ಮೈಸೂರು: ಸ್ನೇಹಿತನೊಂದಿಗೆ ಸುತ್ತಾಡಲು ತೆರಳಿದ್ದ ವೇಳೆ 5 ರಿಂದ6 ಜನ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ನಡೆಸಿದ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಇದೀಗ ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಬಲೆ ಬೀಸಿದ್ದಾರೆ. ಅತ್ಯಾಚಾರ ಪ್ರಕರಣದ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಂತ್ರಸ್ತೆಯ ಸ್ನೇಹಿತನಿಂದ ಮಾಹಿತಿ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣವು ಲಲಿತಾದ್ರಿಪುರದ ಹೊರವಲಯದಲ್ಲಿ ನಡೆದಿತ್ತು ಎಂದು ತಿಳಿದುಬಂದಿದೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಲಲಿತಾದ್ರಿಪುರದ ಹೊರವಲಯದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದೆ.
ನಾಲ್ಕು ಅಥವಾ ಐದು ಜನರಿಂದ ರೇಪ್ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಜೊತೆಗೆ ಬಂದಿದ್ದ ವಿದ್ಯಾರ್ಥಿನಿ ಸ್ನೇಹಿತನಿಗೆ ಹಲ್ಲೆ ಮಾಡಲಾಗಿದೆ.
ಸದ್ಯ ವಿದ್ಯಾರ್ಥಿನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರಿಂದ ಪರಿಶೀಲನೆ ನಡೆಸಲಾಗಿದೆ.
ನಿನ್ನೆ 7 ಗಂಟೆ ಸುಮಾರಿಗೆ ಸ್ನೇಹಿತನೊಂದಿಗೆ ಹೊರಹೋದ ವೇಳೆ ನಿರ್ಜನ ಪ್ರದೇಶದಲ್ಲಿ ಪಾನಮತ್ತರಾಗಿ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.
5 ರಿಂದ 6 ಜನರಿಂದ ಕೃತ್ಯ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.