Thursday, September 29, 2022

ಮಂಗಳೂರು ಮೂಲದ ಗ್ಯಾಂಗ್‌ಸ್ಟರ್‌ ಸುರೇಶ್ ಪೂಜಾರಿ ಐಬಿ-ಸಿಬಿಐ ವಶಕ್ಕೆ

ಮುಂಬೈ: ಮಂಗಳೂರು ಮೂಲದ ಗ್ಯಾಂಗ್‌ಸ್ಟರ್‌ ಹಾಗೂ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ ಸುರೇಶ್ ಪೂಜಾರಿಯನ್ನು ಮಂಗಳವಾರ ತಡರಾತ್ರಿ ಭಾರತಕ್ಕೆ ಕರೆತರಲಾಗಿದೆ.


ಆತನನ್ನು ಫಿಲಿಪೈನ್ಸ್​ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ ಸುರೇಶ್ ಪೂಜಾರಿ ಬಂದಿಳಿದ ನಂತರ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಐಬಿ ಮತ್ತು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುರೇಶ್ ಪೂಜಾರಿಯನ್ನು ತಮ್ಮ ಕಸ್ಟಡಿಗೆ ತೆಗೆದುಕೊಳ್ಳಲು ಈಗಾಗಲೇ ಮುಂಬೈ ಅಪರಾಧ ವಿಭಾಗದ ತಂಡವೊಂದು ದೆಹಲಿಗೆ ತೆರಳಿದೆ.

ಮುಂಬೈ ಮತ್ತು ಥಾಣೆ ಪೊಲೀಸರು ಕ್ರಮವಾಗಿ 2017 ಮತ್ತು 2018ರಲ್ಲಿ ಸುರೇಶ್ ಪೂಜಾರಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರು. 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೂಜಾರಿಯನ್ನು ಅಕ್ಟೋಬರ್‌ನಲ್ಲಿ ಫಿಲಿಪೈನ್ಸ್‌ನಲ್ಲಿ ಬಂಧಿಸಲಾಗಿತ್ತು.

ಸುರೇಶ್ ಪೂಜಾರಿ ವಿರುದ್ಧ ಥಾಣೆಯಲ್ಲಿ ಒಟ್ಟು 23 ಸುಲಿಗೆ ಪ್ರಕರಣಗಳು ದಾಖಲಾಗಿದ್ದು, ಆತ ಗ್ಯಾಂಗ್​ಸ್ಟರ್ ರವಿ ಪೂಜಾರಿಯ ಹತ್ತಿರದ ಸಂಬಂಧಿಯಾಗಿದ್ದನು. 2007ರಲ್ಲಿ ಆತ ರವಿ ಪೂಜಾರಿಯಿಂದ ದೂರ ಸರಿದು ವಿದೇಶಕ್ಕೆ ಪರಾರಿಯಾಗಿದ್ದನು

LEAVE A REPLY

Please enter your comment!
Please enter your name here

Hot Topics

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...