Connect with us

    DAKSHINA KANNADA

    ಬೃಹತ್‌ ಫರ್ನೆಸ್ ಆಯಿಲ್ ಮಿಕ್ಸಿಂಗ್‌ ಅಡ್ಡೆಗೆ ದಾಳಿ: 6 ಜನರ ಬಂಧನ, 2 ಟ್ಯಾಂಕರ್ ವಶ

    Published

    on

    ಉಪ್ಪಿನಂಗಡಿ: ಫರ್ನೆಸ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪೊಲೀಸರು ದಾಳಿ ಮಾಡಿದ ಘಟನೆ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಈ ಮೂಲಕ ಜಿಲ್ಲೆಯ ಬೃಹತ್‌ ಆಯಿಲ್‌ ದಂಧೆಯ ಬೃಹತ್‌ ಜಾಲ ಪತ್ತೆಯಾಗಿದೆ.


    ನೆಲ್ಯಾಡಿ ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಬೃಹತ್ ಫರ್ನೆಸ್ ಆಯಿಲ್ ಮಿಕ್ಸಿಂಗ್ ಅಡ್ಡೆ ಮೇಲೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ದಾಳಿಯ ವೇಳೆ ಎರಡು ಟ್ಯಾಂಕರ್, ಮಿಕ್ಸಿಂಗ್​​ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹೊಸಮಜಲು ಸೇತುವೆಯ ಬಳಿ ಕೆಲವು ವರ್ಷಗಳಿಂದ ಈ ಆಯಿಲ್ ಮಿಕ್ಸಿಂಗ್ ದಂಧೆ ಅವ್ಯಾಹತವಾಗಿ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

    ಹಾಗೂ ಆಯಿಲ್ ಶೇಖರಣೆಗಾಗಿ ಭೂಮಿಯ ಅಡಿಯಲ್ಲಿ 20 ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕ್ ನ ನಿರ್ಮಾಣ ಮಾಡಲಾಗಿತ್ತು. ತಮಿಳುನಾಡು ಮೂಲದ ವ್ಯಕ್ತಿಗೆ ಸೇರಿದ ಜಾಗದಲ್ಲಿ ಈ ಕೃತ್ಯ ನಡೆಯುತಿತ್ತು ಎಂದು ಬೆಳಕಿಗೆ ಬಂದಿದೆ.
    ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ ಮಾಹಿತಿ ಸೋರಿಕೆಯಾಗಿ ಆ ಪ್ರಯತ್ನಗಳು ವಿಫಲವಾಗುತ್ತಿದ್ದವು. ಆದರೆ ಮಂಗಳವಾರ ಸಂಜೆ ಖಚಿತ ಮಾಹಿತಿ ಆಧರಿಸಿ ಪುತ್ತೂರು ಡಿವೈಎಸ್ಪಿ ಗಾನಾ ಪಿ.ಕುಮಾರ್ ನೇತೃತ್ವದ ಪೊಲೀಸರ ತಂಡವು ಈ ಅಡ್ಡೆಗೆ ದಾಳಿ ಮಾಡಿ ಅಕ್ರಮವನ್ನು ಪತ್ತೆಹಚ್ಚಿದೆ. ಪೊಲೀಸರು ದಾಳಿ ಮಾಡುವ ಸಮಯದಲ್ಲಿ ಎರಡು ಟ್ಯಾಂಕರ್​ಗಳಲ್ಲಿ ಫರ್ನೆಸ್ ಆಯಿಲ್ ಮಿಕ್ಸಿಂಗ್ ದಂಧೆ ನಡೆಯುತ್ತಿತ್ತು.

     

    ದಾಳಿ ಮಾಡಿದ ಸಮಯದಲ್ಲಿ ಸುಮಾರು 36 ಸಾವಿರ ಲೀಟರ್​​ನಷ್ಟು ಫರ್ನೆಸ್ ಆಯಿಲ್ ಪತ್ತೆಯಾಗಿದೆ. ಭೂಗತವಾಗಿ ಎರಡು ಬೃಹತ್ ಟ್ಯಾಂಕ್ ಗಳು, ವಿದ್ಯುತ್ ಹಾಗೂ ಡೀಸೆಲ್‌ ಚಾಲಿತ ಪಂಪುಗಳು ಪತ್ತೆಯಾಗಿದೆ. ವಿಪರ್ಯಾಸವೆಂದರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಯಾವುದೇ ಹೆದರಿಕೆ ಇಲ್ಲದೇ ಈ ದಂಧೆ ನಡೆಯುತ್ತಿತ್ತು. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಋಷಿಕೇಶ್ ಸೋನಾವಣೆ, ಎಎಸ್​ಪಿ ವಿ.ಬಿ ಭಾಸ್ಕರ್, ಕಡಬ ತಹಶಿಲ್ದಾರ್ ಅನಂತಶಂಕರ್, ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಸುಷ್ಮಾ, ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಮತ್ತು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
    ಏನಿದು ಫರ್ನೆಸ್‌ ಆಯಿಲ್‌
    ಕಚ್ಚಾ ತೈಲ ಸಂಸ್ಕರಣೆ ಸಂದರ್ಭದಲ್ಲಿ ಡಾಂಬರ್ ಗಿಂತ ಮೊದಲು ಸಿಗುವ ಆಯಿಲ್. ಇದನ್ನು ಬೃಹತ್ ಕಾರ್ಖಾನೆಗಳ ಬಾಯ್ಲರ್ ಗಳಲ್ಲಿ ಬಳಸಲಾಗುತ್ತದೆ.

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    LATEST NEWS

    Trending