Connect with us

DAKSHINA KANNADA

ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ “ಕೆ.ಎಂ.ಶರೀಫ್ ಸ್ಮಾರಕ ಪ್ರಶಸ್ತಿ-2021” ಪ್ರದಾನ

Published

on

ಮಂಗಳೂರು: ‘ಪ್ರಸ್ತುತ’ ಪಾಕ್ಷಿಕದ ಪ್ರಥಮ ಸಂಪಾದಕರಾಗಿದ್ದ ದಿವಂಗತ ಕೆ.ಎಂ.ಶರೀಫ್ ಅವರ ಸ್ಮರಣಾರ್ಥ ನೀಡಲಾಗುವ “ಕೆ.ಎಂ.ಶರೀಫ್ ಸ್ಮಾರಕ ಪ್ರಶಸ್ತಿ-2021” ಯನ್ನು ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ ಮಂಗಳೂರಿನ ಶಾಂತಿನಿಲಯದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.


ಪ್ರಸ್ತುತ ಪಾಕ್ಷಿಕದ ಪ್ರಧಾನ ಸಂಪಾದಕ ಅಬ್ದುಲ್ ರಝಾಕ್ ಕೆಮ್ಮಾರ ಅವರು ಜಿ.ರಾಜಶೇಖರ್ ಅವರಿಗೆ ಶಾಲು ಹೊದಿಸಿ, ಪ್ರಶಸ್ತಿ ಪತ್ರ, ಫಲಕ ನೀಡಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ರಾಜಶೇಖರ್, “ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಕೃತಜ್ಞತೆಗಳು. ಈ ಪ್ರಶಸ್ತಿಯನ್ನು ನಾನು ಹೃತ್ಪೂರ್ವಕವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದರು.

ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಮಾತನಾಡಿ, ಜಿ.ರಾಜಶೇಖರ್ ಅವರು ಜೀವನದುದ್ದಕ್ಕೂ ಪ್ರಾಮಾಣಿಕವಾಗಿ ಹೋರಾಟ ಮಾಡಿಕೊಂಡು ಬಂದವರು. ಇದರೊಂದಿಗೆ ಬರವಣಿಗೆ ಮತ್ತು ಬೀದಿಯಲ್ಲೂ ಹೋರಾಟ ಮಾಡಿದ ಮೇರು ವ್ಯಕ್ತಿತ್ವವಾಗಿದ್ದಾರೆ. ಅವರನ್ನು ಗುರುತಿಸಿ ಪ್ರಶಸ್ತಿ ಕೊಟ್ಟಿರುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚಾಗಿದೆ ಎಂದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಸ್ತುತ ಪಾಕ್ಷಿಕದ ಪ್ರಧಾನ ಸಂಪಾದಕ ಅಬ್ದುಲ್ ರಝಾಕ್ ಕೆಮ್ಮಾರ ಮಾತನಾಡಿ, ದೇಶದ ಜನರ ಹಕ್ಕುಗಳನ್ನು ಕಸಿಯುತ್ತಿರುವ ಈ ಸಂದರ್ಭದಲ್ಲಿ ಅವುಗಳನ್ನು ಪ್ರಶ್ನಿಸಲು ಧೈರ್ಯ ತೋರಬೇಕು.

ಮಾನವ ವಿರೋಧಿ ಶಕ್ತಿಯ ವಿರುದ್ಧ ಕೆಚ್ಚೆದೆಯ ಹೋರಾಟ ಮಾಡಿದರೆ ಮಾತ್ರ ವಿಜಯ ಸಾಧ್ಯ. ಪವಿತ್ರ ಕುರಾನ್‌ನ್ನು ಕೂಡ ಸತ್ಯವಿಶ್ವಾಸಿಗಳು ಭಯಪಡದಂತೆ ತಾಕೀತು ಮಾಡಿದೆ ಎಂದರು.

ಇದಕ್ಕೂ ಮೊದಲು ನಡೆದ “ಅಭಿವ್ಯಕ್ತಿ ಸ್ವಾತಂತ್ರ್ಯ: ಫ್ಯಾಶಿಸಂ ಒಡ್ಡುತ್ತಿರುವ ಸವಾಲುಗಳು” ಕುರಿತ ವಿಚಾರ ಸಂಕಿರಣದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ. ಆದರೆ ಅದು ಚಿರಾಯುವಾಗಲಿ ಎಂದು ಘೋಷಣೆ ಮಾಡಬೇಕಾದ ಪರಿಸ್ಥಿತಿ ಇದೆ.

ದೇಶದಲ್ಲಿ ಬಹುಸಂಖ್ಯಾತರ ಕೋಮುವಾದ ಅತ್ಯಂತ ಅಪಾಯಕಾರಿ ಎಂದು ಪ್ರಥಮ ಪ್ರಧಾನಿ ನೆಹರೂ ಹೇಳಿದ್ದರು. ಮಾಧ್ಯಮಗಳು ಸಂಪೂರ್ಣವಾಗಿ ಕೋಮು ವಾದಕ್ಕೆ ತಿರುಗಿದೆ. ಬಿಜೆಪಿಯವರು ಯುವಕರಿಗೆ ಉದ್ಯೋಗ ಕೊಡುವ ಬದಲು ಹೊಡಿ ಬಡಿ ಕೆಲಸ ನೀಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆ.ಎಂ.ಶರೀಫ್ ಅವರ ಬದುಕು ಮತ್ತು ಹೋರಾಟದ ಕುರಿತ ವೀಡಿಯೋ ಪ್ರದರ್ಶನ ನಡೆಯಿತು.

DAKSHINA KANNADA

ಮೇ 9 ರಂದು SSLC ಫಲಿತಾಂಶ ಪ್ರಕಟ…!

Published

on

ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್‌ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ


2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.

ಫಲಿತಾಂಶವನ್ನು ನೋಡಲು ಈ ವೆಬ್‌ಸೈಟ್ ಬಳಸಿ..!

ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.


ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್‌ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.

ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!


ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!

Published

on

ಮಂಗಳೂರು : ತುಳುನಾಡು ದೈವಾರಾಧನೆಯ ನೆಲೆಬೀಡು. ಇಲ್ಲಿ ದೈವಗಳ ಮೇಲೆ ಅತೀವ ನಂಬಿಕೆಯಿದೆ. ನಂಬಿದವರ ಕೈಬಿಡದು ದೈವ ಎಂಬ ನಂಬಿಕೆ ತುಳವರದು. ಸೆಲೆಬ್ರಿಟಿಗಳೂ ದೈವಗಳನ್ನು ನಂಬುತ್ತಾರೆ. ಊರಿಗೆ ಬಂದು ದೈವಗಳಿಗೆ ಕೈ ಮುಗಿಯುತ್ತಾರೆ. ನಟಿ ಶ್ರೀನಿಧಿ ಶೆಟ್ಟಿ ಸಿನಿರಂಗದಲ್ಲಿ ಯಶಸ್ಸು ಬಾಚಿಕೊಳ್ಳುತ್ತಿದ್ದರೂ ಕೂಡ ದೈವಾರಾಧನೆ ಮರೆತಿಲ್ಲ. ಅವರು ತಾವು ಹೊತ್ತ ಹರಕೆಯನ್ನು ಪೂರೈಸಿದ್ದಾರೆ.

ಅಭಯವಿತ್ತ ದೈವ :


ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಅವರ ಹರಕೆಯ ನೇಮೋತ್ಸವ ಕಿನ್ನಿಗೋಳಿಯ ಅವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.

ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!


‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ‌ಶೆಟ್ಟಿಗೆ ಅಭಯ ನೀಡಿವೆ. ಸದ್ಯ ಶ್ರೀನಿಧಿ ಶೆಟ್ಟಿ ಸಿನಿಮಾಗಳಲ್ಲು ಬಿಝಿ ಆಗಿದ್ದಾರೆ. ಸಕತ್ ಚ್ಯೂಸಿ ಕೂಡ ಆಗಿದ್ದಾರೆ. ಕೆಜಿಎಫ್ 2 ಚಿತ್ರದಲ್ಲೂ ಬಿಝಿ ಆಗಿದ್ದಾರೆ. ಅತ್ತ ತೆಲುಗು ಸಿನಿರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ 47 ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

LATEST NEWS

Trending