Sunday, November 27, 2022

ಅನ್ಯಧರ್ಮೀಯ ಯುವಕರೊಂದಿಗೆ ಯುವತಿಯರ ಮೋಜು-ಮಡಿಕೇರಿಯಲ್ಲಿ ಧರ್ಮದೇಟು

ಮಡಿಕೇರಿ: ಮಂಗಳೂರಿನಿಂದ ಮಡಿಕೇರಿಗೆ ಮೋಜು ಮಸ್ತಿ ಮಾಡಲು ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ ಯುವಕರು ಮಡಿಕೇರಿ ಆಸುಪಾಸಿನಲ್ಲಿ ಮಜಾ ಮಾಡಲು ಮುಂದಾದಾಗ ಧರ್ಮದೇಟು ನೀಡಿದ್ದಾರೆ.

ಇದರಲ್ಲಿ ಹಿಂದು ಧರ್ಮದ ಯುವಕನು ಕೂಡಾ ಸಹಕರಿಸಿದ್ದ ಎಂದು ತಿಳಿದು ಬಂದಿದೆ.
ಕೆಎ 20 ರಿಜಿಸ್ಟ್ರೇಷನ್ ಹೊಂದಿದ್ದ ಹುಂಡೈ ಐ 20 ಕಾರಿನಲ್ಲಿ ಮುಸ್ಲಿಂ ಯುವಕರು ಮಂಗಳೂರಿನಿಂದ ಯುವತಿಯರನ್ನು ಕರೆದುಕೊಂಡು ಹೋಗಿದ್ದರು.

ಮೋಜು ಮಸ್ತಿಗೆ ಬಂದಿದ್ದ ಈ ವಿಭಿನ್ನ ಕೋಮಿನ ಗುಂಪನ್ನು ಗಮನಿಸಿದ ಸ್ಥಳೀಯರು ಇವರನ್ನು ಪ್ರಶ್ನಿಸಿದ್ದಾರೆ. ಬಳಿಕ ಅನ್ಯಧರ್ಮೀಯರು ಎಂದು ಖಚಿತಪಡಿಸಿಕೊಂಡ ಸ್ಥಳೀಯರು ಯುವಕರಿಗೆ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

 

ಮಡಿಕೇರಿಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...