Connect with us

DAKSHINA KANNADA

ಮಂಗಳೂರಿನಲ್ಲಿ ಕಸ ವಿಂಗಡನೆ ಗೊಂದಲ : ಜಾಗೃತಿ ಮೂಡಿಸಲು ಸ್ವತಃ ಫೀಲ್ಡಿಗಿಳಿದ ಮೇಯರ್..!

Published

on

ಮಂಗಳೂರು : ಸಾರ್ವಜನಿಕರಿಗೆ ಕಸ ವಿಂಗಡಣೆ ಕುರಿತು ಅರಿವು ಮೂಡಿಸಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳಿಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಇಂದು ( ಗುರುವಾರ) ಭೇಟಿ ನೀಡಿದರು.

ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ಮಥಾಯಿಸ್ ಲೇ ಔಟ್ ನಲ್ಲಿನ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಆಯುಕ್ತರಾದ ಅಕ್ಷಯ್ ಶ್ರೀಧರ್ ರವರು ಕೆಲವು ಮನೆಗಳಲ್ಲಿ ಕಸ ವಿಂಗಡಣೆ ಮಾಡದೆ ನೀಡುವುದರಿಂದ ತ್ಯಾಜ್ಯ ವಿಲೇವಾರಿಗೆ ಸಮಸ್ಯೆಯಾಗುತ್ತಿದ್ದು, ಇದನ್ನು ಪರಿಶೀಲಿಸಿ ಮನೆಗಳಿಗೆ ಭೇಟಿ ನೀಡಿ ಸಾವ೯ಜನಿಕರಿಗೆ ಕಸವನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ವಿಂಗಡಣೆ ಮಾಡಿ ನೀಡುವಂತೆ ಮನವರಿಕೆ ಮಾಡಿದರು.

ಈ ಕುರಿತು ಸುತ್ತಮುತ್ತಲಿನ ಜನರಲ್ಲಿ ಅರಿವು ಮೂಡಿಸಿ ಕಸ ವಿಂಗಡಣೆ ಮಾಡಿ ತ್ಯಾಜ್ಯವನ್ನು ನೀಡುವ ಕಾಯ೯ವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

ಈ ಸಮಯದಲ್ಲಿ ಮಾತನಾಡಿದ ಮೇಯರ್ ರವರು ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣೆಯನ್ನು ವೈಜ್ಞಾನಿಕವಾಗಿ ನಡೆಸುತ್ತಿದ್ದು, ಸಾವ೯ಜನಿಕರು ಕಸ ವಿಂಗಡಣೆ ಮಾಡಿ ನೀಡುವುದರಿಂದ ಪಚ್ಚನಾಡಿಯಲ್ಲಿನ ಘನತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಸಂಸ್ಕರಣ ಕಾಯ೯ ಸುಲಭವಾಗಿ ನೆರವೇರುತ್ತಿದೆ.

ಇದರಿಂದ ತ್ಯಾಜ್ಯವನ್ನು ಶೀಘ್ರ ಗೊಬ್ಬರಕ್ಕೆ ಪರಿವತಿ೯ಸುವಲ್ಲಿ ಸಹಾಯವಾಗುವುದು. ಅಲ್ಲದೇ ಕಸ ಶೇಖರಣೆಯಲ್ಲಿನ ಇಳಿತದಿಂದ ತ್ಯಾಜ್ಯವು ಲ್ಯಾಂಡ್ ಫಿಲ್ ಸೈಟ್ ಗೆ ಹೋಗದೆ ನೇರವಾಗಿ ಘನತ್ಯಾಜ್ಯ ಘಟಕದಲ್ಲಿ ತ್ಯಾಜ್ಯ ಸಂಸ್ಕರಣೆಯನ್ನು ಮಾಡಿ ಕಳೆದ ಬಾರಿ ಲ್ಯಾಂಡ್ ಫಿಲ್ ಸೈಟ್ ನಲ್ಲಿ ಸಂಭವಿಸಿದ ದುರಂತ ಈ ಬಾರಿ ನಡೆಯದಂತೆ ಕ್ರಮ ವಹಿಸಲು ಸಹಾಯವಾಗಲಿದೆ.

ಈ ನಿಟ್ಟಿನಲ್ಲಿ ಸಾವ೯ಜನಿಕರು ಮೂಲದಿಂದಲೇ ಕಸವನ್ನು ವಿಂಗಡಿಸಿ ನೀಡಬೇಕಾಗಿ ಮನವಿ ಮಾಡಿದರು. ಮಂಗಳೂರು ನಗರವು ಸ್ವಚ್ಚ ನಗರವಾಗಿರುವುದರಿಂದ ಇದನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕತ೯ವ್ಯವಾಗಿರುತ್ತದೆ ಎನ್ನುವುದನ್ನು ಎಲ್ಲರು ಅರಿತು ಸಾಧ್ಯವಾದಲ್ಲಿ ಹಸಿ ಕಸ ಸಂಸ್ಕರಣ ಕಾಯ೯ವನ್ನು ಮನೆಯಲ್ಲಿಯೇ ನಿವ೯ಹಿಸುವಂತೆ ವ್ಯವಸ್ಥೆ ಮಾಡಲು ಈ ಮೂಲಕ ಕೇಳಿಕೊಂಡರು.

ತದನಂತರ ಪಾಲಿಕೆ ವ್ಯಾಪ್ತಿಯ ಕೆಲವು ಕಪ್ಪು ರಂದ್ರ(Balck Spot Area)ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ನಡುವೆ ವೆಲ್ಸ್ ಪೇಟೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಹೋಸ್ಟೆಲ್ ನ ಎದುರುಗಡೆ ಇರುವ ಕಪ್ಪು ರಂದ್ರ ಪ್ರದೇಶವನ್ನು ಪರಿಶೀಲಿಸಿ ಸದ್ರಿ ಪ್ರದೇಶವನ್ನು ಸ್ವಚ್ಚವಾಗಿ ಇಡಲು ಮುಂಜಾಗ್ರತ ಕ್ರಮವಾಗಿ ಸಿ.ಸಿ ಕ್ಯಾಮೆರಾ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳದಲ್ಲಿ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ, ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ಸದಸ್ಯರಾದ ಗಣೇಶ್ ಕುಲಾಲ್, ನಾಮನಿದೇ೯ಶಿತ ಸದಸ್ಯರಾದ ರಾಧಕೃಷ್ಣ, ಮತ್ತು ಆರೋಗ್ಯ ನಿರೀಕ್ಷಕರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

DAKSHINA KANNADA

ನಾಳೆ ನಿಮ್ಮೂರಿಗೆ ಬರ್ತಿದ್ದಾನೆ ಮೇಘರಾಜ: ತಂಪಾಗಲಿದೆ ಇಳೆ

Published

on

ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ಈ ಬಾರಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ದೂರವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಗಳಿದ್ದು, 85.2 ಸೆಂ.ಮಿ ಮಳೆ ಬೀಳುವ ನಿರೀಕ್ಷೆಗಳಿವೆ. ಜೂನ್​, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕ್ರಮವಾಗಿ 19.9 ಸೆಂ.ಮೀ., 27.1 ಸೆಂ.ಮೀ., ಆಗಸ್ಟ್​ 22 ಸೆಂ.ಮೀ ಹಾಗೂ 16.1 ಸೆಂಮೀ ಮಳೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.

ನಾಳೆ ಈ ಜಿಲ್ಲೆಗಳಲ್ಲಿ ಆಗಲಿದೆ ಮಳೆ

ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂಉರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Continue Reading

LATEST NEWS

Trending