Home ಪುತ್ತೂರು ಗೆಜ್ಜೆಗಿರಿ ಕ್ಷೇತ್ರಕ್ಕೆ ಹೊರಟ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ

ಗೆಜ್ಜೆಗಿರಿ ಕ್ಷೇತ್ರಕ್ಕೆ ಹೊರಟ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ

ಗೆಜ್ಜೆಗಿರಿ ಕ್ಷೇತ್ರಕ್ಕೆ ಹೊರಟ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ

ಮಂಗಳೂರು: ದೇಯಿಬೈದೆತಿ ಹಾಗೂ ಕೋಟಿಚೆನ್ನಯ್ಯರ ಮೂಲಸ್ಥಾನವಾದ ಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನಬಿತ್ತಿಲ್ ನಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ ಮನೆಮಾಡಿದೆ. ಕರಾವಳಿಯಾದ್ಯಂತ ಗೆಜ್ಜೆಗಿರಿಯತ್ತ ಹೊರೆಕಾಣಿಕೆಗಳು ಹರಿದುಬರುತ್ತಿದೆ. ನಿನ್ನೆಯಿಂದ ಬ್ರಹ್ಮಕಲಶೊತ್ಸವ ಸಂಭ್ರಮ ಆರಂಭವಾಗಿದ್ದು, ಇಂದು ಕ್ಷೇತ್ರಕ್ಕೆ ಮಂಗಳೂರು ನಗರದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಬೆಳಿಗ್ಗೆ ಹೊರಟ ಹೊರೆಕಾಣಿಕೆ ಮೆರವಣಿಗೆಗೆ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಚಾಲನೆ ನೀಡಿದರು. ನಂತರ ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ ತಲುಪಿದ ಹೊರೆಕಾಣಿಕೆ ಮೆರವಣಿಗೆಗೆ ಅಲ್ಲೂ ಒಂದಿಷ್ಟು ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹೊರೆಕಾಣಿಕೆ ಸಮರ್ಪಿಸಲಾಯಿತು.

ಇನ್ನು ಬಂಟ್ವಾಳದ ಬಿ.ಸಿ ರೋಡ್ ನಲ್ಲಿರುವ ನಾರಾಯಣ ಗುರು ಮಂದಿರ ಹಾಗೂ ಅಂತಿಮವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಒಂದುಗೂಡಿ, ಆ ಬಳಿಕ ಗೆಜ್ಜೆಗಿರಿ ಕ್ಷೇತ್ರದತ್ತ ಹೊರೆಕಾಣಿಕೆ ಮೆರವಣಿಗೆ ಹೊರಡಲಿರುವುದು. ಒಟ್ಟಿನಲ್ಲಿ ಸಂಜೆ ವೇಳೆಗೆ ಭವ್ಯ ಮೆರವಣಿಗೆಯೊಂದಿಗೆ ಗೆಜ್ಜೆಗಿರಿ ನಂದನಬಿತ್ತಿಲ್ ಸಾನಿಧ್ಯವನ್ನ ಹೊರೆಕಾಣಿಕೆ ತಲುಪಿ ಬ್ರಹ್ಮಕಲಶೋತ್ಸವಕ್ಕೆ ಇನ್ನಷ್ಟು ಮೆರುಗು ನೀಡಲಿದೆ.. ಹೊರೆಕಾಣಿಕೆಯ ಮುಂದಾಳತ್ವವನ್ನ ಪ್ರಮುಖರಾದ ಪದ್ಮರಾಜ್, ಚಿತ್ತರಂಜನ್, ದಯಾನಂದ ಮತ್ತಿತ್ತರರು ವಹಿಸಿಕೊಂಡಿದ್ದಾರೆ..

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...