Tuesday, August 16, 2022

ಅಬುಧಾಬಿಯಲ್ಲಿ ಸೋಮವಾರದಿಂದ ರಾತ್ರಿ ಹೊರಹೋಗುವಂತಿಲ್ಲ

ಅಬುಧಾಬಿ: ಯುಎಇಯ ಅಬುಧಾಬಿಯಲ್ಲಿ  ಜು.19ರಿಂದ ಲಾಕ್‌ಡೌನ್ ಪ್ರಾರಂಭವಾಗಲಿದೆ ಎಂದು ಅಬುಧಾಬಿಯ ತುರ್ತು ಬಿಕ್ಕಟ್ಟು ಹಾಗೂ  ವಿಪತ್ತುಗಳ ಸಮಿತಿಯು ಘೋಷಿಸಿದೆ.


ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ರವರೆಗೆ ಲಾಕ್ ಡೌನ್ ಇರುತ್ತದೆ. ಈ ಸಮಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸ್ಯಾನಿಟೈಸರ್‌ ಸಿಂಪಡಣೆ ನಡೆಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಸೋಮವಾರದಿಂದ ಯುಎಇಯಲ್ಲಿ  ಸುದೀರ್ಘ ಈದ್ ಅಲ್-ಅಧಾ ರಜಾದಿನಗಳು ಪ್ರಾರಂಭವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಬುಧಾಬಿ ಪ್ರವೇಶಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಲಾಕ್ ಡೌನ್ ಘೋಷಿಸಲಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಕಂದಾವರ ನೂರುಲ್ ಇಸ್ಲಾಂ ಮಸ್ಜಿದ್‌- ಮದರಸದಲ್ಲಿ 75ರ ಸ್ವಾತಂತ್ರ್ಯ ಸಂಭ್ರಮ

ಮಂಗಳೂರು: ನೂರುಲ್ ಇಸ್ಲಾಂ ಮಸ್ಜಿದ್ ಮತ್ತು ಮದರಸ ಮೂಡುಕರೆ ಕಂದಾವರ ಇಲ್ಲಿ 75ನೇ ಸ್ವಾತಂತ್ರ್ಯವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ಗೌರವಧ್ಯಕ್ಷರಾದ ಎಂ ಎಸ್ ಅಲಿಯಬ್ಬ ಅವರು ಸಬೀಹ್ ಅಲಿ ಅವರಿಂದ ಗೌರವವಂದನೆಯನ್ನು ಸ್ವೀಕರಿಸಿ ಧ್ವಜಾರೋಹಣ...

ಬಿ.ಸಿ ರೋಡಿನ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಬಂಟ್ವಾಳ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ ರೋಡಿನ ವಿಜಯಲಕ್ಮೀ ಗ್ರೂಪ್ ವತಿಯಿಂದ ಬಾನೆತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು.20×30 ಅಳತೆಯ ರಾಷ್ಟ್ರ ಧ್ವಜವನ್ನು ಕ್ರೇನ್ ಮೂಲಕ ಸುಮಾರು 174 ಅಡಿ ಎತ್ತರದಲ್ಲಿ...

“ಇಂದು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಧ್ವಜವನ್ನು ಸುರಕ್ಷಿತವಾಗಿ ಮಡಚಿಡಿ”

ಮಂಗಳೂರು: ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ತ್ರಿವರ್ಣ ಧ್ವಜವನ್ನು ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.ಈ ಬಗ್ಗೆ...