Tuesday, January 31, 2023

ಇನ್ಮುಂದೆ ವಾಟ್ಸಾಪ್‌ನಲ್ಲಿ ವಾಯ್ಸ್‌ ಮೆಸೇಜ್ ಕೂಡಾ ಸ್ಟೇಟಸ್ ಹಾಕ್ಬೋದು…!

ಬೆಂಗಳೂರು: ಮೆಟಾ-ಮಾಲೀಕತ್ವದ ವಾಟ್ಸಾಪ್ ಈಗಾಗಲೇ ಅನೇಕ ಹೊಸ ಫೀಚರ್‌ಗಳನ್ನು ಪರಿಚಯಿಸಿದ್ದು ಇನ್ಮುಂದೆ ವಾಟ್ಸಾಪ್ ಸ್ಟೇಟಸ್‌ನಲ್ಲಿ 30 ಸೆಕೆಂಡಿನ ವಾಯ್ಸ್‌ ಮೆಸೇಜನ್ನು ಕೂಡಾ ಹಾಕಬಹುದಾಗಿದೆ. ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದ್ದು, ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಿಸಿಕೊಳ್ಳಲಿದೆ.


ಜನಪ್ರಿಯ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದ್ದು, ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಈ ಅಪ್ಲಿಕೇಶನ್ ಬಳಸುತ್ತಿದ್ದಾರೆ.

ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್ ದಿನಕ್ಕೊಂದು ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸ್​ಆ್ಯಪ್ ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಅನ್ನು ಪರಿಚಯಿಸಿದ ಬಳಿಕ ಸ್ಟೇಟಸ್ ನಲ್ಲಿ ವಾಯ್ಸ್ ನೋಟ್ ಹಾಕುವ ಫೀಚರ್ ಪರಿಚಯಿಸಲು ಮುಂದಾಗಿದೆ.

ಇದೀಗ ಮತ್ತೊಂದು ವೈಶಿಷ್ಟ್ಯವನ್ನು ಪರಿಚಯ ಮಾಡಿದೆ . ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದ್ದಾಗಿದ್ದು, ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ.

ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಾಗಿತ್ತು. ಆದರೆ ಇನ್ನೂ ಮುಂದೆ, ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ.

30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಮುಂದಿನ ವಾರದಿಂದಲೇ ಎಲ್ಲರಿಗೂ ಬಳಕೆಗೆ ಸಿಗಲಿದೆ ಎನ್ನಲಾಗುತ್ತಿದೆ. ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದ್ದು, ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ತೆರೆದಾಗ ಅಲ್ಲಿ ಬಳಕೆದಾರರಿಗೆ ಅವರದ್ದೇ ನಂಬರ್ ಕಾಣಸಿಗುತ್ತದೆ.

ಅದರ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸುವ ಹೊಸ ಫೀಚರ್ ದೊರೆಯಲಿದೆ. ಈ ಮೆಸೇಜ್ ಚಾಟ್ ಬಾಕ್ಸ್​ನಲ್ಲಿ ಬಳಕೆದಾರರಿಗೆ ಎಲ್ಲ ರೀತಿಯ ಆಯ್ಕೆ ದೊರೆಯಲಿದ್ದು, ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ರವಾನೆ ಮಾಡಬಹುದಾಗಿದೆ.

ಅಲ್ಲದೆ, ಅಗತ್ಯ ದಾಖಲೆಗಳನ್ನು ಕೂಡ ಸೇವ್ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here

Hot Topics

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...