Connect with us

DAKSHINA KANNADA

ರಾಜ್ಯದಲ್ಲಿ ನಾಳೆಯಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್: ಬಿಎಸ್ ವೈ

Published

on

ಬೆಂಗಳೂರು: ಶರವೇಗದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ನಾಳೆ ರಾತ್ರಿಯಿಂದ 14ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಬೆಳಗ್ಗೆ 6ಗಂಟೆಯಿಂದ 10ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಗಾರ್ಮೆಂಟ್ಸ್ ಹೊರತುಪಡಿಸಿ ಉಳಿದೆಲ್ಲಾ ಕೈಗಾರಿಕೆಗಳಿಗೆ ಲಾಕ್ ಡೌನ್ ಸಂದರ್ಭ ವಿನಾಯಿತಿ ನೀಡಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ 15-45ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡಲಾಗುವುದು 14ದಿನಗಳ ಕಾಲ ಬಿಗಿ ಬಂದೋಬಸ್ತ್ ನಡೆಯಲಿದೆ.

ರಾಜ್ಯದಲ್ಲಿ 14 ದಿನ ಕಟ್ಟಾ ರೂಲ್ಸ್ ಇರಲಿದೆ. ಉತ್ಪಾದನಾ ವಲಯ ಎಂದಿನಂತೆ ಕಾರ್ಯಾಚರಿಸಲಿದೆ.
ಮದ್ಯದಂಗಡಿಗಳು ಮುಚ್ಚಲಿದ್ದು, ಬೆಳಗ್ಗೆ 10ಗಂಟೆವರೆಗೆ ಮದ್ಯದಂಗಡಿಗಳು ತೆರೆದಿರಲಿದ್ದು ಪಾರ್ಸೆಲ್ಗೆ ಅವಕಾಶ ನೀಡಲಾಗಿದೆ.

ರಾಜ್ಯದಿಂದ ಬೇರೆ ರಾಜ್ಯಕ್ಕೆ ಗೂಡ್ಸ್ ಸಾಗಾಟ ಇರಲಿದೆ. ಸಾರಿಗೆ ವ್ಯವಸ್ಥೆ ಇಲ್ಲ  ಕೆ ಎಸ್ ಆರ್ ಟಿಸಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ.

ರಾಜ್ಯದಲ್ಲಿ ನಾಳೆಯಿಂದ ನಡೆಯಲಿರುವ ಎಲ್ಲಾ ಚುನಾವಣೆಗಳನ್ನೂ ಮುಂದೂಡಲಾಗವುದು.14ದಿನದಲ್ಲಿ ಕೊರೊನಾ ಹತೋಟಿಗೆ ಬರದಿದ್ದಲ್ಲಿ ಮತ್ತೊಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್ ನಿರ್ಧಾರ ಕೈಗೊಂಡಿದ್ದಾರೆ.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

LATEST NEWS

Trending