Connect with us

BANTWAL

ಬಂಟ್ವಾಳದಲ್ಲಿ ಇವನ್ಯಾರು ವಿಕೃತ ಕಾಮುಕ: ಬಾಲಕಿ ಗರ್ಭವತಿಯಾಗಲು ಆಕೆಯ ಮಲ ತಂದೆಯೇ ಕಾರಣ..!

Published

on

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.


ತುಂಬೆ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ.

ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.

ಅಪ್ರಾಪ್ತ ಬಾಲಕಿಯನ್ನು 4 ತಿಂಗಳ ಗರ್ಭವತಿ ಮಾಡಿದ ಆರೋಪದ ಮೇಲೆ ಬಾಲಕಿಯ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending