Saturday, November 27, 2021

ಸಿಎಂ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್..!

               ಸಿಎಂ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! 

ಶಿವಮೊಗ್ಗ – ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ದುರ್ಘಟನೆ ಮುಖ್ಯಮಂತ್ರಿ ಯಡಿಯೂರಪ್ಪ ಆವರ ತವರು ಜಿಲ್ಲೆಯ  ಶಿವಮೊಗ್ಗದಲ್ಲಿ  ನಡೆದಿದೆ.

ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ  ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ.

ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ಕೋವಿಡ್-19 ಪೀಡಿತ ತಾಯಿಯನ್ನು ನೋಡಿಕೊಳ್ಳುವ ಸಲುವಾಗಿ ಕಳೆದ ಒಂದು ತಿಂಗಳಿಂದ ಸಂತ್ರಸ್ತ ಬಾಲಕಿ ಮೆಗ್ಗಾನ್ ಆಸ್ಪತ್ರೆಯಲ್ಲಿದ್ದಳು.

ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ. ಕೋಮು ಗಲಭೆಯಿಂದಾಗಿ ಶಿವಮೊಗ್ಗ ನಗರ ಮೂರು ದಿನದಿಂದ ಸಂಪೂರ್ಣ ಬಂದ್ ಆಗಿತ್ತು. ಹಾಗಾಗಿ ಶನಿವಾರ ರಾತ್ರಿ ಊಟಕ್ಕೆ ಹೊರಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ.

ಆತನನ್ನು ನಂಬಿದ ಬಾಲಕಿ ಜತೆಯಲ್ಲಿ ಹೋಗಿದ್ದು, ದುಷ್ಕೃತ್ಯಕ್ಕೆ ಸಿಲುಕಿದ್ದಾಳೆ. ಆರೋಪಿ ಮನೋಜ್ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ. ಅದಾದ ಬಳಿಕ ಆತನ ಮೂವರು ಸ್ನೇಹಿತರಾದ ಪ್ರಜ್ವಲ್, ವಿನಯ್ ಹಾಗೂ ಮತ್ತೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದರಿಂದ ಶಿವಮೊಗ್ಗ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ. ಶಿವಮೊಗ್ಗ ಮಹಿಳಾ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...