ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದೆ.
ಜುಲೈ 17ರಂದು ಕಿಡಿಗೇಡಿಗಳು ಜಿ.ಜಗದೀಶ ಮಲಲಗದ್ದೆ ಎಂಬ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಪ್ರೊಫೈಲ್ ಗೆ ಜಿಲ್ಲಾಧಿಕಾರಿಯ ಫೋಟೋವನ್ನು ದುರ್ಬಳಕೆ ಮಾಡಿದ್ದಾರೆ. ತಮ್ಮ ವೈಯಕ್ತಿಕ ಗೌರವಕ್ಕೆ ಧಕ್ಕೆ ಮಾಡುವ ಉದ್ದೇಶದಿಂದ ಈ ರೀತಿ ನಕಲಿ ಪೇಸ್ ಬುಕ್ ಖಾತೆ ತೆರೆದು ಹಣ ಕೇಳುತ್ತಿದ್ದಾರೆ ಎಂದು ಅವರು ಉಡುಪಿ ಸೆನ್ ಅಪರಾಧ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.