Friday, August 19, 2022

ಕಡಬದಲ್ಲಿ ಕಳ್ಳರ ಹಾವಳಿ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ- ನಗದು ದೋಚಿ ಪರಾರಿ..!

ಕಡಬ :ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಕಳ್ಳರ ಹಾವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸಮೀಪ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರ ತಂಡ  ಲಕ್ಷ ರೂಪಾಯಿ ಮೌಲ್ಯದ ನಗ- ನಗರನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ಗಂಡಿಬಾಗಿಲು ಮಸೀದಿ ಬಳಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕಳ್ಳತನ ವಾಗಿದ್ದು ಕಪಾಟಿನಲ್ಲಿ ಇದ್ದ 14 ಪವನ್ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ಆತೂರು ಮಸೀದಿಯಲ್ಲಿ ದಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ 11 ಗಂಟೆಯ ಹೊತ್ತಿಗೆ ಮರಳಿ ಮನೆಗೆ ಬಂದಾಗ ಘಟನೆ ತಿಳಿದು ಬಂದಿದೆ.

ಈ ಕಳ್ಳತನವಾದ ಮನೆಗೆ ಡಿವೈಎಸ್ಪಿ ಗಾನಾ ಟಿ. ಕುಮಾರ್, ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರಗೆ ಜೀವಬೆದರಿಕೆ: ಬಂಟ್ವಾಳ DYSPಗೆ ದೂರು

ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಬೋರ್ಡ್‌ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.  ಖಾಲಿದ್ ನಂದಾವರದ.ಕ ಜಿಲ್ಲಾ ವಕ್ಫ್‌ ಬೋರ್ಡ್ ಸದಸ್ಯ...