Connect with us

LATEST NEWS

ಗೆಳೆಯನಿಗೆ ಕಾರು ಕೊಟ್ಟು ಕೈ ಸುಟ್ಟುಕೊಂಡ..: ಕಾಪು ಠಾಣೆಯಲ್ಲಿ ಪ್ರಕರಣ ದಾಖಲು

Published

on

ಉಡುಪಿ: ಮದುವೆಗೆ ಹೋಗಲು ಸ್ನೇಹಿತನೊಬ್ಬನಿಗೆ ಕಾರು ಕೊಟ್ಟದ್ದನ್ನು ಹಿಂತಿರುಗಿಸದೇ ವಂಚನೆಗೈದ ಘಟನೆ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಘಟನೆ ವಿವರ
ಫ್ರಾನ್ಸಿಸ್ ಕಿರಣ ಲಸ್ರಾದೊ ಎಂಬುವವರು ತನ್ನ KA-20-MA-1488 ನೋಂದಣಿಯ ಕಾರನ್ನು ಸ್ನೇಹಿತ ಅಮೀರ ಸಾಹೇಬ್‌ಗೆ ಆಗಾಗ ಕೊಡುತ್ತಿದ್ದರು. ಅದೇ ರೀತಿ ಒಂದು ದಿನ ಮದುವೆ ಕಾರ್ಯಕ್ಕೆ ಹೋಗಲು ಫ್ರಾನ್ಸಿಸ್ ಕಿರಣ ಬಳಿ ಕಾರನ್ನು ಪಡೆದುಕೊಂಡಿದ್ದರು.

ಅದಾದ ಒಂದು ತಿಂಗಳ ಬಳಿಕ ಕಾರು ಹಿಂತಿರುಗಿಸದ್ದನ್ನು ಕಂಡು ಕಾರಿನ ಮಾಲೀಕ ಸ್ನೇಹಿತನ ಬಳಿ ಕೇಳಿದಾಗ ಆತ ಸ್ವಲ್ಪ ಹಣವನ್ನು ನೀಡಿ, ಮುಂಬೈಗೆ ಹೋಗಲು ಕಾರಿನ ಅಗತ್ಯವಿರುವುದಾಗಿ ತಿಳಿಸಿದ್ದರು. ಅದರಂತೆ ಕಾರಿನ ಮಾಲೀಕ ಒಪ್ಪಿಗೆ ಕೊಟ್ಟಿದ್ದರು.

ಸ್ನೇಹಿತ ಮುಂಬೈನಿಂದ ಬಂದ ನಂತರ ಮಾಲೀಕನಿಗೆ ಕಾರು ನೀಡದೇ ಸತಾಯಿಸಿದ್ದರು. ಮಾ.25 ರಂದು ಸ್ನೇಹಿತನ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಅಮೀರ ಸಾಹೇಬ್‌ಗೆ ಸಿದ್ದಿಕ್ ಎಂಬಾತನ ಜೊತೆ ಹಣಕಾಸಿನ ವ್ಯವಹಾರವಿದ್ದು,

ಹಣ ಪಾವತಿ ಮಾಡದ ಕಾರಣ ಅಮೀರ ಸಾಹೇಬ್‌ನ ಮನೆಯಲ್ಲಿದ್ದ ಫ್ರಾನ್ಸಿಸ್ ಕಿರಣ ಅವರ ಕಾರನ್ನು ತೆಗೆದುಕೊಂಡು ಹೋಗಿದ್ದಾನೆ.

ಸದ್ಯ ಆ ಕಾರು ಮಂಗಳೂರಿನ ಕೋಟೆಕಾರ್ ಎಂಬಲ್ಲಿ ಇದೆ. ಅಮೀರ ಸಾಹೇಬ್‌ ಹಣ ಪಾವತಿ ಮಾಡಿದ ನಂತರ ಕಾರನ್ನು ಹಿಂತಿರುಗಿಸುತ್ತೇನೆ ಎಂದು ಆತ ತಿಳಿಸಿದ್ದಾನೆ.
ಫ್ರಾನ್ಸಿಸ್ ಕಿರಣ ತನ್ನ ಕಾರನ್ನು ನಂಬಿಕೆಯಿಂದ ಅಮೀರ್‌ ಸಾಹೇಬ್‌ನಿಗೆ ನೀಡಿದ್ದು, ಅದನ್ನು ಹಿಂದಿರುಗಿಸದೇ ನಂಬಿಕೆ ದ್ರೋಹ ಮಾಡಿದ್ದಾನೆ.

ಹಾಗೂ ಸಿದ್ಧಿಕ್ ಈ ಕಾರನ್ನು ಯಾವುದೇ ಕಾನೂನು ಬಾಹಿರ ಕೃತ್ಯಗಳಿಗೆ ಬಳಸಿದ್ದರೆ ಅಮೀರ್‌ ಸಾಹೇಬ್‌ ಹೊಣೆಗಾರನಾಗಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಖಾಸಗಿ ದೂರಿನಂತೆ ಪ್ರಕರಣ ದಾಖಲಾಗಿದೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

LATEST NEWS

Trending