Thursday, August 11, 2022

ಭೂಸೇನೆಯ 29ನೇ ಮುಖ್ಯಸ್ಥರಾಗಿ ಲೆ.ಜ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ

ನವದೆಹಲಿ: ವಿಶ್ವದ ಶ್ರೇಷ್ಠ ಸೇನೆಗಳಲ್ಲಿ ಒಂದಾಗಿರುವ ಭಾರತೀಯ ಭೂಸೇನೆಯ 29 ನೇ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್‌ ಮನೋಜ್‌ ಪಾಂಡೆ ಸೇನಾ ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂ.ಎಂ. ನರವಣೆ ಅವರು ಇಂದು ನಿವೃತ್ತರಾಗಿದ್ದಾರೆ.


1962ರ ಮೇ 6ರಂದು ಮಹಾರಾಷ್ಟ್ರದಲ್ಲಿ ಜನಿಸಿದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿ ಪಾಂಡೆ, 1982ರ ಡಿಸೆಂಬರ್ 24ರಂದು ಭಾರತೀಯ ಸೇನೆಯ ಕಾರ್ಪ್ಸ್ ಆಫ್ ಇಂಜಿನಿಯರ್ಸ್ (ದಿ ಬಾಂಬೆ ಸಪ್ಪರ್ಸ್) ನಲ್ಲಿ ನೇಮಕಗೊಂಡರು.

39 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆಯ ಅವಧಿಯಲ್ಲಿ ಅವರು ವಿವಿಧ ಕಮಾಂಡ್, ಸಿಬ್ಬಂದಿ ಮತ್ತು ಬೋಧನಾ ನೇಮಕಾತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಜನರಲ್‌ ಪಾಂಡೆ ಅವರು ಅಂಡಮಾನ್ ಮತ್ತು ನಿಕೋಬಾರ್‌ನ ಕಮಾಂಡರ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ.

ಸೇನಾ ಪಡೆ ಮುಖ್ಯಸ್ಥರಾಗಲಿರುವ ಮನೋಜ್ ಪಾಂಡೆ ಸೇನಾಪಡೆಯ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಎಂಜಿನಿಯರ್ ಎನಿಸಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...

ಮಂಗಳೂರು: ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್‌ ಜೆಟ್‌...