Sunday, November 27, 2022

ಸ್ಫೋಟಕ ಪತ್ತೆ ಕಾರ್ಯದಲ್ಲಿ ದಕ ಪೊಲೀಸರಿಗೆ ಬೆನ್ನೆಲುಬಾಗಿದ್ದ ಗೀತಾ ಇನ್ನಿಲ್ಲ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ ಇಂದು (ಸೆ.3) ಸಾವನ್ನಪ್ಪಿದೆ.

ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದೆ.

2011ರಲ್ಲಿ ಜನಿಸಿದ ಗೀತಾ ಬೆಂಗಳೂರಿನನಲ್ಲಿ 11 ತಿಂಗಳ ಸುದೀರ್ಘ ತರಬೇತಿಯ ನಂತರ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಸೇರಿತ್ತು.

ತನ್ನ 11 ವರ್ಷಗಳ ಸುಧೀರ್ಘ ಸೇವೆ ಸಂದರ್ಭ ಆಕೆ ಲೆಕ್ಕವಿಲ್ಲದಷ್ಟು ಸ್ಫೋಟಕ ಪತ್ತೆ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ.

ವಿಶೇಷವಾಗಿ ಜಿಲ್ಲೆಗಳಿಗೆ ಆಗಮಿಸುವ ಗಣ್ಯ ವ್ಯಕ್ತಿಗಳ ಭೇಟಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳ ಸಮಯದಲ್ಲಿ ಪೊಲೀಸರಿಗೆ ಭದ್ರತಾ ಕಾರ್ಯಾಚರಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಳು.

ಗೀತಾಳ ಅಗಲುವಿಕೆಗೆ ಪೊಲೀಸ್ ಇಲಾಖಾಧಿಕಾರಿಗಳು ಮತ್ತು ಸಿಬಂದಿ ವರ್ಗ ಕಂಬನಿ ಮಿಡಿದಿದೆ.

ಗೀತಾಳಿಗೆ ನಾಳೆ ನಗರ ಪೊಲೀಸ್ ಕಚೇರಿ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...