ಉಡುಪಿಯ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್: ಇಬ್ಬರು ಸಜೀವ ದಹನ-ಮೂವರು ಗಂಭೀರ

ಉಡುಪಿ: ಇಲ್ಲಿನ ಕಾಪು ಸಮೀಪ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಮೃತರು. ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಿ ಅಂಗಡಿಯಲ್ಲಿ … Continue reading ಉಡುಪಿಯ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್: ಇಬ್ಬರು ಸಜೀವ ದಹನ-ಮೂವರು ಗಂಭೀರ