Friday, July 1, 2022

ಕಾಪು: ಗ್ಯಾಸ್‌ ಸಿಲಿಂಡರ್‌ ಸ್ಪೋಟ ಪ್ರಕರಣದ ಮೃತರ ಸಂಖ್ಯೆ 4ಕ್ಕೇರಿಕೆ-ಇನ್ನಿಬ್ಬರಿಗೆ ಚಿಕಿತ್ಸೆ

ಉಡುಪಿ: ಇಲ್ಲಿನ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್‌ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಇಂದು 4ಕ್ಕೇರಿದೆ.


ಮಲ್ಲಾರು ಗ್ರಾಮದ ಗುಡ್ಡೇಕೆರಿ ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಮಾ.21ರಂದು ನಡೆದ ಸ್ಫೋಟದಲ್ಲಿ ಮೃತಪಟ್ಟವರು ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರನ್ನು ಗುಜರಿ ಅಂಗಡಿಯಲ್ಲಿ ಕಾರ್ಮಿಕರಾಗಿದ್ದ ಸಾಗರ ಮೂಲದ ನಯಾಝ್(36) ಮತ್ತು ವೀರಪ್ಪ ಎಂದು ಗುರುತಿಸಲಾಗಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಮಾ.21ರಂದು ಬೆಳಗ್ಗೆ ಗುಜರಿ ಅಂಗಡಿಯಲ್ಲಿ ಕಂಪ್ರೆಸರ್ ಅನ್ನು ಗ್ಯಾಸ್ ಕಟ್ಟರ್ ಮೂಲಕ ತುಂಡರಿಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿತ್ತು. ಈ ವೇಳೆ ಇಬ್ಬರು ಸಜೀವ ದಹನಗೊಂಡಿದ್ದರೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಬೆಳಪು ಗ್ರಾಮ ಪಂಚಾಯತ್ ಸದಸ್ಯ ಫಹೀಮ್ ಮಣಿಪಾಲ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಕನ್ಹಯ್ಯಾಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...