್ನು. ಆ ಸಮಯದಲ್ಲಿ ಬಾಂಬೆ ಮತ್ತು ಬೆಂಗಳೂರಿನಿಂದ ತಂತ್ರಜ್ಞರು ಬರ ಬೇಕಾಗಿದ್ದ ಸಂಧರ್ಭದಲ್ಲಿ, ಅವರ ಕೆಲಸಗಳನ್ನು ಸ್ವತಃ ಕಲಿತು , ಸೇವಾ ಮನೋಭಾವದಿಂದ ಕೆಲಸ ಮಾಡಿ ಜನರ ಪ್ರೀತಿಗೆ ಪಾತ್ರರಾದರು. ಬೆರಳಚ್ಚು ಯಂತ್ರ, ಹೊಲಿಗೆ
ಯಂತ್ರ, ಕಲ್ಲಚ್ಚು, ಆಟೋಮೀಟರ್, ಸೂಕ್ಷ್ಮ ದರ್ಶಕ, ದೂರದರ್ಶಕ ಮೊದಲಾದ ಸೂಕ್ಷ್ಮ ಯಂತ್ರಗಳನ್ನು ದುರಸ್ತಿ
ಮಾಡುವ ಇವರು ಸಣ್ಣ ಇಂಜಿನಿಯರ್ರೂ ಆಗಿದ್ದಾರೆ. ಆಸ್ಪತ್ರೆಗಳಲ್ಲಿನ ಆರೋಗ್ಯ ಸಂಬಂಧಿ ಹಳೇ ಯಂತ್ರಗಳ ರಿಪೇರಿಗಾಗಿ ಶಿವಮೊಗ್ಗದ ಕೆಲ ವೈದ್ಯರು ಇತ್ತೀಚಿನವರೆಗೂ ಇವರ ನೆರವು ಪಡೆಯುತ್ತಿದ್ದರು. ಅಂಬರ ಚರಕದಲ್ಲಿ ನೂಲು ತೆಗೆಯುವುದರಲ್ಲಿ ವಿಶೇಷ ಪರಿಣತಿಯನ್ನು ಹೊಂದಿದ ಇವರು,ಮನೆಮನೆಗೆ ತೆರಳಿ ಚರಕದಿಂದ ಇವರು ನೂಲು ತೆಗೆಯುವ ತರಬೇತಿ ನೀಡಿದ್ದಾರೆ. ಚಿನ್ನದ
ಕೆಲಸದಲ್ಲೂ ವಿಶೇಷ ಪ್ರಾವಿಣ್ಯತೆ ಹೊಂದಿದ್ದ ಇವರು ಹೋರಾಟದ ಆ ದಿನಗಳಲ್ಲಿ ರಾತ್ರಿ ಹೊತ್ತು ತನ್ನ ಅಣ್ಣ ಪುಟ್ಟಣ್ಣ ಆಚಾರ್ ರೊಂದಿಗೆ ಚಿನ್ನದ ಕೆಲಸ ಮಾಡಿಕೊಂಡಿದ್ದರು.ಇವರ ದೇಶ ಪ್ರೇಮಿ ಬದುಕನ್ನು ಗೌರವಿಸಿ ಈಗಾಗಲೇ ನಾಡಿನ ಹಲವಾರು ಸಂಘ ಸಂಸ್ಥೆಗಳು ಶ್ಯಾಮ್ ರಾವ್ ರವರನ್ನು ಗೌರವಿಸಿದೆ.
ಶಿವಮೊಗ್ಗದ ಕಾಳಿಕಾ ಪರಮೇಶ್ವರಿ ಸೊಸೈಟಿಯ ಪ್ರಾರಂಭದ ಕಮಿಟಿ ಸದಸ್ಯ , ಹಾಗೂ ಶಿವಮೊಗ್ಗದಲ್ಲಿ ಸತ್ಯ ಸಾಯಿ ಮಂದಿರ ಹುಟ್ಟು ಹಾಕಿದವರಲ್ಲಿ ಒಬ್ಬರಾದ ಇವರು, ಲೋಕಾ ಸಮಸ್ತಾ ಸುಖಿನೋ ಭವಂತು ಎನ್ನುವ ವಾಕ್ಯವನ್ನು ತಮ್ಮ ಮಂತ್ರವನ್ನಾಗಿಸಿ , ಸೇವೆ ಸಲ್ಲಿಸಿದ ಮಹನೀಯರು.
ತಮ್ಮ ಆರು ಜನ ಮಕ್ಕಳೊಂದಿಗೆ , ಅಣ್ಣನ ಹಾಗೂ ಇತರ ದೂರದ ಊರಿನ ಅನೇಕ ವಿಶ್ವಕರ್ಮ ಜನಾಂಗದ ಮಕ್ಕಳಿಗೆ ಆಶ್ರಯದಾತರಾಗಿ ಮಾದರಿ ಬದುಕನ್ನು ಕಟ್ಟಿಕೊಂಡವರು.
ಎಂತೆಂಥಾ ಕಷ್ಟದ ಸನ್ನಿವೇಶಗಳ ನಡುವೆಯೂ ಸ್ವಾಭಿಮಾನಿಯಾಗಿ ಮಾದರಿ ಜೀವನ ನಡೆಸಿ ಇಂದು ಇಹಲೋಕ ಅಗಲಿದ್ದಾರೆ. ಮೃತರು ಪತ್ನಿ ರಾಜೀವಿ, ಪುತ್ರ ಸತೀಶ್ ಹಾಗೂ ಐದುಮಂದಿ ಹೆಣ್ಣುಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!