DAKSHINA KANNADA
ಆಳ್ವಾಸ್ ವಿರಾಸತ್‌ಗೆ ಇಂದು ವೈಭವದ ಚಾಲನೆ; ಮೂಡುಬಿದಿರೆಯಲ್ಲಿ ಹಬ್ಬದ ವಾತವರಣ
Published
2 days agoon
ಮೂಡುಬಿದಿರೆ: ಎಂಟು ಮೇಳಗಳ ಹಿಮ್ಮೇಳ, ಸಂಗೀತ-ನೃತ್ಯ ವೈವಿಧ್ಯವನ್ನೊಳಗೊಂಡ ಹಚ್ಚಡ ಮೇಳೈಸಿಕೊಂಡು, ವಿದ್ಯಾಗಿರಿಯ ಮೈತುಂಬ ಕಲಾವೈಭವ ಹೊತ್ತು ‘ಆಳ್ವಾಸ್ ವಿರಾಸತ್’ ಸಾಂಸ್ಕೃತಿಕ ರಥ ಹೊರಡಲು ಸಜ್ಜಾಗಿದೆ!
ಇನ್ನು ಐದು ದಿನಗಳ ಕಾಲ ಆಳ್ವಾಸ್ ವಿದ್ಯಾಗಿರಿಯ ಆವರಣದ ಉದ್ದಗಲಕ್ಕೆ ವೈವಿಧ್ಯಮಯ ವಿಷಯಗಳನ್ನು ಹುಡುಕಿ ಬರುವ ಕಂಗಳಿಗೆ ಈ ವಿರಾಸತ್ ಎನ್ನುವ ರಥ ಭರಪೂರ ಮನರಂಜನೆ, ಖುಷಿ, ಮಾಹಿತಿಯ ಷಡ್ರಸೋಪೇತ ಭೋಜನವನ್ನು ಉಣಿಸಲಿದೆ. ಆಳ್ವಾಸ್ ವಿರಾಸತ್ ಇಂದು (ಡಿ.10) ಸಂಜೆ ಚಾಲನೆ ಪಡೆದುಕೊಂಡು, 15ರ ರಾತ್ರಿ ವರೆಗೆ ನಡೆಯಲಿದೆ.
ಡಿ.10ರಂದು ಸಂಜೆ 5.30ರಿಂದ 1 ಗಂಟೆ ಕಾಲ ಉದ್ಘಾಟನ ಸಭಾ ಕಾರ್ಯಕ್ರಮವು ಪುತ್ತಿಗೆಯ ವನಜಾಕ್ಷಿ ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್ ಅಧ್ಯಕ್ಷತೆ ವಹಿಸುವರು. ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸಹಿತ ಗಣ್ಯರು ಉಪಸ್ಥಿತರಿರುವರು.ಆ ಬಳಿಕ 150ಕ್ಕಿಂತಲೂ ಅಧಿಕ ದೇಶಿಯ ಜಾನಪದ ಕಲಾ ತಂಡಗಳ 4,000ಕ್ಕೂ ಮಿಕ್ಕಿದ ಕಲಾವಿದರಿಂದ ಕಣ್ಮನ ಸೆಳೆಯುವ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ರಾತ್ರಿ 8.30ರಿಂದ ಸಾಂಸ್ಕೃತಿಕ ರಥ ಸಂಚಲನ ನಡೆಯಲಿದ್ದು, ಹರಿದ್ವಾರದಿಂದ ಬರುವ ಪ್ರಮುಖರು ರಥಾರತಿ ಬೆಳಗಲಿದ್ದಾರೆ.
11ರಂದು ಪ್ರಶಸ್ತಿ ಪ್ರದಾನ :
ಡಿ.11ರಂದು ಸಂಜೆ 5.45ರಿಂದ ಆಳ್ವಾಸ್ ವಿರಾಸತ್ 2024 ಪ್ರಶಸ್ತಿ ಪ್ರದಾನ ನಡೆಯಲಿದ್ದು, ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನ ಮಾಡಲಾಗುವುದು. 6.35ರಿಂದ ಅವರು ಹಿಂದೂಸ್ಥಾನಿ ಗಾಯನ ನಡೆಸಿಕೊಡವರು. 7.45ರಿಂದ ಗುಜರಾತ್‌ನ ರಂಗ್ ಮಲಹರ್ ದಿರೋಕ್ ಆರ್ಟ್ಸ್ ತಂಡದಿಂದ ಗುಜರಾತಿ ಜಾನಪದ ನೃತ್ಯ ಪ್ರದರ್ಶನ ಹಾಗೂ 9ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ.
ಸಾಂಸ್ಕೃತಿಕ ವೈಭವ :
ಡಿ.12ರ ಸಂಜೆ 6ರಿಂದ 8ರ ವರೆಗೆ ಗುಜರಾತ್ ಒಸ್ಮಾನ್ ಮೀರ್ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ 8.15ರಿಂದ ನೃತ್ಯ ವೈವಿಧ್ಯ ನಡೆಯಲಿದೆ. ಉಡುಪಿ ಕೊಡವೂರಿನ ನೃತ್ಯ ನಿಕೇತನ, ಬೆಂಗಳೂರು ಚಿಗುರು ನೃತ್ಯಾಲಯ, ಮಂಗಳೂರಿನ ಸನಾತನ ನಾಟ್ಯಾಲಯ, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯ, ಮಂಗಳೂರಿನ ಗಾನ ನೃತ್ಯ ಅಕಾಡೆಮಿ, ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಕಲಾವಿದರಿಂದ ನೃತ್ಯವೈವಿಧ್ಯ,9.15ರಿಂದ ಆಳ್ವಾಸ್ ಸಾಂಸ್ಕೃತಿಕ ವೈವಿಧ್ಯ ಇರಲಿದೆ. ಡಿ.13ರಂದು ಸಂಜೆ 6ರಿಂದ ನೀಲಾದ್ರಿ ಕುಮಾರ್ ಮತ್ತು ತಂಡದಿಂದ “ಸೌಂಡ್ ಆಫ್ ಇಂಡಿಯಾ’ ಹಾಗೂ 8.15ರಿಂದ ಕೋಲ್ಕತಾದ ಆಶೀಮ್ ಬಂಧು ಚಟರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ. ರಾತ್ರಿ 9ರಿಂದ “ನೃತ್ಯೋಲ್ಲಾಸ’ ಹಾಗೂ ಬೆಂಗಳೂರು ಶ್ರೀ ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ 9.15ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.ಡಿ.14ರಂದು ಸಂಜೆ 6ರಿಂದ ಚೆನ್ನೈ ಸ್ಟೆಕೇಟೋದ ಕಲಾವಿದರಿಂದ “ಸಂಗೀತ ರಸದೌತಣ’ ಹಾಗೂ ರಾತ್ರಿ 9ಕ್ಕೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನ ನಡೆಯಲಿದೆ. ಡಿ.15ರಂದು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ ಎಲ್ಲ ಮೇಳಗಳು, ಪ್ರದರ್ಶನ ಮಾರಾಟವನ್ನು ಆಸ್ವಾದಿಸಬಹುದು.
ಉಚಿತ ಪ್ರವೇಶ :
ವಿರಾಸತ್‌ಗೆ ಪ್ರವೇಶ ಸಂಪೂರ್ಣ ಉಚಿತ. ಕಾರ್ಯಕ್ರಮ ಗಳು ಕ್ಲಪ್ತ ಸಮಯಕ್ಕೆ ಆರಂಭಗೊಳ್ಳಲಿವೆ. ಸುಮಾರು 40 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದ್ದು, ವಾಹನ ಪಾರ್ಕಿಂಗ್‌ಗೆ ವಿಶಾಲ ವ್ಯವಸ್ಥೆ ಇರುತ್ತದೆ. ವಿದ್ಯಾಗಿರಿಯಲ್ಲಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೀಸಲಾಗಿದ್ದರೆ, ಸಮೀಪದ ಕೃಷಿಸಿರಿ, ನೀಟ್ ಕಟ್ಟಡ, ಅರಮನೆ ಮೈದಾನ ಸಹಿತ ಸುತ್ತಲಿನ ಆವರಣದಲ್ಲಿ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳ ದಿನಪೂರ್ತಿ ತೆರೆದಿರುತ್ತವೆ. ತುಳುನಾಡಿನ ಗುತ್ತಿನ ಮನೆಯ ಪರಿ ಕಲ್ಪನೆಯಲ್ಲಿ ಕೃಷಿಸಿರಿ ಮೇಳಗಳ ಆವರಣವನ್ನು ಸಜ್ಜುಗೊಳಿ ಸಲಾಗಿದ್ದು, ಈ ಬಾರಿ 650 ಮಳಿಗೆಗಳಿವೆ. ಸುಮಾರು 2.5 ಲಕ್ಷಕ್ಕೂ ಅಧಿಕ ಹೂವಿನ ಗಿಡಗಳು, 500ಕ್ಕೂ ಹೆಚ್ಚು ಕಲಾ ಕೃತಿ ಗಳು ವಿರಾಸತ್ ರಾಜಮಾರ್ಗದ ಅಂದವನ್ನೂ ಹೆಚ್ಚಿಸಿವೆ.
DAKSHINA KANNADA
ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ; ಬಹುಕಾಲದ ಬೇಡಿಕೆ ಈಡೇರಿಕೆ
Published
13 minutes agoon
12/12/2024ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.
2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :
ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.
DAKSHINA KANNADA
ಉತ್ತಮ ಜನಸ್ಪಂದನೆಯೊಂದಿಗೆ ಮಂಗಳೂರು-ಕಾರ್ಕಳ KSRTC ಸಂಚಾರ ಆರಂಭ
Published
31 minutes agoon
12/12/2024ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.
ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.
ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್, ‘ಮಂಗಳೂರು-ಕಾರ್ಕಳ ಮಧ್ಯೆ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮ ಪ್ರಕಾರ ಹಾಗೂ ಚಾಪ್ಟರ್ -5ರಂತೆ ಹೊಸ ರೂಟ್‌ಗೆ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ’ ಎಂದು ವಾದ ಮಂಡಿಸಿದರು. ‘ಮುಂದಿನ ದಿನಗಳಲ್ಲಿ ಅಗತ್ಯ ಇರುವ ಇತರ ಪ್ರದೇಶಗಳಲ್ಲಿ ಸರಕಾರಿ ಬಸ್ ಸಂಚಾರ ಆರಂಭಿಸಲು ಸರಕಾರ ವನ್ನು ಕೇಳಿಕೊಂಡಿದ್ದೇವೆ’ ಎಂದು ಸದಸ್ಯ ಐವನ್ ಡಿ’ ಸೋಜಾ ತಿಳಿಸಿದರು.
ಇದನ್ನೂ ಓದಿ : ಮಂಗಳೂರು-ಕಾರ್ಕಳ ಕೆ.ಎಸ್.ಆರ್.ಟಿ.ಸಿ ಪ್ರಾಯೋಗಿಕ ಸಂಚಾರಕ್ಕೆ ನಾಳೆ ಚಾಲನೆ !!
ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ. ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ ಪರವಾನಗಿ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನಸ್ಪಂದನೆ ಲಭಿಸಿದೆ.
DAKSHINA KANNADA
ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್ ಚಲನಚಿತ್ರ ತೆರೆಗೆ !!
Published
18 hours agoon
11/12/2024ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.
ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.
ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್ ಶೆಟ್ಟಿ ಮೊದಲಾದವರಿದ್ದರು.
LATEST NEWS
ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಇಸ್ರೇಲ್ ಪ್ರಧಾನಿ
ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್ ಚಲನಚಿತ್ರ ತೆರೆಗೆ !!
ಆರ್ಬಿಐ ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ !!
ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ !
ವಿಚ್ಛೇದನ ನೀಡದೆ ಎರಡನೇ ಮದುವೆ; ಮಂಟಪದಲ್ಲೇ ಮೊದಲ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ
Trending
- BIG BOSS4 days ago
ಚೈತ್ರಾ ಕಣ್ಣೀರು, ಐಶ್ವರ್ಯ ಆಕ್ಟಿವಿಟಿ ರೂಮ್….ಎಲಿಮಿನೆಟ್ ಆಗಿದ್ದು ?
- BIG BOSS5 days ago
BBK11: ಈ ವಾರ ಬಿಗ್ಬಾಸ್ ಮನೆಯಲ್ಲಿ ಕಾದಿದ್ಯಾ ಬಿಗ್ ಟ್ವಿಸ್ಟ್; ಎಲಿಮಿನೇಷನ್ ಇರೋದು ಡೌಟ್
- BIG BOSS5 days ago
ಬಿಗ್ಬಾಸ್ ನಿರ್ಧಾರಗಳಿಗೆ ರೆಸ್ಪೆಕ್ಟೇ ಇಲ್ಲ -ಇಬ್ಬರು ಸ್ಪರ್ಧಿಗಳಿಗೆ ಕಿಚ್ಚ ಖಡಕ್ ಕ್ಲಾಸ್
- BANTWAL6 days ago
ಬಂಟ್ವಾಳ: ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ