Connect with us

LATEST NEWS

ಸಾರ್ವಜನಿಕ ಗಣೇಶೋತ್ಸವ ವಿಚಾರದಲ್ಲಿ ರಾಜ್ಯ ಸರಕಾರದ ಯೂ ಟರ್ನ್

Published

on

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದ ರಾಜ್ಯ ಸರಕಾರ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿರುವಾಗ ಈಗ ಯೂ ಟರ್ನ್ ಹೊಡೆದಿದ್ದು, ನಿಯಮಗಳನುಸಾರವಾಗಿ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅವಕಾಶ ನೀಡಿದೆ.


ಈ ಕುರಿತಂತೆ ಮಾರ್ಗ ಸೂಚಿಗಳನ್ನು ಬಿಡುಗಡೆಗೊಳಿಸಿರುವ ರಾಜ್ಯ ಸರಕಾರ ಇದೀಗ ತಮ್ಮ ಮನೆಗಳಲ್ಲಿ, ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಮೂರ್ತಿ ಸ್ಥಾಪಿಸಿ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಈ ಹೊಸ ಪರಿಷ್ಕೃತ ಮಾರ್ಗಸೂಚಿಯಂತೆ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಹೆಚ್ಚು ಜನರು ಸೇರದಂತೆ ಗಲ್ಲಿ ಗಲ್ಲಿ ಗಳಲ್ಲಿ ಆಚರಿಸಲು ಅವಕಾಶ ನೀಡದೇ, ವಾರ್ಡ್ ಗೆ ಒಂದರಂತೆ, ಏರಿಯಾಗೆ ಒಂದರಂತೆ, ಗ್ರಾಮಗಳಲ್ಲಿ ಒಂದರಂತೆ ಸ್ಥಾಪಿಸಿ, ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.

ಹೊಸ ಗಣೇಶೋತ್ಸವ ಆಚರಿಸುವ ಸಂಬಂಧದ ಪರಿಷ್ಕೃತ ಮಾರ್ಗಸೂಚಿಗಳು

ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು

ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದ್ದಲ್ಲ, ಮಾಡತಕ್ಕದ್ದಲ್ಲ, ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸಿದ ನಂತ್ರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ನಿರ್ಮಿಸಿರುವ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು

LATEST NEWS

ನ್ಯೂಡಲ್ಸ್ ಪ್ಯಾಕೇಟ್ ನಲ್ಲಿ ಸಿಕ್ಕಿತು 6 ಕೋಟಿ ರೂ. ಮೌಲ್ಯದ ಡೈಮಂಡ್!

Published

on

ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದ್ದ ವಜ್ರಗಳ ಹರಳುಗಳು ಪತ್ತೆಯಾಗಿವೆ. 6.48 ಕೋಟಿ ರೂಪಾಯಿ ಎಂದು ಮೌಲ್ಯದ ಹರಳನ್ನು ವಶಕ್ಕೆ ಪಡೆಯಲಾಗಿದೆ.


ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಹಲವರು ವಶಕ್ಕೆ

ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ.

ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆಹಿಡಿಯಲಾಯಿತು. ಈ ವೇಳೆ 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್​ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್​ನಲ್ಲಿ ತನ್ನ ಬೆಲ್ಟ್​​ನಲ್ಲಿ ಅಡಗಿಸಿಟ್ಟಿದ್ದ ಬಗ್ಗೆ ವರದಿಯಾಗಿದೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

Published

on

ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ ಯುವಕ.

ಸೋಮವಾರ ರಾತ್ರಿ 1.30ರ ಸುಮಾರಿಗೆ ವಿಕಾಸ್ ಸಾಸ್ತಾನದಿಂದ ಕೋಟ ಮಣೂರು ಕಡೆ ಬರುತ್ತಿದ್ದ

ವೇಳೆ ಈ ದುರಂ*ತ ಸಂಭವಿಸಿದೆ. ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀ*ರವಾಗಿ ಗಾಯಗೊಂಡ ವಿಕಾಸ್ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Continue Reading

LATEST NEWS

Trending