Friday, July 1, 2022

ಉಡುಪಿಯ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್: ಇಬ್ಬರು ಸಜೀವ ದಹನ-ಮೂವರು ಗಂಭೀರ

ಉಡುಪಿ: ಇಲ್ಲಿನ ಕಾಪು ಸಮೀಪ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.


ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಮೃತರು. ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.


ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಡ್ಜ್‌ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.
ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ.

2 COMMENTS

LEAVE A REPLY

Please enter your comment!
Please enter your name here

Hot Topics

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...