Connect with us

    DAKSHINA KANNADA

    ಮಂಗಳೂರು: ಗೋಕರ್ಣನಾಥೇಶ್ವರ ಕಾಲೇಜಿನ NSS ಘಟಕದಿಂದ ರಕ್ತದಾನ

    Published

    on

    ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜುಲೈ 2 ರಂದು ಆಯೋಜಿಸಲಾಗಿತ್ತು.


    ಈ ಕಾರ್ಯಕ್ರಮವನ್ನು ವೆಂಕಟೇಶ ಶಿವಭಕ್ತಿ ಯೋಗ ಸಂಘದ ಕಾರ್ಯದರ್ಶಿ ವಸಂತ ಕಾರಂದೂರ್ ಉದ್ಘಾಟಿಸಿ ರಕ್ತಕ್ಕೆ ಯಾವುದೇ ಜಾತಿ ಇಲ್ಲ, ರಕ್ತದಾನದ ಪ್ರವೃತ್ತಿಯನ್ನು ಜೀವನದ ಉದ್ದಕ್ಕೂ ಅಳವಡಿಸಬೇಕು ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಮೆಡಿಕಲ್ ಆಫೀಸರ್ ಡಾ. ಜೆ. ಎನ್. ಭಟ್ ರಕ್ತದಾನ ಶ್ರೇಷ್ಠ ದಾನ ಹಾಗಾಗಿ ರಕ್ತದಾನ ಮಾಡುವ ಪರೋಪಕಾರ ಗುಣ ನಾವೆಲ್ಲರೂ ಬೆಳಸಬೇಕು ಎಂದರು.

    ಸಂಸ್ಥೆಯ ಡೀನ್-ಅಕಾಡೆಮಿಕ್ ಡಾ. ಉಮ್ಮಪ್ಪ ಪೂಜಾರಿಯವರು ರಕ್ತದಾನ ಮಾಡುವುದರಿಂದ ವ್ಯಕ್ತಿಯ ಆಯಸ್ಸು ಹೆಚ್ಚುವುದಲ್ಲದೆ ಮೂರು ವ್ಯಕ್ತಿಯ ಜೀವವನ್ನು ಉಳಿಸಲು ಸಾಧ್ಯ ಎಂದರು.


    ಕಾಲೇಜಿನ ಪ್ರಾoಶುಪಾಲಾರದ ಡಾ. ಸುಜಯ ಸುವರ್ಣ ಅತಿಥಿಗಳನ್ನು ಸ್ವಾಗತಿಸುತ್ತಾ ರಕ್ತವನ್ನು ಕೃತಕವಾಗಿ ನಿರ್ಮಿಸಲು ಸಾಧ್ಯವಿಲ್ಲ ಹಾಗಾಗಿ ಪ್ರತಿಯೊಬ್ಬರೂ ಜೀವನದಲ್ಲಿ ಒಂದು ಬಾರಿಯಾದರು ರಕ್ತದಾನ ಮಾಡಬೇಕು ಎಂದರು.


    ಕಾರ್ಯಕ್ರಮದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಸoಯೋಜಕರು ಪ್ರವೀಣ್ ಕುಮಾರ್, ಖಜಾಂಜಿಯಾದ ಮೋಹನ್ ಶೆಟ್ಟಿ ಹಾಗೂ ಡಾ. ಪಿಯೂಶ್ ಉಪಸ್ಥಿತರಿದ್ದರು.
    ಕಾರ್ಯಕ್ರಮವನ್ನು ರಾ.ಸೇ.ಯೋ ಸ್ವಯಂ ಸೇವಕಿ ಮನಿಷಾ ನಿರೂಪಿಸಿದರು ಹಾಗೂ ರಾ.ಸೇ. ಯೋಜನಾಧಿಕಾರಿ ಯತೀನ್ ಧನ್ಯವಾದ ಸಮರ್ಪಣೆ ಮಾಡಿದರು.


    ಈ ರಕ್ತದಾನ ಶಿಬಿರದಲ್ಲಿ ಸುಮಾರು 57ಯೂನಿಟ್ ಗಳಷ್ಟು ರಕ್ತದಾನವನ್ನು ಕಾಲೇಜಿನ ವಿವಿಧ ವಿಭಾಗದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮಾಡಿದರು.

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending