Connect with us

DAKSHINA KANNADA

ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು

ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ ವ್ಯಾಪ್ತಿಯಲ್ಲಿ ಆದಿತ್ಯವಾರ ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಸಭಾಂಗಣದಲ್ಲಿ ಎಂ.ಪಿ. ಸಿಲ್ಕ್ ನ ಮಾಲಕ ಎಂ ಪಿ ದಿನೇಶ್ ಬಿಡುಗಡೆಗೊಳಿಸಿದರು.


ನೇಮೋತ್ಸವ ಸಮಿತಿ ಗೌರವಾಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ ಮಾರ್ಗದರ್ಶನದಲ್ಲಿ ಜರಗಿದ ಸಭೆಯಲ್ಲಿ ಆಮಂತ್ರಣ ಪತ್ರಿಕೆಯನ್ನು

ಜಿಲ್ಲೆಗಳ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ಸ್ಥಳೀಯ ಸಮಾಜದ ಸಂಘ ಸಂಸ್ಥೆಗಳ ಮೂಲಕ ತಲುಪಿಸಿ ಅನ್ಯ ರಾಜ್ಯಗಳಲ್ಲಿ ಹಾಗೂ

ವಿದೇಶಗಳಲ್ಲಿ ನೆಲೆಸಿರುವ ಭಕ್ತರಿಗೆ ವಾಟ್ಸಾಪ್ ಹಾಗೂ ಇತರ ಆನ್ಲೈನ್ ಮಾಧ್ಯಮ ಗಳ ಮೂಲಕ ವಿಶ್ವಾದ್ಯಂತ ನೆಲೆಸಿರುವ ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ತಲುಪಿಸಿ ಈ ಮಹೋತ್ಸವಕ್ಕೆ ಆಮಂತ್ರಿಸಲು ತೀರ್ಮಾನಿಸಲಾಯಿತು.


ಜಾತ್ರಾಮಹೋತ್ಸವದ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನಲ್ಲಿ ಮಾರ್ಚ್ 3 ಬೆಳಿಗ್ಗೆ 11ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಾರಂಭಗೊಂಡು ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಮೂಲಕ

ಮಧ್ಯಾಹ್ನ 1ಕ್ಕೆ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘ ತಲುಪಿ ಅಲ್ಲಿಂದ ಮಧ್ಯಾಹ್ನ 2 ಕ್ಕೆ ವಿವಿಧೆಡೆ ಗಳಿಂದ ಆಗಮಿಸುವ ಹೊರೆಕಾಣಿಕೆ ಮೆರವಣಿಗೆ ಜೊತೆಯಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರಡಲಿದೆ.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ವಿಶ್ವಬಿಲ್ಲವರ ಪಾಲ್ಗೊಳ್ಳುವಿಕೆಯಿಂದ

ನಿರ್ಮಾಣ ಗೊಂಡ ಮಹಾ ಮಾತೆ ದೇಯಿ ಬೈದೆತಿ, ಕೋಟಿ ಚೆನ್ನಯರ ಪ್ರಮುಖ ಆರಾಧನಾ ಸ್ಥಳವಾಗಿದೆ.

ವಿಶ್ವಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಶ್ರೀ ಕ್ಷೇತ್ರವನ್ನು ನಿರ್ಮಿಸಿದ್ದಾರೆ ಹಾಗೂ ಇಂದು ಜಾತಿ ಮತವನ್ನು ಮೀರಿ ಲಕ್ಷಾಂತರ ದೇಯಿ ಬೈದೆತಿ,

 

ಕೋಟಿ ಚೆನ್ನಯರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಇಲ್ಲಿಯ ಕಾರ್ಣಿಕ ಶಕ್ತಿಗಳ ಆಶೀರ್ವಾದವನ್ನು ಪಡೆಯುತ್ತಿದ್ದಾರೆ ಎಂದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಪ್ರಾಸ್ತಾವಿಕವಾಗಿ ಮಾತನಾಡಿ ಪುತ್ತೂರು ಪ್ರದೇಶಕ್ಕೆ ಸೀಮಿತವಾಗಿದ್ದ ಪಡುಮಲೆಯ ದೇಯಿ ಬೈದೆತಿ

ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ನಂತರ ಧಾರ್ಮಿಕತೆಯ ಜೊತೆ ಸಾಮಾಜಿಕ ಜಾಗ್ರತಿಯ ಮೂಲಕ

ಜಿಲ್ಲೆ ರಾಜ್ಯ ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದ ಪರಮಪಾವನ ಪುಣ್ಯಕ್ಷೇತ್ರವಾಯಿತು ಎಂದರು.

ಕಾರ್ಯಕ್ರಮದಲ್ಲಿ ಜಾತ್ರೋತ್ಸವದ ಗೌರವ ಸಲಹೆಗಾರರಾದ ಸತ್ಯಜಿತ್ ಸುರತ್ಕಲ್, ವಸಂತ್ ಪೂಜಾರಿ ಅಧ್ಯಕ್ಷರು ಬಾಕಿಲ ಗರೋಡಿ, ಪ್ರೇಮ್ ಸನಿಲ್ ಅಧ್ಯಕ್ಷರು ಕನಕರ ಬೆಟ್ಟು ಗರೋಡಿ,

ಜಯಾನಂದ ಎಂ ಅಧ್ಯಕ್ಷ ರು ಗುರು ಚಾರಿಟೇಬಲ್ ಟ್ರಸ್ಟ್, ಭರತೇಶ್ ಅಧ್ಯಕ್ಷರು ಕಂಕನಾಡಿ ಬಿಲ್ಲವ ಸಂಘ,

ದಿನೇಶ್ ಅಂಚನ್ ಅಧ್ಯಕ್ಷರು ಜಪ್ಪಿನಮೊಗೇರು ಬಿಲ್ಲವ ಸಂಘ, ಪುರುಷೋತ್ತಮ ಪೂಜಾರಿ ಅಧ್ಯಕ್ಷರು ಶ್ರೀ ನಾರಾಯಣ ಗುರು ಸಂಘ ಕೋಡಿಕಲ್, ಚಂದ್ರಶೇಖರ್ ಅಧ್ಯಕ್ಷ ರು ಕಾವೂರು ಬಿಲ್ಲವ ಸಂಘ,

ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು ಮಂಗಳಾ ದೇವಿ ಬಿಲ್ಲವ ಸಂಘ, ಯೋಗಿಶ್ ಅಧ್ಯಕ್ಷರು ಸತ್ತಿಕಲ್ಲು ಬಿಲ್ಲವ ಸಂಘ, ಉಮಾನಾಥ್ ನೀರ್ ಮಾರ್ಗ ಬಿಲ್ಲವ ಸಂಘ,

ವಿವೇಕ್ ಕೋಟ್ಯಾನ್ ಸುರತ್ಕಲ್ ಅಧ್ಯಕ್ಷರು ಯುವವಾಹಿನಿ ಘಟಕ, ಸುನೀತಾ ಅಧ್ಯಕ್ಷರು ಯುವವಾಹಿನಿ ಮಹಿಳಾ ಘಟಕ ಮಂಗಳೂರು, ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷ ರಾದ ನಯನ ಸುರೇಶ್,

ಕಾರ್ಪೊರೇಟರ್ ಗಳಾದ ಸಂದೀಪ್ ಗರೋಡಿ, ಅನಿಲ್ ಪೂಜಾರಿ ಪಂಜಿಮುಗೇರು, ಪ್ರಮುಖರಾದ ಕಮಲಾಕ್ಷ ಬೋಳಾರ್, ಭಾಸ್ಕರ್ ಉಪ್ಪಳಿಗೆ, ಕ್ಷೇತ್ರಾಡಳಿತ ಸಮಿತಿಯ ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ , ಕಾರ್ಯದರ್ಶಿಗಳಾದ ಚಂದ್ರ ಶೇಖರ್ ಉಚ್ಚಿಲ್,

ಮೋಹನ್ ದಾಸ್ ಬಂಗೇರ ವಾಮಂಜೂರು, ಕಾರ್ಯಕಾರಿ ಸದಸ್ಯರಾದ ನವೀನ್ ಸುವರ್ಣ, ಕಾನೂನು ಸಲಹೆಗಾರರಾದ ನವನೀತ್ ಹಿಂಗಾಣಿ, ನೇಮೋತ್ಸವ ಸಮಿತಿಯ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ,

ರವೀಂದ್ರ ಬಂಗೇರ ಕೋಣಾಜೆ,ಕಾರ್ಯಾಲಯ ಸಮಿತಿಯ ರಾಮಚಂದ್ರ ದೇರಬೈಲ್, ಗೆಜ್ಜೆಗಿರಿ ಸುರತ್ಕಲ್ ವಲಯದ ಅಧ್ಯಕ್ಷರಾದ ಮಧುಸೂಧನ್ ಇಡ್ಯಾ, ಕಾರ್ಯ ದರ್ಶಿ ಲಕ್ಷ್ಮಣ್ ಇಡ್ಯಾ,

ಗೌರವ ಸಲಹೆಗಾರರಾದ ನಾಗೇಶ್ ಬೈಕಂಪಾಡಿ, ಬಿರುವೆರ್ ಕುಡ್ಲ ಕೇಂದ್ರ ಸಮಿತಿ, ಯುವವಾಹಿನಿ ಕೇಂದ್ರ ಸಮಿತಿ,

ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ, ಮಹಿಳಾ ಬಿಲ್ಲವ ವೇದಿಕೆಗಳು, ವಿವಿಧ ಶ್ರೀ ನಾರಾಯಣ ಗುರು ಬಿಲ್ಲವ ಸಂಘಗಳು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದರು.

ಅಷ್ಟೇ ಅಲ್ಲದೆ ಜಾತ್ರಾ ಮಹೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

DAKSHINA KANNADA

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!

Published

on

ಮಂಗಳೂರು: ನಾವು ಯಾವುದೇ ಹಿಂದೂ ಧರ್ಮದವರ ಮನೆಗೆ ಹೋದಾಗ ಅಲ್ಲಿ ಏನು ನೋಡುತ್ತೇವೊ ಗೊತ್ತಿಲ್ಲ ಆದರೆ ಮನೆಯ ಎದುರೊಂದು ತುಳಸಿ ಗಿಡ ಇದ್ದೇ ಇರುತ್ತದೆ. ಯಾಕೆಂದರೆ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನ ಕೊಡುತ್ತಾರೆ. ಬೆಳಗ್ಗೆ ಎದ್ದ ಕೂಡಲೇ ಮಹಿಳೆಯರು ದೇವರಿಗೆ ದೀಪ ಇಟ್ಟು ಬಳಿಕ ತುಳಸಿ ಗಿಡಕ್ಕೆ ಕಲಶದಲ್ಲಿ ನೀರನ್ನು ಹಾಕುತ್ತಾರೆ.

ಕೆಲವರ ಮನೆಯಲ್ಲಿ ಒಂದೇ ತುಳಸಿ ಗಿಡವನ್ನು ನೋಡಿದರೆ ಇನ್ನು ಕೆಲವರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ಇರುತ್ತದೆ. ಆರೋಗ್ಯದ ಪ್ರಯೋಜನವಾಗಿಯೂ ಇದನ್ನು ಬಳಸುತ್ತಾರೆ. ಆದರೆ ಕೆಲವೊಂದು ನಿಯಮವನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ತುಳಸಿ ಗಿಡವನ್ನು ಇಟ್ಟು ಕೊಂಡರೆ ಏನಾಗುತ್ತದೆ ಎಂಬುದರ ಬಗ್ಗೆ ತಿಳಿಯೋಣ.

ತುಳಸಿ ಗಿಡ ಬೆಸ ಸಂಖ್ಯೆಯಲ್ಲಿ ಇರಬೇಕು:

ಕೆಲವೊಂದು ಮನೆಯಲ್ಲಿ ತುಳಸಿ ಗಿಡ ಎಲ್ಲಾ ಕಡೆಯಲ್ಲಿ ಬೆಳೆಯುತ್ತದೆ. ಇನ್ನು ಕೆಲವು ಮನೆಯಲ್ಲಿ ನೆಟ್ಟ ಒಂದು ಗಿಡವೂ ಸರಿಯಾಗಿ ಉಳಿಯುವುದು ಕಷ್ಟ. ಆದರೆ ತುಳಸಿ ಗಿಡದ ಸಂಖ್ಯೆ ಬೆಸಸಂಖ್ಯೆಯಲ್ಲಿರಬೇಕು. 1, 3, 5, 7 ಹೀಗೆ ಬೆಸಸಂಖ್ಯೆಯಲ್ಲಿ ತುಳಸಿ ಗಿಡವನ್ನು ಮನೆಯಲ್ಲಿಟ್ಟುಕೊಳ್ಳಬೇಕು. ಈ ರೀತಿಯಾಗಿ ಇದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡವನ್ನು ಹೀಗೆ ನೆಡಬೇಕು:

ತುಳಸಿ ಗಿಡವನ್ನು ನೇರವಾಗಿ ನೆಲದ ಮೇಲೆ ನೆಡಬಾರದು. ಇಂತಹ ತಪ್ಪನ್ನು ಎಂದಿಗೂ ಮಾಡಬಾರದು. ಈ ಸಸಿಯನ್ನು ಕುಂಡದಲ್ಲಿ ಅಥವಾ ತೊಟ್ಟೆಯಲ್ಲಿ ಪ್ರತ್ಯೇಕವಾಗಿ ನೆಡಬೇಕು. ಕುಂಡದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಯಾವೂದೇ ರೀತಿಯ ಅಶುದ್ಧತೆಗಳು ತುಳಸಿ ಗಿಡವನ್ನು ಮುಟ್ಟುವುದಿಲ್ಲ.

ಈ ದಿನದಂದು ತುಳಸಿಯನ್ನು ಕೀಳಬಾರದು:

ತುಳಸಿ ಗಿಡವನ್ನು ಎಲ್ಲಾ ದಿನ ನೆಡಬಾರದು. ತುಳಸಿಯನ್ನು ಭಾನುವಾರದಂದು ಮತ್ತು ಏಕಾದಶಿಯ ದಿನದಂದು ನೆಡಬಾರದು ಮತ್ತು ಅದರ ಎಲೆಗಳನ್ನು ತೆಗೆಯಬಾರದು. ಈ ಎರಡು ದಿನ ತುಳಸಿಯನ್ನು ಕೀಳುವುದು ಮತ್ತು ಮುಟ್ಟುವುದು ಮಾಡಿದರೆ ಅಶುಭವೆಂದು ಹೇಳುತ್ತಾರೆ.

ತುಳಸಿಯನ್ನು ನಾವು ಮನೆಯಲ್ಲಿ ನೆಡುವಾಗ ಈ ಮೇಲಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ನೆಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಸಮ ಸಂಖ್ಯೆಯಲ್ಲಿ ತುಳಸಿ ಗಿಡವಿದ್ದರೆ ಯಾವೂದಾದರು ಒಂದನ್ನು ಬೇರೆಯವರಿಗೆ ದಾನ ಮಾಡಿ. ಇದರಿಂದ ಯಾವೂದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

Continue Reading

DAKSHINA KANNADA

ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

Published

on

ಉಪ್ಪಿನಂಗಡಿ : ಕೋವಿಶೀಲ್ಡ್‌ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.


ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.

ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್‌ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.

 

Continue Reading

LATEST NEWS

Trending