Connect with us

DAKSHINA KANNADA

ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಅಂತ್ಯಸಂಸ್ಕಾರ: ಟೀಂ ಬಿ ಹ್ಯೂಮೆನ್ ಮತ್ತು ಐವೈಸಿ ಯೂತ್  ತಂಡ ನೆರವು..!

Published

on

ಮಂಗಳೂರು: ಕೊರೊನಾ ಸಂಕಷ್ಟದ ಕಾಲದಲ್ಲೂ ಜಾತಿ, ಧರ್ಮ ನೋಡದೇ ಬಡ ವರ್ಗದವರ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸುವ ಮೂಲಕ ಮಂಗಳೂರಿನ ಟೀಂ- ಬಿ ಹ್ಯೂಮನ್  ಹಾಗೂ ಟೀಂ ಐ ವೈ ಸಿ ಯೂತ್ ತಂಡ ಮಾನವೀಯತೆ ಮೆರೆದಿದೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಪೀಡಿತರಾಗಿ ಮೃತಪಟ್ಟವರ ದೇಹವನ್ನು ಸಂಬಂಧಿಕರೇ ಹತ್ತಿರ ಬರಲು  ಹಿಂದೇಟು ಹಾಕುವ ವಿಷಯ ತಿಳಿದ ಟೀಂ- ಬಿ ಹ್ಯೂಮನ್ ನ ಆಸಿಫ್ ಡೀಲ್ಸ್ ಮತ್ತು ಅವರ ಸಹೋದರ ಐವೈಸಿ ಯೂತ್  ತಂಡದ ಸುಹೈಲ್ ಕಂದಕ್ ನಾಲ್ವರ ಶವವನ್ನು ಬೋಳೂರು, ಕದ್ರಿ, ನಂದಿಗುಡ್ಡೆಯ ಸ್ಮಶಾನದಲ್ಲಿ ಗೌರವಪೂರ್ಣವಾಗಿ ಅಂತ್ಯಕ್ರಿಯೆ ನಡೆಸಿದ್ದಾರೆ.ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಟೀಂ ಬಿ ಹ್ಯೂಮೆನ್ ತಂಡವು ನಗರದ ಆಸ್ಪತ್ರೆಗಳು ಮತ್ತು ರೋಗಿಗಳೊಂದಿಗೆ ನಿರಂತರ ಸಂಪರ್ಕವನ್ನಿರಿಸಿ ಅವರಿಗೆ ಅಗತ್ಯ ನೆರವು ನೀಡುತ್ತಿದೆ.ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಯನ್ನು ಜಾತಿ, ಮತ, ಧರ್ಮ ಭೇದವಿಲ್ಲದೆ ನಡೆಸುತ್ತಿದೆ. ಮೃತಪಟ್ಟ ವ್ಯಕ್ತಿಗಳ ಶವವನ್ನೂ ಅವರ ಸಂಬಂಧಿಕರೇ ಅಂತ್ಯಸಂಸ್ಕಾರ ಮಾಡಲು ಹಿಂದೇಟು ಹಾಕುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕನ್ನು ಸುರಕ್ಷಿತಗೊಳಿಸಬೇಕಾದ ಅಗತ್ಯವಿದೆ ಎಂದು ಆಸಿಫ್ ಡೀಲ್ಸ್ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು, ಬೆಳ್ತಂಗಡಿ, ಮಂಗಳಾದೇವಿ, ಕಂದಾವರ ಗುರುಪುರದ ನಾಲ್ವರ ಶವವನ್ನು ಸಂಸ್ಕಾರ ಮಾಡಿರುವ ಟೀಂ – ಹ್ಯೂಮೆನ್ ನ ತಂಡದಲ್ಲಿ ಆಸಿಫ್ ಡೀಲ್ಸ್, ಅಶ್ರಫ್ ಕಂದಕ್, ಇಮ್ರಾನ್, ಅಹ್ನಾಫ್ ಡೀಲ್ಸ್, ವಾಹಿದ್ ಹಾಗೂ ಐವೈಸಿ ಯೂತ್  ತಂಡದಲ್ಲಿ ಸುಹೈಲ್ ಕಂದಕ್, ಲುಕ್ಮಾನ್, ಹಸನ್ ಡೀಲ್ಸ್, ದೀಕ್ಷಿತ್, ಅಪ್ಪಿ, ಬಾಚಿ ಭಾಗವಹಿಸಿದ್ದರು.

DAKSHINA KANNADA

ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜ ಮರ ಸ್ಥಾಪನೆ

Published

on

ಸುರತ್ಕಲ್‍: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಫೆ. 21ರಂದು  ಜರಗಿತು.


ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.

ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.


ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಜಾಲಗುತ್ತು, ಪ್ರಮುಖರಾದ ಐಕಳ ಹರೀಶ್ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಶೆಟ್ಟಿ, ಸಿ.ಎ ಉದಯಕುಮಾರ್ ಶೆಟ್ಟಿ, ಉದಯ ಸುಂದರ್ ಶೆಟ್ಟಿ, ಯದುನಾರಾಯಣ ಶೆಟ್ಟಿ , ಸುಧಾಕರ ಪೂಂಜ ಸುರತ್ಕಲ್, ಸಿ.ಎ ಸುದೇಶ್ ಕುಮಾರ್ ರೈ, ಬಾಲಕೃಷ್ಣ ಕೊಠಾರಿ,ಪಾಲಿಕೆ ಸದಸ್ಯ ಲೋಕೇಶ್ ಬೊಳ್ಳಾಜೆ, ಕ್ಷೇತ್ರದ ಸಮಿತಿ ಪ್ರಮುಖರು, ಸಂಬಂಧಪಟ್ಟ ಗುತ್ತು ಮನೆತನದವರು , ಗ್ರಾಮಸ್ಥರು ಭಾಗವಹಿಸಿದ್ದರು

Continue Reading

DAKSHINA KANNADA

ಮಂಗಳೂರು : ಹಲವು ಕ್ರಿಮಿನಲ್ ಕೃತ್ಯದಲ್ಲಿ ಶಾಮೀಲಾಗಿದ್ದ ಕುಖ್ಯಾತ ಕಳ್ಳರಿಬ್ಬರ ಬಂಧನ

Published

on

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ನಾಟೆಕಲ್ ಸಮೀಪದ ಕಲ್ಕಟ್ಟ ಎಂಬಲ್ಲಿನ  ಅಬ್ದುಲ್ ಫಯಾನ್ (26) ಮತ್ತು ನರಿಂಗಾನ ಸಮೀಪದ ತೌಡುಗೋಳಿ ಕ್ರಾಸ್ ನಿವಾಸಿ ಮೊಯಿದ್ದೀನ್ ಹಫೀಸ್ ಯಾನೆ ಆಬಿ (47) ಬಂಧಿತ ಆರೋಪಿಗಳು.  ಅಬ್ದುಲ್ ಫಯಾನ್ ಎಂಬಾತನು ಕೊಣಾಜೆ, ಉಳ್ಳಾಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ಸಹಿತ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಂಗ ಬಂಧನದಲ್ಲಿದ್ದ ಈತನ ವಿರುದ್ಧ ಕಾರಾಗೃಹದೊಳಗೆ ಇತರ ಕೈದಿಗಳಿಗೆ ಹಲ್ಲೆ ನಡೆಸಿದ ಮತ್ತು ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಆರೋಪವೂ ಇದೆ. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಈತ ಕಳೆದ 2 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಈತನನ್ನು ಬಂಧಿಸಿದ್ದಾರೆ.

ಮೊಯಿದ್ದೀನ್ ಹಫೀಸ್ ಯಾನೆ ಆಬಿ ಕೊಣಾಜೆ, ಉಳ್ಳಾಲ, ಬಂದರ್, ಸುರತ್ಕಲ್, ಕಂಕನಾಡಿ ನಗರ ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ/ಸಾಗಾಟ ಸಹಿತ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಈತ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಈತನನ್ನು ಮಂಜೇಶ್ವರ ಸಮೀಪದ ಮೀಂಜದಿಂದ ಬಂಧಿಸಲಾಗಿದೆ.

 

Continue Reading

DAKSHINA KANNADA

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತ-ಯುವಕ ಸಾವು

Published

on

ಸುರತ್ಕಲ್ :  ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್‌ನಲ್ಲಿ ಫೆ. 21 ರಂದು ವರದಿಯಾಗಿದೆ.ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು ಬಂದಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending