Monday, January 24, 2022

ಕಾರ್ಕಳ: ದನ ಕಳೆದುಕೊಂಡ ಯಶೋಧಗೆ ಕಾಂಗ್ರೆಸ್‌-ಬಿಜೆಪಿ, ಬಜರಂಗದಳದಿಂದ ಗೋದಾನ

ಕಾರ್ಕಳ: ಇಲ್ಲಿನ ಒಂದೇ ಮನೆಯ ಹದಿನಾರು ಗೋವನ್ನು ಕಳೆದುಕೊಂಡ ಯಶೋಧ ಆಚಾರ್ಯ ಅವರಿಗೆ ಸಚಿವ ಸುನೀಲ್‌ ಕುಮಾರ್‌, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ವಿಶ್ವಹಿಂದೂಪರಿಷತ್‌ ಬಜರಂಗದಳ ಗೋದಾನ ಮಾಡಿದರು.


ಮೊನ್ನೆ ಯಶೋಧ ಆಚಾರ್ಯ ಮನೆಗೆ ಭೇಟಿ ನೀಡಿ ಉಡುಪಿ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿ ಹಾಗೂ ಕಾರ್ಕಳ ಯುವ ಕಾಂಗ್ರೆಸ್ ತಂಡ ಅವರನ್ನು ಸಂತೈಸಿದೆ.

ಅಲ್ಲದೆ ಈ ಕೂಡಲೆ ಸರಕಾರದಿಂದ 5 ಲಕ್ಷ ರೂ ಪರಿಹಾರವನ್ನು ದೊರಕಿಸಿಕೊಡುವಂತೆ ಸ್ಥಳೀಯ ಶಾಸಕ ಸಚಿವ ಸುನಿಲ್ ಕುಮಾರ್ ಅವರಲ್ಲಿ ಆಗ್ರಹಿಸಿದ್ದಾರೆ.

ಒಂದು ಗೋವನ್ನು ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್‌ ಕೋಟ್ಯಾನ್‌ ನೀಡಿದರು. ಈ ಸಂದರ್ಭದಲ್ಲಿ ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ ಇನ್ನಾ,

ಕಾಂಗ್ರೇಸ್ ಮುಖಂಡರಾದ ತಾರಾನಾಥ ಕೋಟ್ಯಾನ್, ಪ್ರದೀಪ್ ಬೇಲಾಡಿ ಮೊದಲಾದವರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಕಾರ್ಕಳ ಶಾಸಕ, ಸಚಿವ ಸುನಿಲ್‌ ಕುಮಾರ್ ಅವರು 2 ಹಸು ಹಾಗೂ ಭಜರಂಗದ ದಳ ವಿಶ್ವಹಿಂದೂ ಪರಿಷತ್‌ ಸಂಘಟನೆ ವತಿಯಿಂದ ಒಂದು ಹಸುವನ್ನು ಗೋದಾನ ಮಾಡುವ ಮೂಲಕ ಶ್ಲಾಘನೆಗೆ ಒಳಗಾಗಿದ್ದಾರೆ.

Hot Topics

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...