Connect with us

    DAKSHINA KANNADA

    Mangaluru: ಬಸ್‌ನಲ್ಲಿ 1.60 ಲಕ್ಷ ಮೌಲ್ಯದ ಚಿನ್ನದ ಚೈನ್ ಕಳವು..!

    Published

    on

    ಪುತ್ತೂರು: ಮಂಗಳೂರಿನ ಚಿನ್ನದ ಮಳಿಗೆಯಲ್ಲಿ ಚಿನ್ನ ಖರೀದಿಸಿ ಊರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಚಿನ್ನವನ್ನು ಬಸ್‌ ನಲ್ಲಿ ಲಪಟಾಯಿಸಿದ ಘಟನೆ ನಡೆದಿದೆ.

    ಇಂದು ಮಂಗಳೂರಿನಲ್ಲಿ ಚಿನ್ನ ಖರೀದಿಸಿ ಬಿಜೈ ಬಸ್ ನಿಲ್ದಾಣದಿಂದ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ಜಯರಾಮ ಭಟ್‌ ಎಂಬವರ ಚಿನ್ನ ಬಸ್‌ನಲ್ಲೇ ಕಳವಾಗಿದೆ. ಬಿಜೈ ಬಸ್ ನಿಲ್ದಾಣದಿಂದ ಹೊರಟ ಬಸ್‌ ನಗರದ ಬಂಟ್ಸ್‌ ಹಾಸ್ಟೆಲ್ ಬಳಿ ತಲುಪಿದಾಗ ಜನರಿಂದ ಭರ್ತಿಯಾಗಿತ್ತು. ಈ ವೇಳೆ ಚಿನ್ನ ಕಳೆದುಕೊಂಡಿರುವ ಜಯಾರಮ ಭಟ್‌ ಅವರ ಪಕ್ಕದಲ್ಲಿ ಕುಳಿತಿದ್ದ ಅಪರಿಚಿತ ಮಹಿಳೆ ತನ್ನ ಕೈಲಿದ್ದ ಚಿಲ್ಲರೆ ಹಣವನ್ನು ಕೆಳಗೆ ಬೀಳಿಸಿದ್ದಾಳೆ. ಈ ವೇಳೆ ಚಿಲ್ಲರೆ ಎತ್ತಿಕೊಳ್ಳುವ ನೆಪದಲ್ಲಿ ಮಗುವಿನ ಸಹಿತ ಜಯರಾಮ ಭಟ್‌ ಅವರ ಬ್ಯಾಗ್ ಮೇಲೆ ಬಿದ್ದಿದ್ದಾಳೆ. ಇದಾಗಿ ನೆಕ್ಸ್ಟ್‌ ಸ್ಟಾಪ್‌ ಜ್ಯೋತಿಯಲ್ಲಿ ಮತ್ತೊರ್ವ ಮಹಿಳೆಯ ಜೊತೆ ಬಸ್‌ನಿಂದ ಇಳಿದು ಹೋಗಿದ್ದಾಳೆ. ಆದರೆ ಇದ್ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಜಯರಾಮ ಭಟ್‌ ಅವರು ಮನೆಗೆ ಹೋಗಿ ಬ್ಯಾಗ್ ನೋಡಿದಾಗಲೇ ಬ್ಯಾಗ್‌ನಿಂದ ಚಿನ್ನ ಎಗರಿಸಿದ ವಿಷಯ ಅರಿವಾಗಿದೆ. ಜಯರಾಮ ಭಟ್ ಅವರು ಮಂಗಳೂರಿನಲ್ಲಿ 13.970 ಗ್ರಾಂ ತೂಕದ 1.60 ಲಕ್ಷ ಮೌಲ್ಯದ ಚಿನ್ನದ ಚೈನ್ ಖರೀದಿ ಮಾಡಿ ಬಸ್ ಹತ್ತಿದ್ದರು. ತನ್ನ ಪಕ್ಕದಲ್ಲಿ ಮಗುವನ್ನು ಹಿಡಿದು ಕುಳಿತಿದ್ದ ಮಹಿಳೆಯೇ ಚೈನ್ ಎಗರಿಸಿರಬೇಕು ಎಂದು ಶಂಕೆ ವ್ಯಕ್ತವಾಗಿದ್ದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending