ಕೋಝಿಕ್ಕೋಡ್: ರೈಲು ಬಡಿದ ಪರಿಣಾಮ ನದಿಗೆ ಬಿದ್ದು 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ.
ಮೃತರನ್ನು ಕರುವಂತುರುತಿ ಮೂಲದ ನಫತ್ ಫತಾಹ್ (16) ಎಂದು ಗುರುತಿಸಲಾಗಿದೆ.
ತನ್ನ ಸ್ನೇಹಿತೆ ಜೊತೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕಿ ನಫತ್ ಫತಾಹ್ ಚಲಿಸುತ್ತಿದ್ದ ಕೊಯಮತ್ತೂರು-ಮಂಗಳೂರು ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದ್ದಾಳೆ.
ಪರಿಣಾಮ ಪಕ್ಕದ ನದಿಗೆ ಎಸೆಲ್ಪಟ್ಟಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ನದಿಯ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಆಕೆಯ ಶವವನ್ನು ಬೇಪುರದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನೆಯಲ್ಲಿ ನಫತ್ ಫತಾಹ್ ಜೊತೆಗಿದ್ದ ಆಕೆಯ ಸ್ನೇಹಿತೆಯೂ ಗಾಯಗೊಂಡಿದ್ದಾರೆ. ಇದೀಗ ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದಾರೆ.