Connect with us

    ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

    Published

    on

    ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

    ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌ ಮಾಡದೇ ಇದ್ದಲ್ಲಿ ಮುಂದಿನ ಆರು ತಿಂಗಳಿನಲ್ಲಿ ಇದು ಅತಿರೇಕಕ್ಕೆ ಹೋಗಲಿದೆ ಎಂದು ಶಾಸಕ ಮಾಜಿ ಅರೋಗ್ಯ ಸಚಿವ ಯು ಟಿ ಖಾದರ್ ಎಚ್ಚರಿಸಿದ್ದಾರೆ.

    ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಮ್ಯುನಿಟಿ ಸ್ಪ್ರೆಡ್ ಆಗಿರುವುದನ್ನು ಸಚಿವ ಮಾಧುಸ್ವಾಮಿ ಅವರೇ ಅಧಿಕೃತವಾಗಿ ಒಪ್ಪಿದ್ದಾರೆ. ಆದರೆ ಈ ಬಗ್ಗೆ ಅಧಿಕೃತವಾಗಿ ಹೇಳಲು ಸರಕಾರದ ಮಟ್ಟದಲ್ಲಿಯೇ ಗೊಂದಲ ಇದೆ.

    ಬೆಂಗಳೂರಿನಲ್ಲಿ ಬಿಬಿಎಂಪಿ ರಾಂಡಮ್ ಟೆಸ್ಟ್ ಅರ್ಧಕ್ಕೆ ನಿಲ್ಲಿಸಿದ್ದು ವಿಪರೀತಕ್ಕೆ ಕಾರಣವಾಗಿದೆ . ಪಾಸಿಟಿವ್ ಆಗುವುದು ಹೆಚ್ಚುತ್ತಿದ್ದಾರೆಂದು ಟೆಸ್ಟಿಂಗ್ ನಿಲ್ಲಿಸಿದ್ರು . ಪಾಸಿಟಿವ್ ಹೆಚ್ಚುವುದೆಂದು ಸರಕಾರ ಯಾಕೆ ಭಯ ಪಡುತ್ತಿದೆ ಎಂದು ಖಾದರ್ ಪ್ರಶ್ನಿಸಿದರು.

    ಟೆಸ್ಟ್ ಮಾಡಿಲ್ಲ ಅಂತ ವೈರಸ್ ಹರಡುವುದು ನಿಲ್ಲುವುದಿಲ್ಲ. ರಾಜ್ಯದಲ್ಲಿ ಎರಡು ಲಕ್ಷದಷ್ಟು ಸರಕಾರಿ ಬೆಡ್ ಗಳಿದ್ದು ಭಯ ಪಡಬೇಕಿಲ್ಲ.

    ಸರಕಾರ ಅವೈಜ್ಞಾನಿಕ ಕೆಲಸ ಮಾಡಿದರೆ ಮೂರು ತಿಂಗಳಲ್ಲೇ ಕೊರೊನಾ ಅವಾಂತರ ಸೃಷ್ಟಿಸಲಿದೆ. ತನ್ನ ಮಂಗಳೂರು ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಟೆಸ್ಟ್ ಮಾಡಿಸುತ್ತೇನೆ.

    ದಾನಿಗಳಿಂದ ಆಂಬುಲೆನ್ಸ್ ಪಡೆದು ಕಾರ್ಯಪಡೆ ರಚಿಸುತ್ತೇನೆ. ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಮೂಲಕ ರಾಪಿಡ್ ಟೆಸ್ಟ್ ಆಗಬೇಕು ಎಂದವರು ಆಗ್ರಹಿಸಿದರು.

    ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಕ್ರಮಗಳು

    1.ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಹೆಲ್ಪ್‌ ಲೈನ್ ಪ್ರಾರಂಭಿಸುವ ಕುರಿತು ಸಭೆ
    2.ಹೆಲ್ಪ್ ಲೈನ್ ನಲ್ಲಿ ಜನರಿಗೆ ಕೋವಿಡ್ ಕುರಿತ ಸಂಪೂರ್ಣ ಮಾಹಿತಿ
    3.ಉಳ್ಳಾಲ ನಗರ ಸಭೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮುಖಾಂತರ 15 ವರ್ಷ ಮೇಲ್ಪಟ್ಟ 50 ವರ್ಷ ಒಳಗಿನ ಆರೋಗ್ಯವಂತ ಅಧಿಕೃತ ಸ್ವಯಂ ಸೇವಕರ ನೇಮಕ.
    4..ಉಳ್ಳಾಲದ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕೊರೊನಾ ಪರೀಕ್ಷೆ ಹಾಗೂ ಅನಾರೋಗ್ಯ ವ್ಯಕ್ತಿ,ಮಕ್ಕಳು ಹಾಗೂ ಹಿರಿಯರ ಪಟ್ಟಿ ಮಾಡಿ ಸರ್ವೇ ಮಾಡಲಾಗುವುದು.
    5.ರಾಪಿಡ್ ಟೆಸ್ಟ್ ಮೂಲಕ ಸೋಂಕಿತರನ್ನು ಗುರುತಿಸಲಾಗುವುದು.ಇವರಿಗೆ 3 ರೀತಿಯ ಚಿಕಿತ್ಸೆ ನೀಡುವ ಕುರಿತು ತಿಳಿಸಲಾಗುವುದು. ಖಾಸಗಿ ಆಸ್ಪತ್ರೆಯಲ್ಲಿ ಹಣ ಪಾವತಿಸಿ ಚಿಕಿತ್ಸೆ ಪಡೆಯುವವರು ಹಾಗೂ ವೆನ್ಲಾಕ್ ನಲ್ಲಿ ಕಾರಣಂತರದಿಂದ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಇದ್ದಲ್ಲಿ ಸರಕಾರದ ವತಿಯಿಂದ ಖರ್ಚು ಭರಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಮನೆಯಲ್ಲಿ ಸೋಂಕು ಹರಡದಂತೆ ಜಾಗರೂಕತೆಯಿಂದ ಐಸೋಲೇಷನ್ ಗೆ ಒಳಪಡುವವರಿಗೆ 3 ವಿಧದಲ್ಲಿ ಚಿಕಿತ್ಸೆ ನೀಡಲಾಗುವುದು.
    5.ದಾನಿಗಳ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಅವಶ್ಯಕವಾಗಿ ಬೇಕಾಗುವ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್‌ ಗೆ ಉರುಳಿದ ವಾಹನ; ಹಲವರಿಗೆ ಗಾಯ

    Published

    on

    ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

    ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.

    ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು

    ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

    Continue Reading

    DAKSHINA KANNADA

    ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ

    Published

    on

    ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

    ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.

    ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

    ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.

    Continue Reading

    FILM

    ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

    Published

    on

    ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.

    ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.

    ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.

    ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.

    ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್

    ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.

    ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.

     

    Continue Reading

    LATEST NEWS

    Trending