BANTWAL
ವಿಟ್ಲದಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಇಬ್ಬರು ಅರೆಸ್ಟ್
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತ ಆರೋಪಿಗಳು.
ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಶನಿವಾರ ಬೆಳಗ್ಗೆ ಕೊಳ್ನಾಡು ಗ್ರಾಮದ ಬೊಳ್ಪಾದೆ ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದರೆಂಬ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭ ಅಮಲಿನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು.
ತಕ್ಷಣ ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಕಳುಹಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಬ್ಬಂದಿ ಹೇಮರಾಜ್ ಹಾಗೂ ಇಲಾಖಾ ಜೀಪ್ ಚಾಲಕ ಅಶೋಕ್ ಕಾರ್ಯಚರಣೆಯಲ್ಲಿ ಹಾಜರಿದ್ದರು.
BANTWAL
ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೆಬಲ್ ಗಣೇಶ್ ಪ್ರಸಾದ್ ಮತ್ತು ಕಾನ್ ಸ್ಟೆಬಲ್ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
BANTWAL
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸದ ವಿದ್ಯಾರ್ಥಿನಿಗೆ ಪ್ರಶಸ್ತಿ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪೆರಾಜೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್ ಇದರ ಜಂಟಿ ಆಶ್ರಯದಲ್ಲಿ ಡಿ.1ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆದಿತ್ತು.
ಈ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ ಭಾಗವಹಿಸಿ ಪ್ರೌಢ ಶಾಲಾ ವಿಭಾಗದ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಇವರನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA6 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!