Saturday, October 1, 2022

ರಾಜ್ಯ ಚುನಾವಣೆಯಲ್ಲಿ ಹಿಂದೂ ಕಾರ್ಯಕರ್ತರಿಗೆ ಟಿಕೆಟ್ ನೀಡಿ-ಮುತಾಲಿಕ್

ಉಡುಪಿ: ರಾಜ್ಯದಲ್ಲಿ ಮುಂದೆ ಬರುವ ಚುನಾವಣೆಯಲ್ಲಿ ಬಿಜೆಪಿಯವರು 25 ಸೀಟನ್ನು ಹಿಂದೂ ಕಾರ್ಯಕರ್ತರಿಗೆ ಹಾಗೂ ಹಿಂದೂ ಹೋರಾಟಗಾರರಿಗೆ ನೀಡುವ ವಿಚಾರದಲ್ಲಿ ನಾಯಕರ ಮನವೊಲಿಸಲು ಪೇಜಾವರ ಶ್ರೀಗಳೊಂದಿಗೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತುಕತೆ ನಡೆಸಿದರು.


ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್ “ಹಿಂದೂಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ನಾನು ಪೇಜಾವರ ಶ್ರೀಗಳೊಂದಿಗೆ ಮಾತನಾಡಿದ್ದೇನೆ.

ಹಿಂದೂ ಕಾರ್ಯಕರ್ತರ ಮೇಲೆ ಹಾಕಿರುವ ರೌಡಿ ಶೀಟ್, ಕೇಸುಗಳು, ಗುಂಡಾ ಆಕ್ಟ್ ತೆರವು ಮಾಡಬೇಕು ಎಂದು ಆಗ್ರಹಿಸಿದರು.


ರಾಜ್ಯ ಚುನಾವಣೆಯಲ್ಲಿ 25 ಸ್ಥಾನ ಬಿಜೆಪಿಯು ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ಸಂಘಟಕರಿಗೆ ನೀಡಬೇಕು.

ಕಾರ್ಯಕರ್ತರು ಶಾಸಕರಾಗಿ ಆಯ್ಕೆಯಾದರೆ ಹಿಂದುತ್ವದ ಬಗ್ಗೆ ಧ್ವನಿ ಮೊಳಗುತ್ತದೆ. ಬಿಜೆಪಿಯಲ್ಲಿ ಹಿಂದುತ್ವದ ಕಾಳಜಿಯ ಕೊರತೆ ಇದೆ. ಈ ತೊಂದರೆ ನಿವಾರಿಸಲು ಈ 25 ಮಂದಿಯಿಂದ ಸಾಧ್ಯ.

25 ಮಂದಿ ಕಾರ್ಯಕರ್ತರಿಗೆ ಟಿಕೆಟ್ ಕೊಡಲೇಬೇಕು ಎಂಬ ಹಕ್ಕೋತ್ತಾಯವನ್ನು ನಾನು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮಾಡ್ತೇನೆ. ಬಿಜೆಪಿ ಟಿಕೆಟ್ ಕೇಳುವುದು ನಮ್ಮ ಹಕ್ಕು. ಬಿಜೆಪಿ ಪಕ್ಷದ ಸಲುವಾಗಿ ನಾವು ಬೆವರು, ರಕ್ತ ಸುರಿಸಿದ್ದೇವೆ. ಕಾರ್ಯಕರ್ತರ ಈ ಬೇಡಿಕೆಯನ್ನು ಪಕ್ಷ ಪೂರೈಸಲೇಬೇಕು.

ಈ ಎಲ್ಲಾ ವಿಚಾರಗಳ ಬಗ್ಗೆ ನಾನು ಪೇಜಾವರ ಶ್ರೀಗಳ ಗಮನ ಸೆಳೆದಿದ್ದೇನೆ. ಸಂಬಂಧಪಟ್ಟವರ ಜೊತೆ ಮಾತನಾಡುವುದಾಗಿ ಶ್ರೀಗಳು ಸಕಾರಾತ್ಮಕ ಸ್ಪಂದಿಸಿದ್ದಾರೆ.

ಆಗುತ್ತಿರುವ ಬೆಳವಣಿಗೆಯಿಂದ ರಾಜ್ಯದ ಎಲ್ಲರಿಗೂ ಅಸಮಾಧಾನ ಉಂಟಾಗಿದೆ.ಈ ಅಸಮಾಧಾನವನ್ನು ಸರಿಯಾದ ನಿಟ್ಟಿನಲ್ಲಿ ತೆಗೆದುಕೊಂಡು ಹೋಗಲು ನಾವು 25 ಮಂದಿಗೆ ಅವಕಾಶ ಕೇಳುತ್ತಿದ್ದೇವೆ’ ಎಂದು ಹೇಳಿದರು.

 

 

 

LEAVE A REPLY

Please enter your comment!
Please enter your name here

Hot Topics

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮಂಗಳೂರು ತಹಶೀಲ್ದಾರ್ ಸಹಾಯಕ ಶಿವಾನಂದ..!

ಮಂಗಳೂರು: ತಹಶೀಲ್ದಾರ್‌ ಅವರ ಸಹಾಯಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ...

ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಕುಸಿತ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ

ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು.ನಂತರ ಮಾತನಾಡಿದ ಅವರು 'ಜೆಟ್ಟಿಯ 150 ಮೀಟರಿಗೂ...

ಪ್ರವೀಣ್ ನೆಟ್ಟಾರು ಪತ್ನಿಗೆ ಒಲಿದು ಬಂತು ಸರ್ಕಾರಿ ಕೆಲಸ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ...