Connect with us

DAKSHINA KANNADA

ಉಳ್ಳಾಲ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದು ವಿದ್ಯಾರ್ಥಿನಿ ಮೃತ್ಯು..!

Published

on

ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ದುರಂತ ಘಟನೆ ಉಳ್ಳಾಲ ಸೋಮೇಶ್ವರ ರುದ್ರಪಾದೆಯಲ್ಲಿ ಇಂದು ಬುಧವಾರ ನಡೆದಿದೆ.

ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ದುರಂತ ಘಟನೆ ಉಳ್ಳಾಲ ಸೋಮೇಶ್ವರ ರುದ್ರಪಾದೆಯಲ್ಲಿ ಇಂದು ಬುಧವಾರ ನಡೆದಿದೆ.
ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿಯಾಗಿದ್ದಾಳೆ.

ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು.

ಸ್ನೇಹಿತೆಯರಿಬ್ಬರು ಸಮುದ್ರ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಾವೇರಿ ಆಯ ತಪ್ಪಿ ಸಮುದ್ರಕ್ಕೆ ಬಿದ್ದಿದ್ದಾಳೆ.

ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಈಜು ರಕ್ಷಕ ಸಿಬ್ಬಂದಿ ಮೋಹನ್ ಚಂದ್ರ,ಸ್ಥಳೀಯ ಮೀನುಗಾರರಾದ ಯೋಗೀಶ್ ,ಪ್ರವೀಣ್ ,ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ್ ಮತ್ತು ಸ್ಥಳೀಯರು ಸೇರಿ ಸಮುದ್ರದಲ್ಲಿ ಈಜಾಡಿ ಕಾವೇರಿಯನ್ನ ದಡಕ್ಕೆ ಎಳೆ ತಂದರೂ ಅಷ್ಟರಲ್ಲಿ ಕಾವೇರಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು.


ಕಾವೇರಿ ಪೋಷಕರು ಕೂಲಿ ಕೆಲಸಗಾರರಾಗಿದ್ದು ಮಂಗಳೂರಿನ ಉರ್ವ ಸ್ಟೋರಲ್ಲಿ ಕಳೆದ ಅನೇಕ ವರುಷಗಳಿಂದ ನೆಲೆಸಿದ್ದು ತಮ್ಮ ಏಕೈಕ ಮಗಳನ್ನ ಕಷ್ಟ ಪಟ್ಟು ಮಂಗಳೂರು ನಗರದ ಸ್ವಸ್ಥಿಕ್ ಕಾಲೇಜಲ್ಲಿ ಬಿಕಾಂ ಓದಿಸುತ್ತಿದ್ದರು.

ಪ್ರತಿಭಾನ್ವಿತೆಯಾಗಿದ್ದ ಕಾವೇರಿ ಬಿಕಾಂ ವ್ಯಾಸಂಗದ ಜೊತೆಗೆ ಸಿಎ ಕೂಡ ಅಧ್ಯಯನ ನಡೆಸುತ್ತಿದ್ದರು.

ಮೃತ ಕಾವೇರಿ ಜೊತೆ ಬಂದಿದ್ದ ಬಾಲ್ಯ ಸ್ನೇಹಿತೆ ಕಾವೇರಿಯೂ ಕೂಡ ಮಂಗಳೂರು ನಗರದ ಕಾಲೇಜೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ.

ವಿಚಾರ ತಿಳಿದು ಸ್ಥಳಕ್ಕೆ ಬಂದಿದ್ದ ಮೃತ ಕಾವೇರಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

DAKSHINA KANNADA

ನಾಳೆ ನಿಮ್ಮೂರಿಗೆ ಬರ್ತಿದ್ದಾನೆ ಮೇಘರಾಜ: ತಂಪಾಗಲಿದೆ ಇಳೆ

Published

on

ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ಈ ಬಾರಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ದೂರವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಗಳಿದ್ದು, 85.2 ಸೆಂ.ಮಿ ಮಳೆ ಬೀಳುವ ನಿರೀಕ್ಷೆಗಳಿವೆ. ಜೂನ್​, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕ್ರಮವಾಗಿ 19.9 ಸೆಂ.ಮೀ., 27.1 ಸೆಂ.ಮೀ., ಆಗಸ್ಟ್​ 22 ಸೆಂ.ಮೀ ಹಾಗೂ 16.1 ಸೆಂಮೀ ಮಳೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.

ನಾಳೆ ಈ ಜಿಲ್ಲೆಗಳಲ್ಲಿ ಆಗಲಿದೆ ಮಳೆ

ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂಉರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Continue Reading

LATEST NEWS

Trending