ತುಳು ನಾಡಿನಲ್ಲಿ ಹೊಸ ಭಾಷ್ಯ ಬರೆಯಲು ಸಿದ್ದಗೊಂಡಿದೆ ‘ಗಮ್ಜಾಲ್’..! ಫೆ.8 ರಂದು ಸೈಹ್ಯಾದ್ರಿ ಕಾಲೇಜಿನಲ್ಲಿ ಬಿಡುಗಡೆಯಾಗಲಿದೆ ಟ್ರೈಲರ್..
ಮಂಗಳೂರು: ತುಳು ಚಿತ್ರರಂಗಕ್ಕೆ ಹೊಸ ಕಳೆ ತಂದುಕೊಟ್ಟ ಮತ್ತು ಕೋಸ್ಟಲ್ ವುಡ್ ನಲ್ಲಿ ದಾಖಲೆ ನಿರ್ಮಿಸಿದ ‘ಗಿರಿಗಿಟ್’ ಖ್ಯಾತಿಯ ರೂಪೇಶ್ ಶೆಟ್ಟಿ ತಂಡದ ಮತ್ತೊಂದು ಬಹುನಿರೀಕ್ಷಿತ ‘ಗಮ್ಜಾಲ್’ ತುಳು ಚಿತ್ರ ಇದೇ ಫೆ. 19ರಂದು ಕರಾವಳಿಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಒಂದು ವರ್ಷದ ಸುಧೀರ್ಘ ವಿರಾಮದ ಬಳಿಕ ಬಿಡುಗಡೆಯಾಗಲಿರುವ ಮೊದಲ ತುಳು ಸಿನಿಮಾ ಗಮ್ಜಾಲ್ ಆಗಿದೆ.
ಈ ಕಾರಣಕ್ಕೆ ಕರಾವಳಿಯ ಬಹು ನಿರೀಕ್ಷಿತ ತುಳು ಸಿನಿಮಾವನ್ನು ಅದ್ದೂರಿಯಾಗಿ ತೆರೆಗೆ ತರಲು ಚಿತ್ರ ತಂಡ ಸಿದ್ದತೆಗಳನ್ನು ಮಾಡಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಅಡ್ಯಾರ್ ನ ಸೈಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 8 ರಂದು ನಡೆಯಲಿದೆ.
ಗಮ್ಜಾಲ್ ಸಿನಿಮಾದ ಮೂಲಕ ತುಳು ನಾಡಿನ ಮತ್ತೆ ಒಂಟಿ ಪರದೆಯ ಥಿಯೇಟರ್‌ಗಳಲ್ಲಿ ಚಟುವಟಿಕೆಗಳು ಗರಿಗೆದರಲಿವೆ. ತುಳು ಚಿತ್ರ ರಂಗದಲ್ಲಿ ಹೊಸ ಭಾಷ್ಯ ಬರೆದ ಗಿರಿಗಿಟ್ ಸಿನೆಮಾದ ಹೀರೋ ರೂಪೇಶ್ ಶೆಟ್ಟಿ ಅವರ ಈ ಚಿತ್ರಕಥೆಗೆ ಪ್ರಸನ್ನ ಶೆಟ್ಟಿ ಸಂಭಾಷಣೆ ಬರೆದಿದ್ದಾರೆ.
ಗಮ್ಜಾಲ್’ ಚಿತ್ರದಲ್ಲೂ ರೂಪೇಶ್ ಶೆಟ್ಟಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದು, ಕೋಸ್ಟಲ್‌ವುಡ್‌ನ ಮನೆಮಾತಾದ ಹಿರಿಯ ಕಲಾವಿದರಾದ ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ, ಸಂದೀಪ್ ಶೆಟ್ಟಿ ಸೇರಿದಂತೆ ಹಲವು ಖ್ಯಾತ ಕಲಾವಿದರು ಗಮ್ಜಾಲ್ ಗಾಗಿ ಬಣ್ಣ ಹಚ್ಚಿದ್ದಾರೆ. ಶೂಲಿನ್ ಫಿಲ್ಮ್ಸ್ ಮತ್ತು ಮೊಗರೋಡಿ ಕನ್‌ಸ್ಟ್ರಕ್ಷನ್ ಚಿತ್ರಕ್ಕೆ ಬಂಡವಾಳ ಹಾಕಿದೆ.
ಅದೇನೆ ಇದ್ರೂ ಸುಧೀರ್ಘ ಲಾಕ್‌ಡೌನ್ ನಿಂದ ಮಂಕಾಗಿದ್ದ ತುಳುನಾಡಿನಲ್ಲಿ ಬಿಡುಗಡೆಯಾಗಲಿರುವ ‘ಗಮ್ಜಾಲ್’ ಸಿನಿಮಾ ತುಳುಚಿತ್ರ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿರುವುದು ಮಾತ್ರ ಅಷ್ಟೇ ಸತ್ಯ…
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.