Connect with us

LATEST NEWS

Ghaziabad: ಶಾಲಾ ಬಸ್ ಗೆ ಕಾರು ಡಿಕ್ಕಿ- 6 ಜನರ ದುರ್ಮರಣ

Published

on

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್ ಮತ್ತು ಎಸ್ ಯುವಿ ಕಾರುಗಳ ನಡುವೆ ಅಪಘಾತ ನಡೆದಿದ್ದು, ಇದರಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಜು. 11ರ ಗಾಜಿಯಾಬಾದ್ ನಲ್ಲಿ ನಡೆದಿದೆ.

ಗಾಜಿಯಾಬಾದ್ : ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್ ಮತ್ತು ಎಸ್ ಯುವಿ ಕಾರುಗಳ ನಡುವೆ ಅಪಘಾತ ನಡೆದಿದ್ದು, ಇದರಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಜು. 11ರ ಗಾಜಿಯಾಬಾದ್ ನಲ್ಲಿ ನಡೆದಿದೆ.

ಶಾಲಾ ಬಸ್ ನ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಹಾಕಿಸಿ ನಂತರ ಬಸ್ ಎಕ್ಸಪ್ರೇಸ್ ವೇ ನ ಓನ್ ವೇ ಯಲ್ಲಿ ರಾಂಗ್ ರೂಟ್ ನಲ್ಲಿ ಬರುತ್ತಿತ್ತು.

ಅದೇ ವೇಳೆಗೆ ಯುವಿ ಕಾರೊಂದು ಮೀರತ್‌ನಿಂದ ಗುರುಗ್ರಾಮ್‌ಗೆ ಹೋಗುತಿದ್ದ ಸಂದರ್ಭ ಬಸ್ ಗೆ ಡಿಕ್ಕಿ ಹೊಡೆದಿದೆ.

ಈ ಅವಘಡದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಸದಸ್ಯರು ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಬಸ್‌ನಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಅವಘಡಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ನೆರವು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

DAKSHINA KANNADA

ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!

Published

on

ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.

ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

bangalore

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!

Published

on

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ರಿಲೀಸ್​ ಆಗಲಿದೆ.

 

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.

ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.

ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.

ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.

ಹೌದು ..ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಆಗಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.

ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.

 

Continue Reading

LATEST NEWS

Trending