ಬೆಂಗಳೂರು: ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಸಿಕ್ಕ ಕೂಡಲೇ ಕಸ್ಟಮ್ಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು.
ಈ ಸಂದರ್ಭ ಇಬ್ಬರು ಪ್ರಯಾಣಿಕರು ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ 1 ಕೋಟಿ 44 ಲಕ್ಷ ಮೌಲ್ಯದ 2 ಕೆ.ಜಿ 84 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.ಸೊಂಟ, ಒಳ ಉಡುಪಿನಲ್ಲಿ 1.44 ಕೋಟಿ ಮೌಲ್ಯದ ಚಿನ್ನಸೊಂಟ, ಒಳ ಉಡುಪಿನಲ್ಲಿ 1.44 ಕೋಟಿ ಮೌಲ್ಯದ ಚಿನ್ನಕಿಡಿಗೇಡಿಗಳು
ವಿವಿಧ ರೀತಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಪ್ರಯತ್ನಿಸುತ್ತಲೇ ಇದ್ದು, ಕಸ್ಟಮ್ಸ್ ಅಧಿಕಾರಿಗಳು ಆ ಪ್ರಯತ್ನಗಳನ್ನು ವಿಫಲಗೊಳಿಸಿ ಬಿಸಿ ಮುಟ್ಟಿಸುವ ಕಾರ್ಯದಲ್ಲಿ ಯಶಸ್ವಿಯಾಗುತ್ತಲೇ ಇದ್ದಾರೆ.