Tuesday, January 31, 2023

Udupi : ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಬಂಗಾರ ವರ್ಣದ ಅಂಜಲ್ ಮೀನು – 9,600 ರೂಪಾಯಿಗೆ ಮಾರಾಟ..!

ಉಡುಪಿಯ ಜಿಲ್ಲೆಯ ಮಲ್ಪೆಯ ಕಡಲ ತೀರದಲ್ಲಿ ಅಪರೂಪದ ಬಂಗಾರ ವರ್ಣದ ಅಂಜಲ್ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ.

ಉಡುಪಿ : ಉಡುಪಿಯ ಜಿಲ್ಲೆಯ ಮಲ್ಪೆಯ ಕಡಲ ತೀರದಲ್ಲಿ ಅಪರೂಪದ ಬಂಗಾರ ವರ್ಣದ ಅಂಜಲ್ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ.

ಸ್ವರ್ಣ ಬಣ್ಣದ ಹೊಂದಿರುವ ಈ ಅಂಜಲ್ ಮೀನು ಸುಮಾರು 16 ಕೆಜಿ ತೂಗುತ್ತದೆ.

ಮಲ್ಪೆ ಕಡಲಿನಲ್ಲಿ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬಲೆಗೆ ಈ ಮೀನು ಸಿಕ್ಕಿ ಹಾಕಿಕೊಂಡಿದೆ.

ಇನ್ನು ಈ ಮೀನು ಮಲ್ಪೆ ಬಂದರಿನಲ್ಲಿ ಕೆ.ಜಿಗೆ 600 ರೂಪಾಯಿನಂತೆ ಮಾರಾಟವಾಗಿದೆ.

ಮಲ್ಪೆಯ ನಿವಾಸಿಯಾಗಿರುವ ಸುರೇಶ್ ಎಂಬವರು ಈ ಮೀನನ್ನು ಒಟ್ಟು 9,600 ಕೊಟ್ಟು ಖರೀದಿ ಮಾಡಿದ್ದಾರೆ .

ಬಂಗಾರ ಬಣ್ಣದ ಅಂಜಲ್ ಮೀನು ಹೆಚ್ಚಾಗಿ ಅಟ್ಲಾಂಟಿಕ್ ಸರೋವರದಲ್ಲಿ ಕಂಡು ಬರುತ್ತದೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ತಜ್ಞರು ಪ್ರಾಕೃತಿಕ ವೈಚಿತ್ರದಿಂದಾಗಿ ಇಲ್ಲವೇ ಆನುವಂಶಿಕದಿಂದಾಗಿಯೂ ಮೀನಿಗೆ ಬಂಗಾರದ ಬಣ್ಣ ಬರಲು ಸಾಧ್ಯವಿದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...