Sunday, November 27, 2022

ಮುಂದಿನ ವರ್ಷ ಅ.1ರಿಂದ ಕಾರ್‌ನಲ್ಲಿ 6 ಏರ್‌ಬ್ಯಾಗ್ಸ್‌ ಕಡ್ಡಾಯ..!

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.


ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಟ್ವೀಟ್‌ ಮಾಡಿದ್ದು, ‘ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ನಿಯಮ ಕಡ್ಡಾಯ ಎಂಬ ಹೊಸ ಕಾಯ್ದೆ 2023ರ ಅಕ್ಟೋಬರ್ 1ರಿಂದ ಎಲ್ಲಾ ಕಾರು ಚಾಲಕರಿಗೆ ಅನ್ವಯಿಸುತ್ತದೆ.

ಕಾರಿನಲ್ಲಿ (M-1 Category) ಕನಿಷ್ಠ 6 ಏರ್‌ಬ್ಯಾಗ್‌ ಕಡ್ಡಾಯ. ಆಟೋ ಉದ್ಯಮವು ಎದುರಿಸುತ್ತಿರುವ ಜಾಗತಿಕ ಪೂರೈಕೆ ಸರಪಳಿ ನಿರ್ಬಂಧಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ’ ಎಂದಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...