LATEST NEWS
‘3 ವರ್ಷದ ಮಕ್ಕಳಿಗೆ ಫುಲ್ ಟಿಕೆಟ್’-ಇದು ಸುಳ್ಳು ಎಂದ KSRTC
ಮಂಗಳೂರು: ಇತ್ತೀಚೆಗೆ ಕೆಎಸ್ಆರ್ಟಿಸಿ ಬಸ್ನಲ್ಲಿ 3 ವರ್ಷದ ಮಕ್ಕಳಿಗೆ ಇನ್ನು ಮುಂದೆ ಟಿಕೆಟ್ ದರ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಪಷ್ಟನೆ ನೀಡಿದೆ.
ಮಕ್ಕಳ ಪ್ರಯಾಣ ದರವನ್ನು ಆರು ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ ಹೊರತು 3 ವರ್ಷದ ಮಕ್ಕಳಿಗೆ ಕೂಡ ಟಿಕೆಟ್ ದರವನ್ನು ನಿಗದಿಪಡಿಸಿಲ್ಲ.
ಈ ವಿಚಾರವಾಗಿ ಕೆಎಸ್ಆರ್ಟಿಸಿಯು ಮಕ್ಕಳ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿರುವುದಿಲ್ಲ.
ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ , 6 – 12 ವರುಷದೊಳಗಿನ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.
ಕೆಲವೊಂದು ಸಂದರ್ಭಗಳಲ್ಲಿ, ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು
ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೆಟ್ ಪಡೆಯುವಂತೆ ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ.
ಈ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಸಾರಿಗೆ ನಿಗಮ ತಿಳಿಸಿದೆ.
LATEST NEWS
ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ.! ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದೆ.
ಸುದ್ದಿ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿ ಬಳಿಕ ಪಕ್ಷದ ಕಾರ್ಯಕರ್ತರ ಜತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.
ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಆರೋಪ ಮಾಡಿದೆ.
DAKSHINA KANNADA
ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.
ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
FILM
ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಚಂದನ್ ಗೌಡ-ಕವಿತಾ ದಂಪತಿ
ಚಂದನ್ ಗೌಡ – ಕವಿತಾ ದಂಪತಿ ಯಾರಿಗೆ ತಾನೇ ಗೊತ್ತಿಲ್ಲ. ಈ ಜೋಡಿ ‘ಲಕ್ಷ್ಮೀ ಬಾರಮ್ಮಾ’ ಮೂಲಕಾನೇ ಫೇಮಸ್. ಈ ಧಾರಾವಾಹಿಯಲ್ಲಿ ಕೆಲವು ಸಮಯ ನಟಿಸಿದ್ದ ಚಂದನ್ ಹೊರಬಂದಿದ್ದರು. ಕವಿತಾ ಕೂಡಾ ಅಷ್ಟೇ ಈ ಧಾರಾವಾಹಿ ಖ್ಯಾತಿ ನೀಡಿದ್ದರೂ, ನಂತರ ದಿನಗಳಲ್ಲಿ ಹೊರನಡೆದಿದ್ದರು. ಆದ್ರೆ, ಈ ಜೋಡಿ ರಿಯಲ್ ನಲ್ಲಿ ಒಂದಾಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇದೀಗ ಚಂದು – ಲಚ್ಚಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹಂಚಿಕೊಂಡ ದಂಪತಿ :
ನಟ ಚಂದನ್ ಕುಮಾರ್, ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ಸಂಭ್ರಮ ಹಂಚಿಕೊಂಡಿದ್ದಾರೆ. ನಟಿ ಕವಿತಾ ಗೌಡ ಚಂದನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆಅಭಿಮಾನಿಗಳಿಂದ, ನಟ, ನಟಿಯರಿಂದ ಶುಭ ಹಾರೈಕೆ ಹರಿದು ಬರುತ್ತಿದೆ. ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ವಿನಯ್ ಗೌಡ, ಪ್ರಿಯಾಂಕಾ ಚಿಂಚೋಳಿ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. 2021 ಮೇ 14ರಂದು ಲಾಕ್ ಡೌನ್ ಸಂದರ್ಭದಲ್ಲಿ ಈ ಜೋಡಿ ಮದುವೆಯಾಗಿತ್ತು.
ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
ಬ್ಯುಸಿ ಲೈಫ್ :
ಕೆಲ ತಿಂಗಳುಗಳಿಂದ ಕವಿತಾ ಗೌಡ ಅವರು ಉದ್ಯಮದ ಕಡೆಗೆ ಮುಖ ಮಾಡಿದ್ದರು. ಚಂದನ್ ಜೊತೆ ಸೇರಿ ಒಂದಾದ ಮೇಲೆ ಒಂದರಂತೆ ಹೋಟೆಲ್ ಬ್ರ್ಯಾಂಚ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಮೇಕಪ್ ಸ್ಟುಡಿಯೋವನ್ನು ಕೂಡ ಆರಂಭಿಸಿದ್ದಾರೆ.
- DAKSHINA KANNADA3 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM5 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali4 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY4 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು