Connect with us

    bangalore

    ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರದಲ್ಲೂ ಗೋ ಬ್ಯಾಕ್ ಶಾಕ್‌…!

    Published

    on

    ಮಂಗಳೂರು : ಉಡುಪಿ – ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್‌ ಅಭಿಯಾನದ ಕಾರಣ ಕ್ಷೇತ್ರ ಕಳೆದುಕೊಂಡಿದ್ದ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರದಲ್ಲಿ ಟಿಕೇಟ್ ಸಿಕ್ಕಿದೆ. ನಾನು ಫೈಟರ್, ಎಲ್ಲೂ ಸ್ಪರ್ಧೆ ಮಾಡಬಲ್ಲೆ ಎಂದಿದ್ದ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲೂ “ಗೋ ಬ್ಯಾಕ್” ಬಿಸಿ ಮುಟ್ಟಿದೆ. ಬೆಂಗಳೂರು ಉತ್ತರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಟಿಕೆಟ್ ಕೈ ತಪ್ಪಿದೆಯಾದ್ರೂ ಬದಲಿಯಾಗಿ ಬೇರೆ ಒಕ್ಕಲಿಗರಿಗೆ ಟಿಕೆಟ್ ಕೊಡಿ ಅಂತ ಕಾರ್ಯಕರ್ತರು ಆಗ್ರಹಿಸಿದ್ದಾರೆ.

    ಉಡುಪಿ – ಚಿಕ್ಕಮಗಳೂರು ಗೋ ಬ್ಯಾಕ್ ಬಿಸಿ :

    ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆಗೆ ಈ ಬಾರಿ ಟಿಕೆಟ್ ನೀಡೋದಿಕ್ಕೆ ಕಾರ್ಯಕರ್ತರಿಂದ ಬಾರಿ ವಿರೋಧ ವ್ಯಕ್ತವಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿಯ ಕಾರ್ಯಕರ್ತರು ಬಹಿರಂಗವಾಗಿ ಶೋಭಾಗೆ ಟಿಕೆಟ್ ಕೊಟ್ಟರೆ ಸೋಲಿಸೋದು ಶತಃ ಸಿದ್ಧ ಅಂತ ಹೇಳಿಕೆ ನೀಡಿದ್ದರು. ಪೋಸ್ಟ್‌ ಕಾರ್ಡ್‌ ಅಭಿಯಾನ, ಸೋಷಿಯಲ್ ಮೀಡಿಯಾ ಅಭಿಯಾನದ ಬಿಸಿ ಹೈಕಮಾಂಡ್‌ಗೆ ತಟ್ಟಿದ ಕಾರಣ ಕೊನೆಗೂ ಶೋಭಾ ಕರಂದ್ಲಾಜೆ ಅವರಿಗೆ ಬೇರೆ ಜಾಗ ತೋರಿಸಲಾಗಿದೆ.

    ಡಿವಿಎಸ್ ಆಶೀರ್ವಾದ ಪಡೆದ ಶೋಭಾ; ಒಕ್ಕಲಿಗರಿಗೆ ಅವಕಾಶ ಕೊಡಿ ಎಂದ ಕಾರ್ಯಕರ್ತರು!

    ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್ ನೀಡೋ ರಿಸ್ಕ್‌ ತೆಗೆದುಕೊಳ್ಳದ ಹೈಕಮಾಂಡ್ ಅವರಿಗೆ ಬೆಂಗಳೂರು ಉತ್ತರಕ್ಕೆ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಟಿಕೆಟ್ ಘೊಷಣೆ ಬೆನ್ನಲ್ಲೇ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದ ಶೋಭಾ ಕರಂದ್ಲಾಜೆ ಮೊದಲಿಗೆ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ನಿವಾಸಕ್ಕೆ ತೆರಳಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

     

    ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಕೊನೆಯ ಕ್ಷಣದಲ್ಲಿ ಬೆಂಗಳೂರು ಉತ್ತರದ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು. ಆದ್ರೆ, ಶೋಭಾ ಕರಂದ್ಲಾಜೆಗೆ ಜಾಗೆ ತೋರಿಸಲು ಅನಿವಾರ್ಯವಾಗಿ ಡಿ.ವಿ.ಸದನಾಂದ ಗೌಡರಿಗೆ ಖೋಕ್‌ ಕೊಟ್ಟ ಹೈಕಮಾಂಡ್ ಶೋಭಾ ಅವರಿಗೆ ಅವಕಾಶ ನೀಡಿದೆ.

    ಆದರೆ, ಹೈಕಮಾಂಡ್ ಈ ನಡೆ ಬೆಂಗಳೂರು ಉತ್ತರದ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಡಿ.ವಿ.ಎಸ್ ಅಲ್ಲಾ ಅಂದ್ರೆ ಇಲ್ಲಿಯ ಒಕ್ಕಲಿಗ ನಾಯಕರಿಗೆ ಟಿಕೆಟ್ ಕೊಡಿ ಅಂತ ಆಗ್ರಹಿಸಿದ್ದಾರೆ. ಹೀಗಾಗಿ ಗೋ ಬ್ಯಾಕ್ ಶೋಭಾ ಅಭಿಯಾನ ಆರಂಭಿಸಿ, ಶೋಭಾ ಕರಂದ್ಲಾಜೆ ಕ್ಷೇತ್ರಕ್ಕೆ ಎಂಟ್ರಿ ಕೊಡುವಾಗಲೇ ಬಿಸಿ ಮುಟ್ಟಿಸಿದ್ದಾರೆ. ಆದ್ರೆ, ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬ ಆತ್ಮವಿಶ್ವಾಸದಲ್ಲಿ ಇರುವ ಶೋಭಾ ಕರಂದ್ಲಾಜೆ, ಗೋ ಬ್ಯಾಕ್‌ ಶೋಭಾ ವಿಚಾರಕ್ಕೆ ತಲೆ ಕಡೆಸಿಕೊಂಡಿಲ್ಲ. ರಾಜಕೀಯದಲ್ಲಿ ಇದೆಲ್ಲಾ ಮಾಮೂಲು ಎಂದಿರುವ ಅವರು, ಸದ್ಯ ಚುನಾವಣಾ ಪ್ರಚಾರದ ಸಿದ್ಧತೆಯಲ್ಲಿದ್ದಾರೆ.

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending