kerala
ತಂದೆ-ತಾಯಿಯನ್ನು ಕೂಡಿ ಹಾಕಿ ಮಗಳು ಪ್ರಿಯಕರನೊಂದಿಗೆ ಪರಾರಿ !!
Published
2 hours agoon
ಕುಂಬಳೆ: ತನ್ನ ಪ್ರಿಯತಮನಿಗಾಗಿ 19 ರ ಹರೆಯದ ಯುವತಿಯೊಬ್ಬಳು ಹೆತ್ತ ತಂದೆ ತಾಯಿಯನ್ನು ಮನೆಯ ಕೊಠಡಿಯಲ್ಲಿ ಕೂಡಿ ಹಾಕಿ, ಕಾರು ಸಹಿತ ಪರಾರಿಯಾದ ಘಟನೆ ಕಯ್ನಾರು ಶಾಂತಿಯೋಡು ಬಳಿ ಸೋಮವಾರ (ನ.25) ದಂದು ನಡೆದಿದೆ.
ಯುವತಿ ಕೊಂಡೊಯ್ದ ಕಾರು ಬಂದ್ಯೋಡು ಮೀಪಿರಿಯಲ್ಲಿ ಪತ್ತೆಯಾಗಿದೆ.
ಮೊದಲು ಯುವತಿ ಒಬ್ಬ ಯುವಕನನ್ನು ಪ್ರೀತಿಸಿತ್ತಿದ್ದಳು. ಈಕೆಗೆ ಮನೆಯವರ ಒಪ್ಪಿಗೆ ಮೇರೆಗೆ ಇನ್ನೋರ್ವ ಯುವಕನ ಜೊತೆಗೆ ಮದುವೆ ಮಾಡಿಸಲಾಗಿತ್ತು. ಆದರೆ ಈ ವಿವಾಹ ಎರಡು ತಿಂಗಳೊಳಗೆ ಮುರಿದು ಬಿದ್ದಿತ್ತು. ನತರ ಯುವತಿ ಒಮ್ಮೆ ನಾಪತ್ತೆಯಾಗಿದ್ದು, ಮರುದಿನ ವಾಪಸ್ ಮನೆಗೆ ಬಂದಿದ್ದಳು.
ಇದನ್ನೂ ಒದಿ : ಕೇರಳ ಹುಡುಗ, ಅಸ್ಸಾಂ ಹುಡುಗಿ ಪ್ರೇಮ್ ಕಹಾನಿ; ಪ್ರೇಯಸಿಯ ಕೊಂ*ದು ಪ್ರೇಮಿ ಪರಾರಿ
ಅನಂತರ ಪೋಷಕರು ಈಕೆಯನ್ನು ಮತ್ತೊಬ್ಬ ಯುವಕನೊಂದಿಗೆ ವಿವಾಹ ಮಾಡಿಸಲು ಆಲೋಚನೆ ಮಾಡುತ್ತಿರುವ ಸಂದರ್ಭದಲ್ಲಿಯೇ ಯುವತಿಯು ತನ್ನ ತಂದೆ, ತಾಯಿಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಬಳಿಕ ಪರಾರಿಯಾಗಿದ್ದಾಳೆ. ಪೋಷಕರು ನೀಡಿದ ದೂರಿನ ಅನ್ವಯ, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
bangalore
ಕೇರಳ ಹುಡುಗ, ಅಸ್ಸಾಂ ಹುಡುಗಿ ಪ್ರೇಮ್ ಕಹಾನಿ; ಪ್ರೇಯಸಿಯ ಕೊಂ*ದು ಪ್ರೇಮಿ ಪರಾರಿ
Published
1 day agoon
26/11/2024ಮಂಗಳೂರು/ಬೆಂಗಳೂರು: ಕೇರಳದ ಹುಡುಗ ಹಾಗೂ ಅಸ್ಸಾಂ ಹುಡುಗಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಪ್ರೀತಿಗೆ ಬಿದ್ದಿದ್ದಾರೆ. ಆದರೆ, ಅಪಾರ್ಟ್ಮೆಂಟ್‌ನಲ್ಲಿ ಪ್ರೇಮಿಯೇ ತನ್ನ ಪ್ರೇಯಸಿಯನ್ನು ಕೊ*ಲೆ ಮಾಡಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ಇಂದಿರಾನಗರ ರಾಯಲ್ ಲಿವಿಂಗ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಕೊ*ಲೆಯಾದ ಯುವತಿ ಅಸ್ಸಾಂ ರಾಜ್ಯದ ಮಾಯಾ. ಆರೋಪಿಯನ್ನು ಕೇರಳದ ಆರವ್ ಅನಾಯ್ ಎಂದು ಗುರುತಿಸಲಾಗಿದೆ.
ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯೊoದರಲ್ಲಿ ಜೊತೆಯಾಗಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಉಂಟಾದ ಪರಿಚಯದಿಂದ ಸ್ನೇಹ ಬೆಳೆದು ಪ್ರೀತಿಯಾಗಿತ್ತು. ನಂತರ, ಇಬ್ಬರೂ ಮನೆಯನ್ನು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡುತ್ತಿದ್ದರು. ನಾಲ್ಕೈದು ದಿನಗಳ ಹಿಂದೆ ಇಂದಿರಾನಗರದ ದಿ ರಾಯಲ್ ಲಿವಿಂಗ್ ಎಂಬ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಇದ್ದರು.
ಈ ವೇಳೆ, ಏನೋ ಕ್ಷುಲ್ಲಕ ಕಾರಣಕ್ಕೆ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಉಂಟಾದ ಜಗಳದ ವೇಳೆ ಪ್ರೇಮಿ ಆರವ್ ತನ್ನ ಪ್ರೇಯಸಿ ಮಾಯಾಗೆ ಚಾ*ಕುವಿನಿಂದ ಇರಿದು ಕೊ*ಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕೊ*ಲೆ ನಡೆದು ಮೂರು ದಿನಗಳ ನಂತರ ಮನೆಯಿಂದ ದು*ರ್ವಾಸನೆ ಬಂದ ನಂತರ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು, ಚಾ*ಕುವಿನಿಂದ ಇರಿದು ಕೊ*ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Baindooru
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
Published
4 days agoon
23/11/2024By
NEWS DESK2ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.
ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.
ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.
Baindooru
ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
Published
4 days agoon
23/11/2024By
NEWS DESK2ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.
ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ
ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
LATEST NEWS
ನಂಬಿದವರ ಕೈ ಬಿಡದ ಪದಾಳ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ
ನಿಮ್ಮ ನಾಯಿಗಳನ್ನು ಪಾರ್ಕ್ಗೆ ಕೊಂಡೊಯ್ಯುತ್ತೀರಾ? ಹೈಕೋರ್ಟ್ ಹೊಸಮಾರ್ಗಸೂಚಿ ಗಮನಿಸಿ!
ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಿ ಕೊಟ್ಟ ಈ ಮಹಿಳೆ ಯಾರು ?
ಎಟಿಎಂ ಹೊತ್ತೊಯ್ದರೂ ಸಿಗದ ಹಣ; ನೀಲಗಿರಿ ತೋಪಿನಲ್ಲಿ ಯಂತ್ರ ಬಿಟ್ಟು ಪರಾರಿಯಾದ ಖದೀಮರು
ಬೆಚ್ಚಿ ಬೀಳಿಸಿದ ಯುವತಿ ಕೊ*ಲೆ ಪ್ರಕರಣ; ಪ್ರೇಯಸಿಯ ಶ*ವದೊಂದಿಗೆ ಒಂದು ದಿನ ಕಳೆದಿದ್ದ ಯುವಕ!
ಟ್ರಕ್ಗೆ ಸ್ಕಾರ್ಪಿಯೊ ಡಿ*ಕ್ಕಿ – ಭೀಕರ ಅಪಘಾ*ತಕ್ಕೆ ಐವರು ವೈದ್ಯರ ದುರ್ಮ*ರಣ
Trending
- Baindooru5 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION6 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS4 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- Baindooru4 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ