Connect with us

    BANTWAL

    “ಸಹಬಾಳ್ವೆಯಿಂದ ಬಾಳೋಣ” ಗದ್ದೆಯಲ್ಲಿ ಗಮ್ಮತ್ತು ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಅಭಿಮತ

    Published

    on

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಇದರ ಆಶ್ರಯದಲ್ಲಿ ಐಸಿವೈಎಂ ಹಾಗೂ ಕಥೋಲಿಕ ಸಭಾ ಫಟಕ ಪೆರುವಾಯಿ ಸಹಯೋಗದೊಂದಿಗೆ “ಗದ್ದೆಯಲ್ಲಿ ಗಮ್ಮತ್ತು” ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿದ ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ, ನಾವೆಲ್ಲ ದೇವರ ಮಕ್ಕಳು. ನಮ್ಮಲ್ಲಿ ಯಾವುದೇ ಬೇಧ ಇರಬಾರದು. ಈ ಪ್ರಕೃತಿಯನ್ನು ಭಗವಂತ ನಮಗೋಸ್ಕರ ಸೃಷ್ಟಿ ಮಾಡಿದ್ದಾನೆ. ಬದುಕಿರುವಷ್ಟು ಕಾಲ ನಾವು ಕುಡಿಯುವ ನೀರು, ಸೇವಿಸೋ ಗಾಳಿ, ರಕ್ತ, ರಕ್ತದ ಬಣ್ಣ ಎಲ್ಲವೂ ಒಂದೇ ಆಗಿದೆ. ಅದಿದ್ದರೂ ನಾವು ಜಗತ್ತಿನಲ್ಲಿ ಅಜ್ಞಾನಿಗಳಿರುತ್ತೇವೆ. ಆದ್ದರಿಂದ ಸಹಬಾಳ್ವೆಯಿಂದ ಬಾಳಬೇಕು ಎಂದು ಸಂದೇಶ ನೀಡಿದರು.


    ವೈಯುಕ್ತಿಕ ಜಂಜಾಟದ ನಡುವೆ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ಎಲ್ಲರೂ ಇಡೀ ದಿನ ಕೆಸರಿನಲ್ಲಿ ಮಿಂದೆದ್ದರು. ಇದೇ ವೇಳೆ ಸ್ಥಳೀಯ ಬಾಂಧವರಿಗೂ ಮಡಕೆ ಒಡೆಯುವುದು ಸೇರಿ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
    ಶ್ರೀ ಕ್ಷೇತ್ರ ಕುಕ್ಕಾಜೆಯ ಶ್ರೀ ಶ್ರೀ ಕೃಷ್ಣ ಗೂರೂಜಿ ಮಾತನಾಡಿ, ನಮಗೆ ಭೂಮಿಯಲ್ಲಿರುವುದಕ್ಕೆ ಅವಕಾಶವಿರುವುದು ಮೂರೇ ದಿನ. ಹುಟ್ಟು ಮತ್ತು ಸಾವಿನ ಮಧ್ಯದ ಜೀವನವನ್ನು ನಾವು ಚೆನ್ನಾಗಿ ಅರ್ಥೈಸಿಕೊಂಡು ಬದುಕಿದಾಗ ಮನುಷ್ಯನ ಜೀವನಕ್ಕೆ ಮೌಲ್ಯ ಸಿಗುತ್ತದೆ ಎಂದರು.


    ವಂದನೀಯ ವಿಶಾಲ್‌ ಮೋನಿಸ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾನು ಮಾತನಾಡುವುದು ಕಡಿಮೆ. ನನ್ನ ಕೆಲಸಗಳು ಮಾತನಾಡುತ್ತಿವೆ. ಗದ್ದೆಯ ಆಟ ಕೇವಲ ಮನೋರಂಜನೆ ದೃಷ್ಟಿಯಿಂದಲ್ಲ. ಬದಲಾಗಿ ಒಟ್ಟು ಸೇರಿ ಒಬ್ಬನ್ನೊಬ್ಬರನ್ನು ಅರಿತು ಒಳ್ಳೆಯ ಕಾರ್ಯವನ್ನು ಮಾಡುವುದಾಗಿದೆ ಎಂದರು.
    ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಬ್ರಿಜೇಶ್‌ ಚೌಟ, ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯ್ಸ್‌, ಪೆರುವಾಯಿ ಗ್ರಾ.ಪಂ ಅಧ್ಯಕ್ಷ ಕೆ. ಬಾಲಕೃಷ್ಣ ಪೂಜಾರಿ,

    ಸದಸ್ಯ ವರುಣ್‌ ರೈ ಹಾಗೂ ರಶ್ಮಿ ಎಂ, ಮಾಣಿಲ ಗ್ರಾ.ಪಂ ಉಪಾಧ್ಯಕ್ಷ ರಾಜೇಶ್‌ ಬಾಳೆಕಲ್ಲು, ಕೊಲ್ಲತ್ತಡ ಶಾಲೆಯ ಮುಖ್ಯೋಪಾಧ್ಯಾಯ ಕುಂಞ ನಾಯ್ಕ್‌, ಅಬ್ದುಲ್‌ ರಜಾಕ್‌, ನಾಗೇಶ್‌ ಪಾಟಾಳಿ, ಚರ್ಚ್‌ ಪಾಲನಾ ಮಂಡಳಿ ಉಪಾಧ್ಯಕ್ಷ ವಿನ್ಸೆಂಟ್‌ ಡಿ’ಸೋಜ, ಕಾರ್ಯದರ್ಶಿ ವಿಲಿಯಂ ಡಿ’ಸೋಜ, ಕಥೋಲಿಕ್‌ ಸಭಾದ ಘಟಕ ಅಧ್ಯಕ್ಷ ರಾಲ್ಫ್‌ ಡಿಸೋಜ, ಐಸಿವೈಎಂ ಘಟಕ ಅಧ್ಯಕ್ಷೆ ದೀಕ್ಷಿತ ಡಿ’ಸೋಜ ಸೇರಿ ಹಲವರಿದ್ದರು.

    BANTWAL

    ಬ್ರೇಕಪ್ ಆದ್ರೂ ಬಿಡದ ಪಾಗಲ್ ಪ್ರೇಮಿ; ನಿಮಿಷಕ್ಕೊಮ್ಮೆ ಗೂಗಲ್ ಪೇ ಮಾಡಿ ಹಿಂಸೆ..!

    Published

    on

    ಪ್ರೀತಿ ಒಂದು ಮಾಯೆ. ಯುವಕ – ಯುವತಿಯ ನಡೆವಿನ ಅನ್ಯೋನ್ಯತೆ, ಹೊಂದಿಕೊಳ್ಳುವುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತವೆ. ಪ್ರೀತಿ ಎಂದರೆ ಕೇವಲ ಆಕರ್ಷಣೆಯಲ್ಲ. ಅಥವಾ ಒಂದು ಹೆಣ್ಣಿನ ಅಂಗಾಂಗ ನೋಡಿ ಉಕ್ಕಿ ಬರುವ ಭಾವವೂ ಅಲ್ಲ. ಅದೊಂದು ಪವಿತ್ರ ಬಂಧ. ಎಲ್ಲಿ ಸರಿಯಾದ ಹೊಂದಾಣಿಕೆ ಇರುವುದಿಲ್ಲವೋ ಅಲ್ಲಿ ಬ್ರೇಕಪ್ ಆಗುತ್ತದೆ. ಅಷ್ಡು ಮಾತ್ರವಲ್ಲದೇ ಯಾವುದೋ ಒತ್ತಡ, ಕೌಟುಂಬಿಕ ಕಲಹಗಳಿಂದಲೂ ಪ್ರೇಮಿಗಳ ಸಂಬಂಧಕ್ಕೆ ಬಿರುಕು ಬೀಳುತ್ತದೆ.

    ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ, ಆ ನೋವಿನಿಂದ ಹೊರಬರುವುದಂತೂ ತುಂಬಾ ಕಷ್ಟ. ಕೆಲವರು ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಬ್ರೇಕಪ್ ಬಳಿಕ ಮಾಜಿ ಪ್ರಿಯತಮೆಗೆ ವಿಚಿತ್ರವಾಗಿ ಹಿಂಸೆ ನೀಡಿದ್ದಾನೆ ಎಂದು ಉಲ್ಲೇಖವಾಗಿದೆ. ಈ ಕುರಿತು ಸ್ವತಃ ಯುವತಿಯೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.

    ಬ್ರೇಕಪ್‌ ಬಳಿಕ ಯುವತಿಯು ಮಾಜಿ ಪ್ರಿಯಕರನ ನಂಬರನ್ನು ಎಲ್ಲ ಕಡೆಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಅವನು ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇ ಆಯ್ಕೆ ಮಾಡ್ಕೊಂಡಿದ್ದಾನೆ. ಬ್ರೇಕಪ್ ನಂತರ ಅವನು ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡುತ್ತಿದ್ದಾನಂತೆ.

    ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiii ಯಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡುತ್ತಾರಾ ? ಎಂದೆನಿಸುತ್ತದೆ.

    ಈ ಪೋಸ್ಟ್ ಒಂದು ಲಕ್ಷದವರೆಗೆ ವೀಕ್ಷಣೆ ಕಂಡಿದ್ದು, ನೆಟ್ಟಿಗರು ವಿಧವಿಧವಾಗಿ ಕಾಮೆಂಟ್ ಮಾಡಿದ್ದಾರೆ.ಒಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.

    Continue Reading

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    LATEST NEWS

    Trending