Connect with us

LATEST NEWS

ಉಳ್ಳಾಲ: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ- ಓರ್ವನ ಬಂಧನ

Published

on

ಉಳ್ಳಾಲ: ಮನೆಯೊಳಕ್ಕೆ ನುಗ್ಗಿ ಚಿನ್ನಾಭರಣಗಳನ್ನು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.


ಮಹಮ್ಮದ್ ಕಬೀರ್ ತಸ್ಲಿಂ ಯಾನೆ ತಚ್ಚಿ (25) ಬಂಧಿತ ಆರೋಪಿ.
ಘಟನೆ ವಿವರ
ಮೇ.15 ರಂದು ಮುನ್ನೂರು ಗ್ರಾಮದ ಮದನಿ ನಗರ ನಿವಾಸಿ ರಶೀದ್ ಎಂಬವರ ಮನೆಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಮಕ್ಕಳ ಚಿನ್ನದ ಸರ-1, ಬ್ರಾಸ್ ಲೈಟ್ -1,  ಉಂಗುರ-1 ಇವುಗಳನ್ನು ಕಳವುಗೈದಿದ್ದರು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ವಿರುದ್ಧ 14 ಪ್ರಕರಣ
ಆರೋಪಿ ಮಹಮ್ಮದ್ ಕಬೀರ್ ತಸ್ಲಿಂ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 14 ಪ್ರಕರಣಗಳಿವೆ. ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಇದೀಗ 5 ಪ್ರಕರಣಗಳಿಗೆ ಸಂಬಂಧಿಸಿ ಈತನ ವಿರುದ್ಧ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು.

ಆರೋಪಿ ತೊಕ್ಕೊಟ್ಟು ರಿಕ್ಷಾ ನಿಲ್ದಾಣದ ಬಳಿಯಿರುವ ಬಗ್ಗೆ ಉಳ್ಳಾಲ ಠಾಣಾ ಉಪನಿರೀಕ್ಷಕ ಶಿವಕುಮಾರ ಕೆ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಆರೋಪಿ ತಸ್ಲಿಂ ನನ್ನು ವಶಕ್ಕೆ ಪಡೆಯಲಾಗಿತ್ತು. ಠಾಣೆಯಲ್ಲಿ ನಡೆದ ವಿಚಾರಣೆ ವೇಳೆ ಮನೆಯಿಂದ ಕಳವು ನಡೆಸಿರುವ ವಿಚಾರವೂ ಬೆಳಕಿಗೆ ಬಂದಿದೆ.
ಪತ್ತೆ ಕಾರ್ಯದಲ್ಲಿ ಇನ್ಸ್ ಪೆಕ್ಟರ್ ಸಂದೀಪ್ ಜಿ.ಎಸ್, ಎಸ್.ಐ ಪ್ರದೀಪ್ ಟಿ.ಆರ್, ಶಿವಕುಮಾರ್ ಕೆ, ರೇವಣ್ಣ ಸಿದ್ದಪ್ಪ, ಎ.ಎಸ್.ಐ  ಶೇಖರ್ ಗಟ್ಟಿ ಮತ್ತು ಸಿಬ್ಬಂದಿ ಪ್ರವೀಣ್ ಶೆಟ್ಟಿ, ರಂಜಿತ್ ಕುಮಾರ್, ಅಕ್ಬರ್ ಯಡ್ರಾಮಿ,ಚಿದಾನಂದ ಮತ್ತು ಸತೀಶ್ ಪಾಲ್ಗೊಂಡಿದ್ದರು.

DAKSHINA KANNADA

ಕರಾವಳಿ ಉತ್ಸವ : ಸಂಗೀತ ರಸಮಂಜರಿ, ಮುಖ್ಯಮಂತ್ರಿ ಆಗಮನ

Published

on

ಮಂಗಳೂರು : ಕರಾವಳಿ ಉತ್ಸವ ವಸ್ತುಪ್ರದರ್ಶನ ವೇದಿಕೆಯಲ್ಲಿ ಇಂದು (ಜ.16) ಸಂಜೆ 6 ಗಂಟೆಯಿಂದ ಸ್ಟಾರ್ ಸಿಂಗರ್ಸ್,ಮಂಗಳೂರು ತುಳು ಚಲನಚಿತ್ರ ಕಲಾವಿದರಿಂದ ‘ಸಂಗೀತ ರಸಮಂಜರಿ’ ಕಾರ್ಯಕ್ರಮ ನೆರವೇರಲಿದೆ.

ಮುಖ್ಯಮಂತ್ರಿ ಪ್ರವಾಸ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 11:30 – ಮಂಗಳೂರು ವಿಮಾನ ನಿಲ್ದಾಣ ಆಗಂಇಸಲಿದ್ದಾರೆ. ನಂತರ ಮೇರಿಹಿಲ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ ಭೇಟಿ ನೀಡಲಿದ್ದು, ಮಧ್ಯಾಹ್ನ 12:15 – ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ – ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟನೆ ಮಾಡಲಿದ್ದಾರೆ.

 

ಇದನ್ನೂ ಓದಿ : ನಾಗಾಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸತ್ಯಾಂಶಗಳು : ಭಾಗ – 2

 

ಸಂಜೆ 5 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ ಮಾಡಿ, ರಾತ್ರಿ 8 ಗಂಟೆಗೆ ವಿಮಾನದ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Continue Reading

LATEST NEWS

ಬಾಲಿವುಡ್‌ ನಟ ಸುದೀಪ್ ಪಾಂಡೆ ವಿಧಿವಶ

Published

on

ಮಂಗಳೂರು/ಮುಂಬಯಿ : ಭೋಜ್‌ಪುರಿ ಚಿತ್ರರಂಗದ ನಟ ಸುದೀಪ್‌ ಪಾಂಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದೀಪ್‌ ಪಾಂಡೆ ತೀವ್ರ ಎದೆನೋವಿನಿಂದ ಬಳಲಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸುದೀಪ್‌ ಪಾಂಡೆ ಭೋಜಪುರಿ ಸಿನಿಮಾರಂಗ ಮಾತ್ರವಲ್ಲದೇ, ಹಿಂದಿ ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ನಟನಾಗಿ, ನಿರ್ದೇಶಕರಾಗಿ ಕೂಡಾ ಕೆಲಸ ಮಾಡಿದ್ದಾರೆ.

ಖೂನಿದಂಗಲ್‌, ಭೋಜ್‌ಪುರಿ ಭಯ್ಯಾ, ಬಹಿನಿಯಾ ಸೇರಿ ಹಲವು ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ಸಿನಿ ರಂಗಕ್ಕೆ ಎಂಟ್ರಿ ನೀಡುವ ಮೊದಲು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.

Continue Reading

LATEST NEWS

ಗುರು ಗೋಪನ್ ಸ್ವಾಮಿಯ ಸಮಾಧಿ ತೆರೆಯಲು ಹೈಕೋರ್ಟ್ ಅಸ್ತು

Published

on

ಮಂಗಳೂರು/ತಿರುವನಂತಪುರ : ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿದೆ.

ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು. ಗೋಪನ್ ಸ್ವಾಮಿಗಳ ಮಕ್ಕಳಾದ ಸನಂದನ್ ಮತ್ತು ರಾಜಸೇನನ್ ಅವರು ಸ್ಥಳೀಯ ಸಮುದಾಯ ಅಥವಾ ಸಂಬಂಧಿಕರಿಗೆ ತಿಳಿಸದೆ ತಮ್ಮ ತಂದೆಯನ್ನು ನೆಯ್ಯಟಿಂಕರಾದ ದೇವಸ್ಥಾನದ ಬಳಿ ಸಮಾಧಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿತ್ತು.

ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ

ಈ ಬಗ್ಗೆ ಗೋಪನ್ ಅವರ ಮಕ್ಕಳು, ‘ತಮ್ಮ ತಂದೆ ಕುಳಿತ ಭಂಗಿಯಲ್ಲಿ ಧ್ಯಾನ ಮಾಡುತ್ತಿದ್ದಾಗ ನಿಧನರಾದರು ಮತ್ತು ಅವರ ಸಾವಿಗೆ ಯಾರಿಗೂ ಕೂಡ ಅವಕಾಶ ನೀಡದಂತೆ ಸೂಚನೆ ನೀಡಿದ್ದರು’ ಎಂದು ಹೇಳಿದ್ದಾರೆ. ನಂತರ ಗೋಪನ್ ಅವರ ಸಮಾಧಿಯ ಕುರಿತ ಪೋಸ್ಟರ್ ಗಳನ್ನು ಕುಟುಂಬದವರು ಹಾಕಿದ್ದರು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.

ಹಾಗಾಗಿ ಕಂದಾಯ ಅಧಿಕಾರಿಯ ಆದೇಶ ಪತ್ರದೊಂದಿಗೆ ಪೊಲೀಸರು ತಪಾಸಣೆಗೆ ಮುಂದದಾಗ ಕುಟುಂಬವು ಆಕ್ಷೇಪ ವ್ಯಕ್ತಪಡಿಸಿತ್ತು. ಕೆಲವು ಹಿಂದೂ ಸಂಘಟನೆಗೆಳೂ ಕುಟುಂಬದ ಪರ ನಿಂತಿದ್ದವು.
ಜತೆಗೆ ಪೊಲೀಸರು ತಪಾಸಣೆಗೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಮಾಧಿ ತೆರೆಯಲು ಪೊಲೀಸರಿಗೆ ಅನುಮತಿ ನೀಡಿದೆ.

Continue Reading

LATEST NEWS

Trending

Exit mobile version